Yuvavahini

FEB 03, 2019 6.14 AM IST

ಡೆನ್ನಾನ ಡೆನ್ನನ 2019 'ಯುವವಾಹಿನಿ ಅಂತರ್‌ ಘಟಕ ಸಾಂಸ್ಕೃತಿಕ ಸ್ಪರ್ಧೆ

ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಮೂಡುಬಿದಿರೆ, ಫೆ. 3: ಯುವ ಸಂಪತ್ತು ಈ ದೇಶದ ಸಂಪತ್ತು. ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಸದೃಢಗೊಳಿಸಬೇಕಾಗಿದೆ. ಅದರಲ್ಲೂ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತಣ್ತೀವನ್ನು ಸಾರಿದ ಶ್ರೀ ನಾರಾಯಣ ಗುರುಗಳ ಆಶಯ, ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಸತ್ಯಧರ್ಮ ಧೈರ್ಯದ ನಡೆನುಡಿ ಯುವಜನಾಂಗಕ್ಕೆ ಆದರ್ಶವಾಗಲಿ ಎಂದು ಡಾ| ಎಂ. ಮೋಹನ ಆಳ್ವ ಹೇಳಿದರು.

ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ ಯಲ್ಲಿ ರವಿವಾರ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ‘ಡೆನ್ನಾನ ಡೆನ್ನನ 2019’ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆಯನ್ನು ಸ್ವಾಗತ ಸಮಿತಿ ಅಧ್ಯಕ್ಷ ನಾರಾಯಣ ಪಿ. ಎಂ. ಜತೆಗೂಡಿ ಬಿಲ್ಲುಗಳ ಮೂಲಕ ಬಾಣ ಹೂಡಿ ಉದ್ಘಾಟಿಸಿ ಅವರು ಮಾತನಾಡಿದರು.


ಶಾಸಕ ಉಮಾನಾಥ ಕೋಟ್ಯಾನ್‌ ಮಾತನಾಡಿ, ಯುವವಾಹಿನಿಯ ಮೂಲಕ ಕಲಾವಿದರನ್ನು ಗುರುತಿಸುವ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ ಎಂದರು.
ಅಭಿವೃದ್ಧಿಯ ಧ್ಯೇಯವನ್ನು ಸಾಕಾರಗೊಳಿಸಿ
ಅಖೀಲ ಭಾರತ ಬಿಲ್ಲವ ಯೂನಿಯನ್‌ ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ ಮಾತನಾಡಿ, ಇಂದು ಯುವ ಸಮುದಾಯ ಹಾದಿ ತಪ್ಪುತ್ತಿದ್ದು ಮಾರ್ಗದರ್ಶನದ ಕೊರತೆಯನ್ನು ಇದು ತೋರಿಸುತ್ತದೆ. ಯುವ ಜನಾಂಗವನ್ನು ಸರಿಯಾದ ಮಾರ್ಗದರ್ಶನದ ಮೂಲಕ ಸದೃಢರನ್ನಾಗಿಸಬೇಕು. ಈ ಸಮಾಜಕ್ಕೆ ದೊರಕುತ್ತಿರುವ ಸವಲತ್ತುಗಳನ್ನು ಬಳಸಿ ಅಭಿವೃದ್ಧಿಯ ಧ್ಯೇಯವನ್ನು ಸಾಕಾರಗೊಳಿಸಬೇಕು ಎಂದರು.


ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ದ್ವಜಾರೋಹಣಗೈದರು. ಮೂಡುಬಿದಿರೆ ಘಟಕದ ಅಧ್ಯಕ್ಷ ರಾಜೇಶ್‌ ಡಿ.ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್‌, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇಗುಲದ ಅಧ್ಯಕ್ಷ ಎಚ್. ಎಸ್‌. ಸಾಯಿ ರಾಮ್‌, ಬಿಲ್ಲವರ ಅಸೋಸಿಯೇಷನ್ ಮುಂಬೈನ ನಿಕಟಪೂರ್ವ ಅಧ್ಯಕ್ಷರಾದ ನಿತ್ಯಾನಂದ ಡಿ.ಕೋಟ್ಯಾನ್, ಚೌಟರ ಅರಮನೆಯ ಕುಲದೀಪ ಎಂ., ಉದ್ಯಮಿ ಕೆ. ಶ್ರೀಪತಿ ಭಟ್, ಮೂಡುಬಿದಿರೆ ಪುರಸಭಾಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಸಿನೆಮಾ ನಿರ್ಮಾಪಕ ರಾಜಶೇಖರ್‌ ಕೋಟ್ಯಾನ್‌,ಯುವವಾಹಿನಿ ಮೂಡುಬಿದಿರೆ ಘಟಕದ ಸಲಹೆಗಾರ ಟಿ. ಶಂಕರ್‌ ಸುವರ್ಣ‌, ಮೂಡುಬಿದಿರೆ ಬಿಲ್ಲವ ಸಂಘದ ಅಧ್ಯಕ್ಷ ರವೀಂದ್ರ ಎಂ. ಸುವರ್ಣ, ಕಾರ್ಯದರ್ಶಿ ರಾಜೇಶ್‌ ಸುವರ್ಣ, ಡೆನ್ನಾನ ಡೆನ್ನನ ಸಂಚಾಲಕ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಕೇಂದ್ರ ಸಮಿತಿಯ ಸಾಹಿತ್ಯ ಮತ್ತು ಸಾಂಸ್ಕ್ರತಿಕ ನಿರ್ದೇಶಕ ವಿಠಲ್‌ ಎಮ್ . ಪೂಜಾರಿ, ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ನಾರಾಯಣ ಪಿ.ಎಂ. ಸ್ವಾಗತಿಸಿದರು. ಕಾರ್ಯದರ್ಶಿ ಡಾ| ಮುರಳೀಕೃಷ್ಣ ಆರ್‌.ವಿ. ವಂದಿಸಿದರು. ದಿನೇಶ್‌ ಸುವರ್ಣ ರಾಯಿ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!