ಮಂಗಳೂರು : ಯುವವಾಹಿನಿ ಸಂಸ್ಥೆಯು ಉದಯೋನ್ಮುಖ ಯುವ ಸಾಹಿತಿಗಳಿಗಾಗಿ ಕೊಡಮಾಡುವ 2018 ನೇ ಸಾಲಿನ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ತುಳುನಾಡ ಸ್ವರ ಮಾಣಿಕ್ಯ, ಕಂಚಿನ ಕಂಠದ ನಿರೂಪಕ, ತುಳು ಭಾಷಾ ಪರಿಪಕ್ವ ಬರಹಗಾರ, ಯುವ ಸಾಹಿತಿ ದಿನೇಶ್ ಸುವರ್ಣ ರಾಯಿ ಇವರಿಗೆ ಪ್ರದಾನ ಮಾಡಲಾಯಿತು.
ಇತ್ತೀಚೆಗೆ ಮಂಗಳೂರು ಪುರಭವನದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೋ.ಬಿ.ಎ.ವಿವೇಕ್ ರೈ, ಹಿರಿಯ ಪತ್ರಕರ್ತರಾದ ಪರಮಾನಂದ ಸಾಲ್ಯಾನ್, ವಿಶುಕುಮಾರ್ ಅವರ ಧರ್ಮಪತ್ನಿ ವಿಜಯಲಕ್ಷ್ಮಿ ವಿಶುಕುಮಾರ್ , ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಡಾ.ವೈ.ಎನ್.ಶೆಟ್ಟಿ, ಪ್ರಭಾಕರ ನೀರುಮಾರ್ಗ, 2018ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪುರಸ್ಕೃತ ಹಿರಿಯ ರಂಗ ಸಾಹಿತಿ ವಸಂತ ವಿ.ಅಮೀನ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಂಚಾಲಕರಾದ ಪ್ರದೀಪ್ ಎಸ್.ಆರ್, ಯುವವಾಹಿನಿ ಸಸಿಹಿತ್ಲು ಘಟಕದ ಅಧ್ಯಕ್ಷ ಭಾಸ್ಕರ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.