ವೇಣೂರು : ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆದ 9ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟದ ಪುರುಷರ ಮತ್ತು ಮಹಿಳೆಯರ ವಿಭಾಗ ದಲ್ಲಿ ಯುವವಾಹಿನಿ ವೇಣೂರು ಘಟಕವು ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದೆ.
ಮಹಿಳೆಯರ ವಿಭಾಗದ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ಪ್ರಥಮ, ತ್ರೋಬಾಲ್ನಲ್ಲಿ ದ್ವಿತೀಯ, ಪುರುಷರ ವಿಭಾಗದಲ್ಲಿ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರೂ. 13,000 ನಗದು, ಪ್ರಶಸ್ತಿ ಪಡೆದು ಕೊಂಡಿದೆ.
ಸಂಘದ ಗೌರವಾಧ್ಯಕ್ಷ, ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಪ್ರಶಸ್ತಿಗಳನ್ನು ವಿತರಿಸಿದರು.
ಬೆಳ್ತಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಉಪಾಧ್ಯಕ್ಷೆ ಸುಜೀತಾ ಬಂಗೇರ, ಕ್ರೀಡಾ ಸಮಿತಿ ಅಧ್ಯಕ್ಷ ಜಯವಿಕ್ರಮ್, ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಯುವವಾಹಿನಿ ಕೇಂದ್ರ ಸಮಿತಿ ಸಂಘಟನ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್ ಉಪ್ಪಾರು, ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ನಿತೀಶ್ ಎಚ್., ಉಪಾಧ್ಯಕ್ಷ ಅರುಣ್ ಕೋಟ್ಯಾನ್, ನವೀನ್ ಪಚ್ಚೇರಿ, ಪ್ರ. ಕಾರ್ಯದರ್ಶಿ ಸತೀಶ್ ಪಿ.ಎನ್. ಕೇಂದ್ರ ಸಮಿತಿ ಸದಸ್ಯ ಯೋಗೀಶ್ ಪೂಜಾರಿ, ನಾಗೇಶ್ ಕೋಟ್ಯಾನ್ ಹೊಸಂಗಡಿ, ರಕ್ಷಿತ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಕಳೆದ ವರ್ಷದ ಕ್ರೀಡಾಕೂಟದಲ್ಲೂ ಸರ್ವಾಕ ಪ್ರಶಸ್ತಿಯನ್ನು ವೇಣೂರು ಘಟಕ ಪಡೆದುಕೊಂಡಿತ್ತು
ಕ್ರೀಡಾ ಕೂಟ ಉತ್ತಮವಾಗಿ ಮೂಡಿ ಬಂದಿದೆ. ಅಭಿನಂದನೆಗಳು ವೇಣೂರು ಘಟಕದ ಸದಸ್ಯರಿಗೆ…