Yuvavahini

DEC 15, 2018 1.37 PM IST

ಯುವವಾಹಿನಿ (ರಿ ) ಮಂಗಳೂರು ಘಟಕ ಮತ್ತು ಬಜಪೆ ಘಟಕ, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ,ಮಂಗಳೂರು ಇವರ ಅಶ್ರಯದಲ್ಲಿ

ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ

ಯುವವಾಹಿನಿ (ರಿ ) ಮಂಗಳೂರು ಘಟಕ ಮತ್ತು ಬಜಪೆ ಘಟಕದ ಜಂಟಿ ಅಶ್ರಯದಲ್ಲಿ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ,ಮಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ 15/12/18 ರಂದು ಸುಂಕದಕಟ್ಟೆ ,ಅಂಬಿಕ ಅನ್ನಪೂರ್ಣೆಶ್ವರಿ ಸಭಾಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ ನಡೆಯಿತು .
ಈ ಕಾರ್ಯಕ್ರಮವನ್ನು ಸುಂಕದಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಉದ್ಘಾಟಿಸಿ ,ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಜಿವನದಲ್ಲಿ ಮುಂದಿನ ಭವಿಷ್ಯದ ಬಗ್ಗೆ ತಮಗೆ ತೆಗೆದುಕೊಳ್ಳಬೇಕಾದ ನಿರ್ಧಾರಕ್ಕೆ ಸಹಕಾರಿಯಾಗಿದೆ ಎಂದು ಹೇಳಿದರು .ಮಂಗಳಾದೇವಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಯಶವಂತ ಪೂಜಾರಿ ಯುವವಾಹಿನಿ ಬಗ್ಗೆ ಹಾಗೂ ವಿದ್ಯಾನಿಧಿಯ ಬಗ್ಗೆ ಸಂಪೂರ್ಣವಾಗಿ ತಿಳಿಸಿದರು .ಈ ಸಂದರ್ಭದಲ್ಲಿ ಬಜಪೆ ಘಟಕದ ಅಧ್ಯಕ್ಷರಾದ ದೇವರಾಜ ಅಮಿನ್ ,ನಿರಂಜನ ಸ್ವಾಮಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅಹಲ್ಯ ,ಪ್ರೌಢ ಶಾಲೆಯ ಹಿರಿಯ ಶಿಕ್ಷಕರಾದ ವೆಂಕಟ ನಾಯ್ಕ್ ಹಾಗೂ ಮಂಗಳೂರು ಹಾಗೂ ಬಜಪೆ ಘಟಕದ ಸದಸ್ಯರು ಉಪಸ್ಥಿತರಿದ್ದರು .
ಅಭಿಜಿತ್ ಕರ್ಕೇರ ಹಾಗೂ ರಾಕೇಶ್ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರ ನಡೆಸಿಕೊಟ್ಟರು. ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ನವೀನಚಂದ್ರ ಸ್ವಾಗತಿಸಿದರು ಹಾಗೂ ಮಂಗಳೂರು ಘಟಕದ ಉದ್ಯೋಗ ಮತ್ತು ಭವಿಶ್ಯ ನಿರ್ಮಾಣ ನಿರ್ದೆಶಕ ಜೈದಿಪ್ ಧನ್ಯವಾದಗೈದರು . ಈ ಕಾರ್ಯಾಗಾರದಲ್ಲಿ ೧೬೦ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!