Yuvavahini

DEC 09, 2018 3.38 PM IST

ಸಂಘ ಸಂಸ್ಥೆಗಳಿಂದ ಮಾನವೀಯ ಕಾರ್ಯ ಅಗತ್ಯ: ವಸಂತ ಬಂಗೇರ

ಬೆಳ್ತಂಗಡಿ :ಸಂಘ ಸಂಸ್ಥೆಗಳ ಹಿಂದೆ ಮಹತ್ತರವಾದ ಮಾನವೀಯ ಕಾರ್ಯಗಳಿಂದ ಅಂತಹ ಸಾಮಾಜಿಕ ಸಂಘಟನೆಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ. ಅಂತಹ ಕಾರ್ಯಗಳನ್ನು ಯುವವಾಹಿನಿ ಸಂಘಟನೆ ಮಾಡುತ್ತಿರುವುದು ಶಾಘ್ಲನೀಯ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದರು.
ಇವರು ದಿನಾಂಕ 09.12.2018 ರಂದು ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿ ಸಹಾಯಾರ್ಥ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಕ್ರಿಕೆಟ್ ಕೂಟದ ಮೂಲಕ ಸಹಾಯ ಧನ ಸಂಗ್ರಹ ಮಾಡಿ ಬಡ ಜನರಿಗೆ ನೆರವಾಗುವ ಕಾರ್ಯ ಶಾಘ್ಲನೀಯ ಸಾಮಾಜಿಕ ಸೇವೆಯನ್ನು ಗುರಿಯಾಗಿಸಿಕೊಂಡ ಸಂಘಟನೆಗಳಿಗೆ ಸಮಾಜದಲ್ಲಿ ಹೆಚ್ಚು ಮಹತ್ವ ಮತ್ತು ಬಾಳಿಕೆ ಇದೆ ಎಂದರು .
ಶೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಮಾತನಾಡಿ ಕ್ರೀಡೆಯಿಂದ ಮನಸ್ಸು ಮತ್ತು ಆರೋಗ್ಯ ಚೆನ್ನಾಗಿರುವುದು ಅದರ ಜೊತೆಗೆ ಸಮಾಜ ಚೆನ್ನಾಗಿರಬೇಕೆಂಬ ಕಳಕಳಿಯಿಂದ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದ ಎಲ್ಲ ಸಂಘ ಸಂಸ್ಥೆಗಳಿಗೆ ಮಾದರಿ ಎಂದರು.
ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್ ಬಳಂಜ ಮಾತನಾಡಿ ಯುವವಾಹಿನಿ ಸಮಸ್ತ ಯುವ ಸಮಾಜಕ್ಕೆ ಸಮಾಜಕ್ಕೆ ಮಾದರಿಯಾದದ್ದು ಶಿಕ್ಷಣಕ್ಕೆ ಒತ್ತು ನೀಡುವ ಜತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯ ವಾಹಿನಿಗೆ ತರುವಲ್ಲಿ ಯುವವಾಹಿನಿ ಹಮ್ಮಿಕೊಳ್ಳುತ್ತಿರುವ ಕಾರ್ಯಗಳು ಎಲ್ಲರಿಗೂ ಆದರ್ಶವಾದುದು ಎಂದರು.
ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಪ್ರಶಾಂತ್ ಮಚ್ಚಿನ ಅಧ್ಯಕ್ಷತೆ ವಹಿಸಿದ್ದರು. ಹೊಟೇಲ್ ಉದ್ಯಮಿ ರವಿ ದೇಸಿಂಕೋಡಿ ವೇದಿಕೆಯಲ್ಲಿದ್ದರು. ಶಶಿಧರ್ ಆದೇಲು ವಂದಿಸಿದರು. ನಿರ್ದೇಶಕ ಅಶ್ವತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!