ಬಂಟ್ವಾಳ : ಕಥೆ, ಕಾದಂಬರಿಕಾರರಾಗಿ, ನಟ ನಿರ್ದೇಶಕರಾಗಿ, ಪತ್ರಕರ್ತರಾಗಿ ರಾಜಕಾರಣಿಯಾಗಿ ತಮ್ಮ ಐದು ದಶಕಗಳ ಬದುಕಿನಲ್ಲಿ ಬಹುಮುಖ ಪ್ರತಿಭೆಯಿಂದ ಕನ್ನಡ ಮತ್ತು ತುಳು ಭಾಷೆಗಳೆರಡರಲ್ಲೂ ಕಲಾಸೇವೆ ಮಾಡಿ ಸಂದುಹೋದ ಸಾಹಿತಿ ವಿಶುಕುಮಾರ್ ರವರ ಬದುಕು ನಮಗೆ ಸದಾ ಅನುಕರಣೀಯ . ಅವರ ಕೃತಿಗಳನ್ನು ಸಾರಸ್ವತ ಲೋಕಕ್ಕೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಟಿ.ಶಂಕರ ಸುವರ್ಣ ತಿಳಿಸಿದರು.
ಅವರು ದಿನಾಂಕ 04.11.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಜರುಗಿದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ವಿಶುಕುಮಾರ್ ವ್ಯಕ್ತಿ ಪರಿಚಯ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಟಿ.ಶಂಕರ ಸುವರ್ಣ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕ ಎಸ್.ಆರ್.ಪ್ರದೀಪ್, ಸಲಹೆಗಾರ ಬಿ.ತಮ್ಮಯ, ಅಣ್ಣು ಪೂಜಾರಿ, ಬಂಟ್ವಾಳ ಘಟಕದ ಅಧ್ಯಕ್ಷ ಶಿವಾನಂದ ಎಮ್. ಕಾರ್ಯದರ್ಶಿ ಕಿರಣ್ ರಾಜ್ ಪೂಂಜರೆಕೋಡಿ, ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸುವರ್ಣ ಅಲೆತ್ತೂರು ಮತ್ತಿತರರು ಉಪಸ್ಥಿತರಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ. ಸ್ವಾಗತಿಸಿದರು. ಯುವಸಿಂಚನ ಪತ್ರಿಕೆಯ ಸಂಪಾದಕ ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.