ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಅರ್ಹತಾ ಪರೀಕ್ಷೆಗಳ ಬಗ್ಗೆ ಕಾರ್ಯಗಾರವು ದಿನಾಂಕ ೨೧. ೦೯. ೨೦೧೮ ರಂದು ಇತ್ತೀಚೆಗೆ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಗಾರವನ್ನು ಉಧ್ಘಾಟಿಸಿದ ಲಕ್ಷ್ಮಣ ಕೋಟ್ಯಾನ್ ಪೂಜಾ ಕನ್‍ಸ್ಟ್ರಕ್ಷನ್ ಮೇರಿಹಿಲ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಲಯನ್ ಯಶವಂತ್ ಪೂಜಾರಿ ಕಾರ್ಯಾಗಾರಕ್ಕೆ ಶುಭಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ ಮಂಗಳೂರು ಘಟಕವು ಆಯೋಜಿಸಿದ ಕಾರ್ಯಕ್ರಮವು ಅತ್ಯುತ್ತಮವಾಗಿದೆ. ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಗುರಿಯನ್ನು ಇಟ್ಟುಕೊಂಡು ಆ ದಿಕ್ಕಿನೆಡೆಗೆ ಪ್ರಯತ್ನಿಸಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ನವೀನ್ ಚಂದ್ರ ವಹಿಸಿ ಸ್ವಾಗತಿಸಿದರು ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ರಾಜೇಶ್ ಅಮೀನ್ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಶ್ರೀ ಅಶೋಕ್ ಇಂಜಿನಿಯರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಚಾಲಕರಾದ ಜೈ ಕುಮಾರ್ ವಂದಿಸಿ, ಜಗನ್ನಾಥ್ ಶಿರ್ಲಾಲ್ ನಿರೂಪಿಸಿದರು.
ನಂತರ ಉದ್ಯಮಶೀಲತೆ ವಿಷಯದ ಬಗ್ಗೆ ಪ್ರದೀಪ್ ರಾಜ್, ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಉದ್ಯೋಗವಕಾಶದ ಬಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕರಾದ ಸುಮನ ಮತ್ತು ಅರ್ಹತಾ ಪರೀಕ್ಷೆ ಬಗ್ಗೆ ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಮಿಥುನ್ ಉಳ್ಳಾಲ್ ತರಬೇತಿ ನೀಡಿದರು. ಸಮನ್ವಯಕಾರರಾಗಿ ಅಲೋಶಿಯಸ್ ಕಾಲೇಜಿನ ಸಹಪ್ರಾದ್ಯಾಪಕರಾದ ರಾಕೇಶ್ ಕುಮಾರ್, ಮತ್ತು ರಥಬೀದಿ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಶೇಷಪ್ಪ ಅಮೀನ್ ಹಾಗೂ ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಪದ್ಮನಾಭ.ಬಿ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಾಗಾರದಲ್ಲಿ ಸುಮಾರು 70 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಸಸಿಹಿತ್ಲು ಸಮಾರೋಪ ಭಾಷಣ ಮಾಡಿದರು. ಯುವಜನ ಸೇವಾಸಮಿತಿ ಕಾರ್ಯದರ್ಶಿ ಗಣೇಶ್.ವಿ. ಯುವರು ವಂದನಾರ್ಪಣೆ ಸಲ್ಲಿಸಿದರು
Good msg to all