Yuvavahini

FEB 24, 2019 3.22 PM IST

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಪದ ಪ್ರದಾನ ಸಮಾರಂಭ

ಬೆಳ್ತಂಗಡಿ : ಸಂಘಟನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುವುದರೊಂದಿಗೆ ಸಮಾಜ ಸೇವೆ ಮಾಡಬೇಕು ಎಂದು ಮಾಜಿ ಶಾಸಕ, ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಗೌರಾವಾಧ್ಯಕ್ಷ ಕೆ.ವಸಂತ ಬಂಗೇರ ಹೇಳಿದರು.

ಅವರು ಫೆ.24 ರಂದು ಸುವರ್ಣ ಆರ್ಕೇಡ್‌ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಬೆಳ್ತಂಗಡಿ ಘಟಕದ ನೂತನ ಪದಾದಿಕಾರಿಗಳ ಪದಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಂಘಟನೆ ತಾಲೂಕಿನಲ್ಲಿ 55 ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದು, ಯುವ ವಾಹಿನಿ ಕಳೆದ 5 ವರ್ಷಗಳಿಂದ ಉತ್ತಮ ಸೇವೆಯೊಂದಿಗೆ ಮುನ್ನಡೆಯುತ್ತಿದೆ, ಎಂದರು.ನೂತನ ಅಧ್ಯಕ್ಷ ಹರೀಶ್ ಕುಮಾರ್ ಕನ್ಯಾಡಿಯವರ ನೇತೃತ್ವದ ಪದಾಧಿಕಾರಿಗಳಿಗೆ ಪದಪ್ರಧಾನ ಬೊಧಿಸಿದ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಅಧ್ಯಕ್ಷ ಜಯಂತ್ ನಡುಬೈಲ್ ಮಾತನಾಡುತ್ತಾ, ಬಿಲ್ಲವ ಸಮಾಜದ ಅಭಿವೃದ್ಧಿಗಾಗಿ ಶಿಕ್ಷಣ, ನಾಯಕತ್ವ, ಉದ್ಯೋಗದ ನಿಟ್ಟಿನಲ್ಲಿ ಕಳೆದ 31 ವರ್ಷಗಳ ಹಿಂದೆ ಪ್ರಾರಂಭವಾದ ಯುವವಾಹಿನಿ 33 ಘಟಕಗಳನ್ನು ಸ್ಥಾಪಿಸಿ, ಯುವಕರನ್ನು ಸಂಘಟಿಸುವ ಕೆಲಸ ಮಾಡುತ್ತಿದೆ. ಸಂಘಟನೆ ಬೇರೆ ಬೇರೆ ಇದ್ದರೂ ಬಿಲ್ಲವ ಸಂಘಟನೆಗಳು ಒಂದೇ ಎಂಬ ಭಾವನೆಯಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಪ್ರಶಾಂತ್ ಮಚ್ಚಿನ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್‌ ಕುಮಾರ್ ಸಸಿಹಿತ್ಲು ದಿಕ್ಸೂಚಿ ಭಾಷಣ ಮಾಡಿದರ. ಈ ಸಂದರ್ಭದಲ್ಲಿ ಉತ್ತಮ ಸಹಕಾರಿ ಸೇವೆಗೈಯುತ್ತಿರುವ ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ, ಶೈಕ್ಷಣಿಕ ಸಾಧನೆಗೈದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾಯನಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಸಾಧನಾ ಶ್ರೀ ಮತ್ತು ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂದಾರು ಹಾಗು ವಿದ್ಯಾರ್ಥಿಗಳನ್ನು ದೈಹಿಕ ಶಿಕ್ಷಣ ಶಿಕ್ಷಕರನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು.


ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಗೌರವ ಸ್ವೀಕರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್.ಬಿ.ಸುವರ್ಣ ಜಿ.ಪಂ ಮಾಜಿ ಸದಸ್ಯ ಕೆ. ಶೈಲೇಶ್ ಕುಮಾರ್, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಂಘಟನಾ ಕಾರ್ಯದರ್ಶಿ ಸಚಿನ್ ನೊಜೋಡಿ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್.ಕೆ, ಭಾಗವಹಿಸಿದ್ದರು.
ಬೆಳ್ತಂಗಡಿ ಯುವಬಿಲ್ಲವ ವೇದಿಕೆಯ ಅಧ್ಯಕ್ಷ ಸಂತೋಷ್ ಕುಮಾರ್ ಉಪ್ಪಾರು ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್, ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಕೇಂದ್ರ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಉಮನಾಥ್ ಕೋಟ್ಯಾನ್ ಗೌರವ ಉಪಸ್ಥಿತರಿದ್ದರು.
ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜಯಂತ್ ಕೋಟ್ಯಾನ್, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಭಗೀರಥ ಜಿ, ಜಯರಾಮ ಬಂಗೇರ ಹೇರಾಜೆ, ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆಂತ್ಯಾರು, ಮತ್ತು ಸಿಬ್ಬಂದಿ ವರ್ಗದವರು ಇನ್ನಿತರ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ರಾಷ್ಟ್ರಮಟ್ಟದ ಚಿತ್ರಕಲೆ ಸಾಧಕಿ ಅಕ್ಷರ, ರಿಯಾಲಿಟಿ ಶೋದಲ್ಲಿ ಮಿಂಚಿದ ಸೃಷ್ಟಿ,ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯನ್ನು ಗುರುತಿಸಲಾಯಿತು . ಡೆನ್ನಾನ ಡೆನ್ನಾನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ಸದಸ್ಯರುಗಳನ್ನು ಗೌರವಿಸಲಾಯಿತು.

ಘಟಕದ ನಿಕಟಪೂರ್ವ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ನೂತನ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ಉಪನ್ಯಾಸಕ ಸ್ಮಿತೇಶ್ ಎಸ್.ಬಾರ್ಯ ಸ್ವಾಗತಿಸಿದರು. ಯುವವಾಹಿನಿ ಕಾರ್ಯದರ್ಶಿ ಜಯರಾಜ್ ನಡಕ್ಕರ ವರದಿ ವಾಚಿಸಿದರು. ಅಶ್ವತ್ಥ್ ಕುಮಾರ್, ಪ್ರಜ್ಞಾ ಒಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ವಿಜಯಕುಮಾರ್ ಶಿರ್ಲಾಲು ವಂದಿಸಿದರು. ಕಾರ್ಯಕ್ರಮದ ಮೊದಲು ಬೀಟ್ ರಾಕರ್‍ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿ ಇವರಿಂದ ನೃತ್ಯ ವೈವಿಧ್ಯ ನಡೆಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!