ಬೆಳ್ತಂಗಡಿ: ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಮುಖ ಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಡುವ ಗೊಂದಲ, ಭಯವನ್ನು ನಿವಾರಿಸುವ ನೆಲೆಯಲ್ಲಿ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಮನಃಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸ್ಮಿತೇಶ್ ಎಸ್.ಬಾರ್ಯ ಅವರು ಬರೆದಿರುವ ‘ದೀವಿಗೆ’ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಗುರುವಾಯನಕೆರೆ ಶಾರದಾ ಮಂಟಪದಲ್ಲಿ ನೆರವೇರಿತು.
ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾಗಿರುವ ಜಯಂತ್ ನಡುಬೈಲು ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರೂ ಬೆಳ್ತಂಗಡಿ ಘಟಕದ ಸಲಹೆಗಾರರಾದ ಪ್ರೇಮನಾಥ್ ಬಂಟ್ವಾಳ್, ಘಟಕದ ನಿಕಟಪೂರ್ವ ಅಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ಸಲಹೆಗಾರರಾದ ಗೋಪಾಲಕೃಷ್ಣ ಸಾಲಿಯಾನ್, ರಮಾನಂದ ಸಾಲಿಯಾನ್ ಮುಂಡೂರು, ಪುಸ್ತಕದ ಲೇಖಕ ಸ್ಮಿತೇಶ್ ಎಸ್.ಬಾರ್ಯ, ಯುವವಾಹಿನಿ ಕೇಂದ್ರ ಸಮಿತಿಯ ನಿದೇಶಕರಾದ ಶಶಿಧರ ಕಿನ್ನಿಮಜಲು ಸಂಘಟನಾ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ಸುಂದರ ಬಂಗೇರ ಹಳೆಕೊಟೆ ಬೆಳ್ತಂಗಡಿ, ಕೇಂದ್ರ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಉಮಾನಾಥ ಕೋಟ್ಯಾನ್ ಬೆಳಾಲು, ಘಟಕದ ನಿಯೋಜಿತ ಅಧ್ಯಕ್ಷರಾದ ಹರೀಶ್ ಕನ್ಯಾಡಿ, ಬಿಲ್ಲವ ಮಹಾಮಂಡಲದ ನಾಮನಿರ್ದೇಶಿತ ಸದಸ್ಯರಾದ ಯೋಗೀಶ್ ಪಡಂಗಡಿ ಹಾಗೂ ಘಟಕದ ನಿರ್ದೇಶಕರು, ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಜಯರಾಜ್ ನಡಕ್ಕರ ವಂದಿಸಿ, ಘಟಕದ ಸಲಹೆಗಾರರಾದ ಸುಧಾಮಣಿ ಆರ್. ಕಾರ್ಯಕ್ರಮ ನಿರೂಪಿಸಿದರು.
ಉತ್ತಮ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪೂರಕವಾಗಿದೆ.