ಉಪ್ಪಿನಂಗಡಿ : ದಿನಾಂಕ 25-12-2018ನೇ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಅರೋಗ್ಯ ಶಿಬಿರ ನಡೆಯಿತು. ಇದರ ಪ್ರಯೋಜನವನ್ನು ಸುಮಾರು ನೂರೈವತ್ತಕ್ಕಿಂತಲೂ ಹೆಚ್ಚು ಜನ ಪಡೆದುಕೊಂಡರು.
ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯ ಇದರ ಮುಖ್ಯ ಗುರುಗಳಾದ ಶ್ರೀ ವೈ.ಸಾಂತಪ್ಪ ಇವರು ಉದ್ಘಾಟಿಸಿದರು ವೇದಿಕೆಯಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ ಇದರ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ, ಉಪಾಧ್ಯಕ್ಷರಾದ ಚಂದ್ರಶೇಖರ್ ಸನಿಲ್,ಸಲಹೆಗಾರರಾದ ಡಾ. ಸದಾನಂದ ಕುಂದರ್,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಧರ್ಣಪ್ಪ ಗೌಡ ,ಆಲಂತಾಯ ಒಕ್ಕೂಟದ ಅಧ್ಯಕ್ಷರಾದ ಅಶೋಕ್ ಸಿ.ಬಿ, ಹಳೇ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಂದರ, S.D.M.C ಅಧ್ಯಕ್ಷರಾದ ಪದ್ಮನಾಭ ಉಪಸ್ಥಿತರಿದ್ದರು.