Yuvavahini

JAN 27, 2019 3.15 PM IST

ಪದಗ್ರಹಣ – ಸಾರಥ್ಯ 2019

ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು.
ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ ಅಶೋಕ್ ಸುವರ್ಣ ಅಧ್ಯಕ್ಷತೆ ವಹಿಸಿದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಸಸಿಹಿತ್ಲು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಚಿಲುಮೆ ಪತ್ರಿಕೆಯನ್ನು ಮುಖ್ಯ ಅತಿಥಿಗಳಾದ ಜಿಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಚಂದ್ರಶೇಖರ ನಾನಿಲ್‍ರವರು ಬಿಡುಗಡೆಗೊಳಿಸಿದರು. ಈ ಸಂರ್ಭದಲ್ಲಿ ಚಂದ್ರಶೇಖರ ನಾನಿಲ್‍ರವರನ್ನು ಸನ್ಮಾನಿಸಲಾಯಿತು. ಸನ್ನಾನ ಪತ್ರವನ್ನು ಗುಣವತಿ ರಮೇಶ್ ವಾಚಿಸಿದರು.


ಸಮ್ಮಾನ :- ಜಿಲ್ಲಾ ರಾಜೋತ್ಸವ ಪುರಸ್ಕತ ಚಂದ್ರಶೇಖರ್ ನಾನಿಲ್‍ರನ್ನು ಮತ್ತು ಕಳೆದ ಸಾಲಿನಲ್ಲಿ ಘಟಕದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ ಅಶೋಕ್ ಸುವರ್ಣ ಮತ್ತು ತಾರಾ ಅಶೋಕ್ ದಂಪತಿಗಳನ್ನು ಸನ್ಮಾನಿಸಲಾಯಿತು.
ನೂತನ ಅಧ್ಯಕ್ಷರಾದ ಗುಣವತಿ ರಮೇಶ್ ಮತ್ತು ತಂಡಕ್ಕೆ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಸಸಿಹ್ಲಿತು ಪ್ರತಿಜ್ಞಾ ಬೋಧನೆ ಗೈದರು. ಕೇಂದ್ರ ಸಮಿತಿಯ ಹಿರಿಯ ಘಟಕಗಳಲ್ಲಿ ಒಂದಾಗಿರುವ ಈ ಘಟಕವು ಬಹಳಷ್ಟು ಪ್ರತಿಭಾವಂತರನ್ನು . ಸಮರ್ಥರನ್ನು ಒಳಗೊಂಡಿದೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶೋಕ್ ಸುವರ್ಣ ವಹಿಸಿದ್ದರು. ಎಂಟು ಹೊಸ ಸದಸ್ಯರು ಸೇರ್ಪಡೆಗೋಂಡರು. ಚರಣ್, ಭಾಸ್ಕರ್ ಕೋಟ್ಯಾನ್ ಮತ್ತು ತಂಡದಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಸತೀಶ್ ಕೊಟ್ಯಾನ್ ನಿರೂಪಿಸಿದರು. ರಿತೇಶ್ ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಾರಥ್ಯ 2019 ರ ಸಂಚಾಲಕ – ಕಿಶೋರ್ ವಂದಿಸಿದರು. ಜೊತೆ ಕಾರ್ಯದರ್ಶಿ ತಾರಾ ಅಶೋಕ್ ವರದಿ ವಾಚಿಸಿದರು. .
ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಪರಮೇಶ್ವರ ಪೂಜಾರಿ, ಯಶವಂತ್, ಲಕ್ಷ್ಮಣ್ ಸಾಲ್ಯಾನ್, ರವೀಂದ್ರ, ತಾರಾನಾಥ ಹೆಜಮಾಡಿ, ರವಿಕುಮಾರ್ ಚಿಲಿಂಬಿ, ರಾಜೇಂದ್ರ ಚಿಲಿಂಬಿ, ಪ್ರಭಾಕರ್ ಕುಳಾಯಿ, ಸತ್ಯಜಿತ್ ಸುರತ್ಕಲ್ ಘಟಕದ ಮಾಜಿ ಅಧ್ಯಕ್ಷರುಗಳು ಉಪಸ್ತಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!