Yuvavahini

JAN 13, 2019 4.07 PM IST

ಯುವವಾಹಿನಿ (ರಿ.) ಬಜ್ಪೆ ಘಟಕದ ಪದಗ್ರಹಣ

ಬಜ್ಪೆ : ಯುವ ಜನರಲ್ಲಿ ಸ್ವಸ್ಥ ಸಮಾಜದ ಬಗೆಗಿನ ಕಾಳಜಿ, ಸಂಸ್ಕೃತಿ, ಒಳ್ಳೆಯ ಆಚಾರ ವಿಚಾರಗಳು ಹಿರಿಯರಾದ ನಾವು ಅವರಲ್ಲಿ ಸದಾ ಮೇಳೈಸುವಂತೆ ಮಾಡಬೇಕು. ವಿರುದ್ಧ ದಿಕ್ಕಿಗೆ ಮುಖ ಮಾಡಿರುವ ಮನಸ್ಸುಗಳನ್ನು ಮುಖ್ಯವಾಹಿನಿಯತ್ತ ತಿರುಗಿಸಬೇಕು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಮ್ಮ ಸಮಾಜದ ಯುವಕರ ಪಾತ್ರ ಇನ್ನಷ್ಟು ಹಿರಿದಾಗಬೇಕು. ಈ ನಿಟ್ಟಿನಲ್ಲಿ ಯುವವಾಹಿನಿಯಂತಹ ಘಟಕಗಳು ಮುಖ್ಯ ಪಾತ್ರವಹಿಸುತ್ತಿರುವುದು ಶ್ಲಾಘನೀಯ, ಇಂತಹ ಸ್ತುತ್ಯರ್ಹ ಕಾರ್ಯಗಳು ಇನ್ನೂ ಪರಿನಾಮಕಾರಿಯಾಗಲಿ ಎಂದು ನಳಿನಾದೇವಿ ಎಂ. ಆರ್. ಇವರು ದಿನಾಂಕ 13.01.2019ರಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗರು ಸಭಾ ಭವನದಲ್ಲಿ ಜರುಗಿದ ಯುವವಾಹಿನಿ (ರಿ.) ಬಜ್ಪೆ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ‌ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುತ್ತಾ ನುಡಿದರು.

ಇದೇ ಸಂದರ್ಭದಲ್ಲಿ ವೀರ ಯೋಧ ಶ್ರೀ ಅಶೋಕ್ ಕುಮಾರ್ ಕುಪ್ಪೆಪದವು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನ ಪೂರ್ವಕವಾಗಿ ಮಾತನಾಡಿದ ಶ್ರೀಯುತರು, ಯುವ ಸಮುದಾಯ ದೇಶ ರಕ್ಷಣೆಯತ್ತ ಹೆಚ್ಚು ಆಕರ್ಷಿತರಾಗಬೇಕು ಎನ್ನುತ್ತಾ ಯೋಧನಾದ ತನ್ನನ್ನು ಸನ್ಮಾನಿಸಿದಕ್ಕೆ ಅಭಿವಂದನೆಯನ್ನು ಅರ್ಪಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರತಿಜ್ಞಾವಿಧಿಯನ್ನು ಭೋಧಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲ್ ಇವರು ಯಾವುದೇ ಒಂದು ಸಂಘಟನೆ ಸಮಾನ ಮನಸ್ಕತೆಯ ಮೂಲಕ ಗಟ್ಟಿಯಾಗುವುದು ಅಲ್ಲದೆ ಘಟಕದ ಜವಾಬ್ದಾರಿ ಹಿಡಿದವರು ಸರ್ವರ ಸಹಕಾರದೊಂದಿಗೆ ಘಟಕವನ್ನು ಇನ್ನಷ್ಟು ಸುದೃಢಗೊಳಿಸಬೇಕು ಎಂದು ಹೇಳಿದರು. ಪದಗ್ರಹಣದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಜ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಶಿವರಾಮ್ ಪೂಜಾರಿ ಇವರು ಯುವವಾಹಿನಿಯ ಮೂಲ ಆಶಯ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಮತ್ತು ಇನ್ನಷ್ಟು ಕ್ರಿಯಾಶೀಲವಾಗಿ ನಮ್ಮ ಈ ಘಟಕ ಮುಂದಿನ ದಿನಗಳಲ್ಲಿ ಕಾರ್ಯತತ್ವರವಾಗಲೆಂದು ಹಾರೈಸಿದರು. ಘಟಕದ ಸಲಹೆಗಾರರಾದ ಶ್ರೀ ಪರಮೇಶ್ವರ ಪೂಜಾರಿ ಇವರು ಬಜ್ಪೆ ಘಟಕದ ಸಾಧನೆ ಹೆಮ್ಮೆ ತರಿಸುವಂತದ್ದಾಗಿದ್ದು ಮುಂದಿನ ದಿನಗಳಲ್ಲೂ ಇದು ವಿಸ್ತಾರಕವಾಗಲಿ ಎಂದು ಶುಭ ನುಡಿದರು.

ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸದರಿ ಘಟಕದ ಅಧ್ಯಕ್ಷರಾದ ಶ್ರೀ ದೇವರಾಜ್ ಅಮೀನ್ ಇವರು ತನ್ನ ಕಾರ್ಯಾವಧಿಯಲ್ಲಿ ಸಹಕಾರ ನೀಡಿದ ಸರ್ವರನ್ನೂ ನೆನಪಿಸಿಕೊಂಡು ಬಜ್ಪೆ ಘಟಕದ ಶ್ರೇಯಸ್ಸಿಗೆ ಕಾರಣೀಭೂತರಾದ ಎಲ್ಲರಿಗೂ ಕೃತಜ್ಞತೆಯನ್ನು ಹೇಳಿದರು. ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಶ್ರೀಮತಿ ಸಂಧ್ಯಾ ಕುಳಾಯಿ ಇವರು, ಮುಂದಿನ ದಿನಗಳಲ್ಲೂ ಸರ್ವರ ಸಹಕಾರವನ್ನು ಬಯಸಿ ತನ್ನ ಕಾರ್ಯ ಯೋಜನೆಯನ್ನು ಸೂಕ್ಷ್ಮವಾಗಿ ಸಭೆಯ ಮುಂದಿರಿಸಿದರು. ಇದೇ ಸಂದರ್ಭದಲ್ಲಿ ತನ್ನ ಒಂದು ವರುಷದ ಕಾರ್ಯಾವಧಿಯುದ್ದಕ್ಕೆ ತನಗೆ ಹೆಗಲಿಗೆ ಹೆಗಲು ಕೊಟ್ಟ ಎಲ್ಲರನ್ನೂ ಅಧ್ಯಕ್ಷರಾದ ಶ್ರೀ ದೇವರಾಜ್ ಅಮೀನ್ ಇವರು ಗೌರವಿಸಿದರು. ಜೊತೆಗೆ ಸದರಿ ಘಟಕದ ಮಾಜಿ ಸಲಹೆಗಾರರಾದ ರವಿಚಂದ್ರ, ಭಜನಾ ಸ್ಪರ್ಧೆಯ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ತರಬೇತಿ ನೀಡಿದ ಶ್ರೀ ಧೀನ್‌ರಾಜ್ ಹಾಗೂ ಸಲಹೆಗಾರರಾದ ಶ್ರೀ ಜಿ. ಪರಮೇಶ್ವರ ಪೂಜಾರಿ ಇವರೆಲ್ಲನ್ನು ಗಣ್ಯರ ಉಪಸ್ಥಿತಿಯಲ್ಲಿ ಅಭಿನಂದಿಸಲಾಯಿತು.

ಕುಮಾರಿ ಗ್ರೀಷ್ಮ ಎಕ್ಕಾರು ಇವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ, ನಿರ್ಮಲ ಗೋಪಾಲಕೃಷ್ಣ ಇವರು ಸರ್ವರನ್ನು ಸ್ವಾಗತಿಸಿದರು. ಚಂದ್ರಶೇಖರ ಪೂಜಾರಿ ನೂತನ ಪದಾಧಿಕಾರಿಗಳು, ನಿರ್ದೇಶಕರುಗಳ ಪರಿಚಯವನ್ನು ಸಭೆಯ ಮುಂದಿರಿಸಿದರು. ಕಾರ್ಯದರ್ಶಿ ಸುನಿತಾ ವಾರ್ಷಿಕ ವರದಿ ಮಂಡಿಸಿದರು. ಮಾಧವ ಇವರು ಸನ್ಮಾನ ಪತ್ರ ವಾಚಿಸಿದರು. ರವೀಂದ್ರ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜಾ ಕಿರಣ್ ಮತ್ತು ಕೇಶವ ಇವರು ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ರೋಹಿತ್ ವಂದನಾರ್ಪಣೆಗೈದರು.
ಪದಗ್ರಹಣ ಕಾರ್ಯಕ್ರಮದ ಪೂರ್ವದಲ್ಲಿ ಘಟಕದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!