Yuvavahini

SEP 01, 2018 4.30 PM IST

ಯುವವಾಹಿನಿ ಸಸಿಹಿತ್ಲು ಘಟಕದಿಂದ ಕೃಷ್ಣ ವೇಷ ಸ್ಪರ್ಧೆ

ಕ್ರಿಯಾಶೀಲ ಮನಸುಗಳಿಂದ ಕ್ರಿಯಾಶೀಲ ಕಲ್ಪನೆಗಳ ಸ್ರಷ್ಟಿ : ಜಯಂತ್ ನಡುಬೈಲ್

ಸಸಿಹಿತ್ಲು : ಕ್ರೀಯಾಶೀಲ ಮನಸುಗಳು ಇದ್ದಾಗ ಕ್ರೀಯಾತ್ಮಕ ಕಲ್ಪನೆಗಳು ಹುಟ್ಟಿಕೊಳ್ಳುತ್ತದೆ, ಮಾಡುವ ಕೆಲಸದಲ್ಲಿ ಬದ್ದತೆ ಇದ್ದಾಗ ಲಭಿಸುವ ಫಲಿತಾಂಶವೂ ಫಲಪ್ರದವಾಗಿರುತ್ತದೆ ಇದಕ್ಕೆ ಯುವವಾಹಿನಿ ಸಸಿಹಿತ್ಲು ಘಟಕ ಹಮ್ಮಿಕೊಂಡಿರುವ ಶ್ರೀಕೃಷ್ಣ ವೇಷ ಸ್ಪರ್ಧೆಯೇ ಸಾಕ್ಷಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು.

ಅವರು, ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 01.09.2018 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಮತ್ತು ಲಯನ್ಸ್-ಲಯನೆಸ್ ಕ್ಲಬ್ ಮಂಗಳಾದೇವಿ ಇವರ ಸಹಕಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಶ್ರೀಕೃಷ್ಣ ವೇಷ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಚಿನ್ನದ ಉಂಗುರ ಪ್ರದಾನಿಸಿ ಮಾತನಾಡಿದರು.

ಮಕ್ಕಳು ದೇವ ಸ್ವರೂಪಿಗಳು ಅವರಲ್ಲಿ ಆನಂದವನ್ನು ಉಂಟುಮಾಡಬೇಕು ಏಕೆಂದರೆ ಮಕ್ಕಳು ಕ್ರೀಯಾಶೀಲರಾದಷ್ಟು ಚುರುಕುಗೊಳ್ಳುತ್ತಾರೆ, ಮಕ್ಕಳಿಗಾಗಿ ಹೆಚ್ಚುಹೆಚ್ಚು ಅವಕಾಶಗಳನ್ನು ಸೃಷ್ಠಿಸಿ ನೀಡೋಣ ಎಂದರು. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಇದರ ಅಧ್ಯಕ್ಷರಾದ ಪ್ರಕಾಶ್ ಕುಮಾರ್ ಬಿ.ಎನ್ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಯುವವಾಹಿನಿ ಸಸಿಹಿತ್ಲು ಘಟಕದ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.
ಲಯನ್ಸ್ ವಲಯ 1 ರ ವಲಯಾಧ್ಯಕ್ಷ ಅನಿಲ್ ಕುಮಾರ್, ಲಯನ್ಸ್ ಕ್ಲಬ್ ಮಂಗಳಾದೇವಿ ಇದರ ಅಧ್ಯಕ್ಷರಾದ ಯಶವಂತ್ ಪೂಜಾರಿ, ಲಯನೆಸ್ ಅಧ್ಯಕ್ಷೆ ಕುಶಲಾಕ್ಷಿ, ಯುವವಾಹಿನಿ ಸಸಿಹಿತ್ಲು ಘಟಕದ ಸಲಹೆಗಾರರಾದ ಲಕ್ಷ್ಮಣ್ ಸಾಲ್ಯಾನ್, ನಾರಾಯಣ ಗುರು ಮಹಿಳಾ ಮಂಡಳಿ ಅಧ್ಯಕ್ಷೆ ಶುಭಾ, ಧನ್‍ರಾಜ್ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು. ಯುವವಾಹಿನಿ ಸಸಿಹಿತ್ಲು ಘಟಕದ ಅಧ್ಯಕ್ಷ ಮಧು ಬಂಗೇರಾ ಅಧ್ಯಕ್ಷತೆ ವಹಿಸಿದ್ದರು. ನರೇಶ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ವೀಣಾ ವಂದಿಸಿದರು, ಶೈಲೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!