Yuvavahini

SEP 27, 2018 12.51 PM IST

ಹಿರಿಯ ಸಾಹಿತಿ, ಸಂಘಟಕ, ಯುವವಾಹಿನಿ ಸಲಹೆಗಾರ ಬಿ.ತಮ್ಮಯ ಅವರಿಗೆ ಚಾವಡಿ ತಮ್ಮನ

ತಮ್ಮಯರ ಸಾಧನೆ ಅನುಕರಣೀಯ-ಡಾ.ಏರ್ಯ

ಮಂಗಳೂರು : ಹಿರಿಯ ಸಾಹಿತಿ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ಸನ್ಮಾನಿಸಿ ಮಾತನಾಡಿ, ಬಿ.ತಮ್ಮಯ ಅವರು ಸಾಹಿತಿ, ಸಂಘಟಕರರಾಗಿ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ಜತೆಯಲ್ಲಿ ಅವರು ಅಪ್ಪಟ ಮಾನವತಾವಾದಿಯಾಗಿ ಪ್ರೀತಿ, ಭಾಂದವ್ಯದ ಸಮಾಜ ಕಟ್ಟುವಲ್ಲಿಯೂ ಶ್ರಮಿಸಿದವರು. ಈ ಇಳಿವಯಸ್ಸಿನಲ್ಲೂ ಸಾಹಿತ್ಯ, ಸಂಸ್ಕೃತಿ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಸೇವೆ ಅನುಕರಣೀಯವಾದುದು ಎಂದರು.

ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ವತಿಯಿಂದ ತುಳು ವಿದ್ವಾಂಸರು, ಸಂಶೋಧಕರು, ಸಾಹಿತಿಗಳು, ಕಲಾವಿದರು, ಸಂಘಟಕರನ್ನು ಗುರುತಿಸಿ “ಚಾವಡಿ ತಮ್ಮನ” ಮಾಡಿ ಗೌರವಿಸುವ ಕಾರ್‍ಯವನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ಅರ್ಹವಾಗಿಯೇ ಬಿ.ತಮ್ಮಯ ಅವರು ಆಯ್ಕೆಯಾಗಿದ್ದು ಸಾಹಿತ್ಯ ಕ್ಷೇತ್ರದ ಸೇವೆಯ ಜತೆಗೆ ತುಳು ಲಿಪಿಯ ಶಿಕ್ಷಕರಾಗಿಯೂ ತುಳು ಭಾಷಾ ಬೆಳವಣಿಗೆಗೆ ಅವರು ನೀಡಿದ ಸೇವೆ ಮಾದರಿಯಾದುದು ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಟಿ.ಹೆಬ್ಬಾರ್ ಬಿ.ತಮ್ಮಯರ ಬಗ್ಗೆ ಅಭಿನಂದನಾ ಭಾಷಣ ಮಾಡಿದರು. ತಮ್ಮಯ ಅವರದು ಸದಾ ಕ್ರಿಯಾಶೀಲ ವ್ಯಕ್ತಿತ್ವ. ವೃತ್ತಿ ಬದುಕಿನ ನಡುವೆಯೇ ಸಾಹಿತ್ಯ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಅವರು ನಿವೃತ್ತಿಯ ನಂತರವೂ ಸೃಜನಾಶೀಲ ಚಟುವಟಿಕೆಯೊಂದಿಗೆ ಜನಮಾನಸದ ಪ್ರೀತಿ ಗೌರವಾದರಗಳಿಗೆ ಪಾತ್ರರಾದವರು ಎಂದರು.

ಕಾರ್‍ಯಕ್ರಮದ ಸದಸ್ಯ ಸಂಚಾಲಕ ಎ.ಗೋಪಾಲ ಅಂಚನ್ ಸ್ವಾಗತಿಸಿದರು. ಅಕಾಡೆಮಿ ಸದಸ್ಯರಾದ ತಾರಾನಾಥ ಗಟ್ಟಿ ಕಾಪಿಕಾಡು ನಿರೂಪಿಸಿ ಸುಧಾ ನಾಗೇಶ್ ವಂದಿಸಿದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ., ಸದಸ್ಯರಾದ ಡಾ.ವಾಸುದೇವ ಬೆಳ್ಳೆ, ಶಿವಾನಂದ ಕರ್ಕೆರಾ, ಬೆನೆಟ್ ಅಮ್ಮಣ್ಣ, ವಿಜಯಾ ಶೆಟ್ಟಿ ಸಾಲೆತ್ತೂರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಜೀವನದಲ್ಲೇ ನಾಟಕ, ಯಕ್ಷಗಾನ, ತಾಳಮದ್ದಳೆ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಬಿ.ತಮ್ಮಯ ಅವರು ನಾನಾ ಕಡೆಗಳಲ್ಲಿ ಸಂಘಟನೆಗಳನ್ನು ಸ್ಥಾಪಿಸಿ ತುಳು ನಾಟಕಗಳನ್ನು ಬರೆದು ನಟಿಸಿ ನಿರ್ದೇಶಿಸಿ ಪ್ರದರ್ಶಿಸಿದವರು. ಕಂದಾಯ ಇಲಾಖೆಯಲ್ಲಿ ವೃತ್ತಿ ಬದುಕಿನ ನಡುವೆಯೇ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡ ಇವರು ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಕಾರ್‍ಯದರ್ಶಿಯಾಗಿ- ಅಧ್ಯಕ್ಷರಾಗಿ, ಯುವವಾಹಿನಿಯ ಸಲಹೆಗಾರರಾಗಿ, ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿ ಉಪಾಧ್ಯಕ್ಷರಾಗಿ, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಪ್ರಸ್ತುತ “ತುಳುವೆ” ತುಳುಲಿಪಿ ಪತ್ರಿಕೆಯ ಸಂಪಾದಕರಾಗಿ, ಬಂಟ್ವಾಳ ಪಿಂಚಣಿದಾರರ ಸಂಘದ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್‌ನ ಗೌರವ ಕಾರ್‍ಯದರ್ಶಿಯಾಗಿರುವ ಇವರು ಹಣತೆ, ನಾರಾಯಣ ಗುರು ಭಜನೆ, ಚಿಂತನ ಮಂಥನ, ಹಿಂದಿರುಗಿ ನೋಡಿದಾಗ, ಕರಿಕೋಟು, ಕಾಡಿನ ಹಕ್ಕಿ ಹಾಡಿತು, ತಟಪಟ ಹನಿ, ತುಳುವೆರೆ ಪರ್ಬ, ತುಳು ಲಿಪಿ ಕಲ್ಪಿ-ತುಳು ಮೊದಲಾದ ಕೃತಿಗಳನ್ನು ಬರೆದು ಪ್ರಕಟಿಸಿದ್ದಾರೆ. ಹಲವಾರು ಶಾಲಾ ಕಾಲೇಜು ಮತ್ತು ಸಂಘಟನೆಗಳಲ್ಲಿ ಹಲವಾರು ವರ್ಷಗಳಿಂದ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತುಳು ಲಿಪಿ ಕಲಿಸುವ ಮೂಲಕ “ತುಳು ಮಾಸ್ತರ್” ಎನಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!