Yuvavahini

JAN 22, 2019 3.34 AM IST

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 22-1-2019 ರಂದು ಯುವವಾಹಿನಿ ಸಭಾಂಗಣ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಜಾರಂದಾಯ ದೈವಸ್ಥಾನ ಬೋಳೂರು ಇಲ್ಲಿಯ ಆಂತರಿಕ ಲೆಕ್ಕಪರಿಶೋಧಕರಾದ ವೆಂಕಟೇಶ್ ದಾಸ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷ ನವೀನ ಚಂದ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸುನಿಲ್ ಪಾಲ್ದಡಿ, ಮಾಲಕರು ಶ್ರೀನಿಧಿ ಕನ್ ಸ್ಟ್ರಕ್ಷನ್ ಕೊಟ್ಟಾರ ಮತ್ತು ಕಿರಣ್ ಕುಮಾರ್ ಕೋಡಿಕಲ್ ಮಾಲಕರು ಕುಮಾರ಼್ಸ್ ಇಂಡಸ್ಟ್ರೀಸ್ ಅಂಡ್ ಕುಮಾರ್, ಮಲ್ಟಿ ಜಿಮ್ ಕೊಟ್ಟಾರ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ ಸದಸ್ಯರಾದ ಜಯರಾಮ್ ಎ. ಎಲ್. ಇವರನ್ನು ಉದ್ಯಮ ಶೀಲತೆಗಾಗಿ, ಹರೀಶ್ ಪಚ್ಚನಾಡಿ ಇವರ ಉತ್ತಮ ಸೇವಾ ಕಾರ್ಯಕ್ಕಾಗಿ, ಗೋಪಾಲ ಪೂಜಾರಿ ಇವರನ್ನು ಶ್ರಮ ಜೀವನ ಮತ್ತು ಸಮಾಜ ಸೇವೆಗಾಗಿ ಸನ್ಮಾನಿಸಲಾಯಿತು. ರವೀಶ್ ಕುಮಾರ್ ನೂತನ ಪದಾಧಿಕಾರಿಕಾಳನ್ನು ಸಭೆಗೆ ಪರಿಚಯಿಸಿದರು. ಕುಮಾರ್ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡು ಬೈಲ್ ರವರು 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆ .ಆರ್ ಲಕ್ಷ್ಮಿನಾರಾಯಣ ರವರು ಸಭೆಯನ್ನುದ್ದೇಶಿಸಿ ತನ್ನ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ತಿಳಿಸಿದರು. ನಿರ್ಗಮನ ಅಧ್ಯಕ್ಷರಾದ ನವೀನ್ ಚಂದ್ರ ರವರು ತನ್ನ ಅಧಿಕಾರ ಅವಧಿಯಲ್ಲಿ ಸಹಕರಿಸಿದ ಎಲ್ಲ ಸದಸ್ಯರಿಗೂ ಹಾಗೂ ಇತರ ಘಟಕ ದವರಿಗೂ ಕೃತಜ್ಞತೆ ಸಲ್ಲಿಸಿ ಸ್ಮರಣಿಕೆ ನೀಡಿ ಗೌರವಿಸಿದರು.
ಜತೆ ಕಾರ್ಯದರ್ಶಿ ಮೋಹನ್ ದಾಸ್ ಪ್ರಸ್ತಾವನೆ ಮಾಡಿದರು. ನವೀನ ಚಂದ್ರ ಸ್ವಾಗತಿಸಿದರು. ರಾಕೇಶ್ ಕುಮಾರ್ ಹಾಗೂ ಜಗನ್ನಾಥ್ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಗಣೇಶ್. ವಿ .ಕೋಡಿಕಲ್ ರವರು ವಂದನಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!