Yuvavahini

DEC 09, 2018 3.01 PM IST

ಯುವವಾಹಿನಿ ಅಂತರ್ ಘಟಕ‌ ರಸಪ್ರಶ್ನೆ ಮತ್ತು ಜಾನಪದ ಗೀತೆ ಸಮೂಹ ಗಾಯನ ಸ್ಪರ್ಧೆ ರಸಗೀತಾ - 2018

ಯುವವಾಹಿನಿ ಬೆಂಗಳೂರು ಹಾಗೂ ಮಂಗಳೂರು ಘಟಕಗಳಿಗೆ ಪ್ರಶಸ್ತಿ

ಬಜಪೆ‌ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ‌ ಆಶ್ರಯದಲ್ಲಿ ಯುವವಾಹಿನಿ (ರಿ.) ಬಜಪೆ‌ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ‌ ರಸಗೀತಾ – 2018 ರ ಜಾನಪದ ಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಯುವವಾಹಿನಿ ಮಂಗಳೂರು ಘಟಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಜಾನಪದ ಗೀತಾ ಗಾಯನ ಸ್ಪರ್ಧೆಯ ತೀರ್ಪುಗಾರರಾಗಿ ಉಮಾಕಾಂತ್ ನಾಯಕ್ ಮತ್ತು ಮಲ್ಲಿಕಾ ಶೆಟ್ಟಿ ಇವರು ಭಾಗವಹಿಸಿದ್ದರು. ಈ ವಿಭಾಗದಲ್ಲಿ ಒಟ್ಟು 11 ಘಟಕಗಳು ಸ್ಪರ್ಧೆಯನ್ನು ನೀಡಿದುವು. ಕನಕಾ ಮೋಹನ್ ತೀರ್ಪುಗಾರರನ್ನು ಸಭೆಗೆ ಪರಿಚಯಿಸಿ ಸ್ವಾಗತಿಸಿದರು. ಈ ಸ್ಪರ್ಧಾ ಕಾರ್ಯಕ್ರಮದ ಉದ್ಘೋಷಣೆಯನ್ನು ನಿರ್ಮಲಾ ಗೋಪಾಲ್ ಮತ್ತು ಗೋಪಾಲಕೃಷ್ಣ ಕೆ. ಇವರು ನಡೆಸಿಕೊಟ್ಟರು. ಕಾರ್ಯಕ್ರಮದ ಬಳಿಕ ವಿವಿಧ ಘಟಕಗಳ ಪ್ರತಿಭೆಗಳಿಂದ ರಸಗಾನ ನಡೆಯಿತು.

ಅಪರಾಹ್ನದ‌ ಬಳಿಕ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಬೆಳಿಗ್ಗೆ ರಸಪ್ರಶ್ನೆಯ 13 ತಂಡಗಳಿಗೆ ಪ್ರಾಥಮಿಕ ಸುತ್ತು ಲಿಖಿತ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ ಅತೀ ಹೆಚ್ಚು ಅಂಕಗಳಿಸಿದ 5 ತಂಡಗಳಾದ ಮಂಗಳೂರು ಘಟಕ, ಮೂಡಬಿದ್ರೆ ಘಟಕ, ಯೆಡ್ತಾಡಿ ಘಟಕ, ಉಪ್ಪಿನಂಗಡಿ ಘಟಕ, ಎಕ್ಕಾರು-ಪೆರ್ಮುದೆ ಘಟಕಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿ ಬಳಿಗ ಜರುಗಿದ ಮೌಖಿಕ ಪ್ರಶ್ನಾವಳಿ ಸ್ಪರ್ಧೆಯಲ್ಲಿ ಮಂಗಳೂರು ಘಟಕ ಪ್ರಥಮ, ಉಪ್ಪಿನಂಗಡಿ ಘಟಕ ದ್ವಿತೀಯ, ಯಡ್ತಾಡಿ ಘಟಕ ತೃತೀಯ ಸ್ಥಾನ ತಮ್ಮದಾಗಿಸಿಕೊಂಡರು. ಸ್ಪರ್ಧಾ ಕಾರ್ಯಕ್ರಮವನ್ನು ವಿಶ್ವನಾಥ ಪೂಜಾರಿ ರೆಂಜಾಳ ಇವರು ನಡೆಸಿಕೊಟ್ಟರು. ‌ಮಾಧವ ಸಾಲ್ಯಾನ್ ಮತ್ತು ವಿನೀತ್ ಪೂಜಾರಿ ಸಹಕರಿಸಿದರು.

ವಿಜೇತರ ಪಟ್ಟಿ.

ಜಾನಪದ ಗೀತಾ ಸಮೂಹ ಗಾಯನ :
ಪ್ರಥಮ: ಬೆಂಗಳೂರು ಘಟಕ
ದ್ವಿತೀಯ: ಕೊಲ್ಯ ಘಟಕ
ತೃತೀಯ: ಪಡುಬಿದ್ರೆ ಘಟಕ

ರಸಪ್ರಶ್ನೆ ಸ್ಪರ್ಧೆ :
ಪ್ರಥಮ: ಮಂಗಳೂರು ಘಟಕ
ದ್ವಿತೀಯ: ಉಪ್ಪಿನಂಗಡಿ ಘಟಕ
ತೃತೀಯ: ಯಡ್ತಾಡಿ ಘಟಕ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!