ಕಂಕನಾಡಿ : ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದೊಂದಿಗೆ ದಿನಾಂಕ 16-9-2018 ರಂದು ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಜರುಗಿತು.
ಸುಮಾರು 100ಕ್ಕೂ ಅಧಿಕ ಮಂದಿ ಈ ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಶಿಬಿರವನ್ನು ಕಿಟೆಲ್ ಮೆಮೋರಿಯಲ್ ಶಾಲೆಯ ಶಿಕ್ಷಕರಾದ ರಘನಾಥ ಭಟ್ ರವರು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಯೆನೆಪೋಯ ದಂತ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಭರತ್, ಸಮಾಜ ಸೇವಾ ವಿಭಾಗದ ಮುಖ್ಯಸ್ಥರಾದ ದಿವ್ಯಾ ಹಾಗೂ ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ಇವರು ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷರಾದ ಭವಿತ್ ರಾಜ್ಸ್ವಾಗತಿಸಿದರು. ಸಹನಾರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಹಾಗೂ ಕಾರ್ಯಕ್ರಮ ಸಂಚಾಲಕರಾದ ರಾಹುಲ್ ಧನ್ಯವಾದ ಸಮರ್ಪಿಸಿದರು.