ಬೆಳ್ತಂಗಡಿ : ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಅಶಕ್ತರಿಗೆ ಸಂಜೀವಿನಿಯಾಗಿ.ಇಂತಹ ಕ್ರೀಡಾಕೂಟದ ಮೂಲಕ ನೊಂದವರಿಗೆ ನೆರವನ್ನು ನೀಡುತ್ತಾ ನುಡಿದಂತೆ ನಡೆಯುತ್ತಿರುವ ಸಂಘಟನೆ ಅದು ಯುವವಾಹಿನಿ ಬೆಳ್ತಂಗಡಿ ಘಟಕ ಎಂದು ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭಗೀರಥ ಜಿ ಹೇಳಿದರು.
ಅವರು ದಿನಾಂಕ 16.12.2018 ರಂದು ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಶಾಸಕರಾದ ಕೆ ಪ್ರಭಾಕರ ಬಂಗೇರ ಮಾತನಾಡಿ ಸಂಘಟನೆಗಳು ಈ ರೀತಿಯ ಕೆಲಸ ಕಾರ್ಯಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷರಾದ ಪಿತಾಂಬರ ಹೇರಾಜೆ ಮಾತನಾಡಿ ಪಂದ್ಯಾಟದಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡಾಪಟುಗಳು ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿಯಿಂದ ಆಡುವುದು ಮುಖ್ಯ ಎಂದು ಹೇಳಿದರು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೈಲೇಶ್ ಕುಮಾರ್ ಕುರ್ತೊಡಿ ಮಾತನಾಡಿ ಸಂಘಟನೆಗಳು ಈ ರೀತಿಯ ಕೆಲಸ ಕಾರ್ಯಗಳ ಮೂಲಕ ಅಶಕ್ತರಿಗೆ ನೆರವನ್ನು ನೀಡುತ್ತಿರುವುದು ಅಭಿನಂದನೀಯ ಕೆಲಸ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗುರುದೇವ ಬ್ಯಾಂಕಿನ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆಂತ್ಯಾರು, ಜಿಲ್ಲಾ ಯುವಜನ ಒಕ್ಕೂಟದ ಗೌರವಅಧ್ಯಕ್ಷರಾದ ರಾಜೀವ್ ಸಾಲಿಯನ್ ಮೂಂಡುರು,ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಇಳಂತಿಲ, ಸಂದರ್ಭೋಚಿತವಾಗಿ ಮಾತನಾಡಿದರು ಘಟಕದ ಅಧ್ಯಕ್ಷ ಪ್ರಶಾಂತ್ ಮಚ್ಚಿನ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಯುವ ಕಾಂಗ್ರೆಸ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಅಭಿನಂದನ್ ಹರೀಶ್ ಕುಮಾರ್, ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷರು ಲಯನ್ಸ್ ಜಿಲ್ಲೆ 317D ನಿತ್ಯಾನಂದ ನಾವರ, ನಗರ ಪಂಚಾಯತ್ ಸದಸ್ಯರಾದ ತುಳಸಿ ಕರುಣಾಕರ್ ,ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷರಾದ ಸಂತೋಷ್ ಕುಮಾರ್ ಉಪ್ಪಾರು. ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್. ಕ್ರೀಡಾ ಸಂಚಾಲಕರಾದ ಉಮೇಶ್ ಸುವರ್ಣ ಶಿರ್ಲಾಲು, ಶಶಿಧರ್ ಅದೇಲು ಉಮಾನಾಥ್ ಕೋಟ್ಯಾನ್ ಬೆಳಾಲು, ಪವನ್ ಕುಮಾರ್ ಕಟ್ಟೆ, ರಾಕೇಶ್ ಬಂಗೇರ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಜಯರಾಜ್ ನಡಕ್ಕರ ವಂದಿಸಿ , ನಿರ್ದೇಶಕ ಅಶ್ವತ್ಥ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು