Yuvavahini

MAR 08, 2019 4.03 PM IST

ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ

ಸ್ಪೂರ್ತಿ…. ಇದು ಯುವವಾಹಿನಿಯ ಮಾರ್ಗದರ್ಶಿಯೆಡೆಗೆ

ಬೆಳ್ತಂಗಡಿ :ತಳ ಮಟ್ಟದಲ್ಲಿ ಇರುವ ಯುವ ಸಮುದಾಯವನ್ನು ಮೇಲೆತ್ತುವ ಕೆಲಸವಾಗಬೇಕು ಎಂದು ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಸಲಹೆಗಾರರು ರಮಾನಂದ ಸಾಲಿಯನ್ ಮೂಂಡುರು ಹೇಳಿದರು.
ಅವರು ಮಾ.08 ರಂದು ಸುವರ್ಣ ಆರ್ಕೇಡ್ ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ನಡೆದ ಸ್ಪೂರ್ತಿ…. ಇದು ಯುವವಾಹಿನಿಯ ಮಾರ್ಗದರ್ಶಿಯೆಡೆಗೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಘಟಕವು ಬೆಳ್ತಂಗಡಿಯಲ್ಲಿ ನೋಂದವರ ಪರವಾಗಿ ಹಾಗೂ ಅಶಕ್ತರಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತಿದ್ದು ಹೋರಾಟದ ಮೂಲಕ ಕಳೆದ 5 ವರ್ಷಗಳಿಂದ ಉತ್ತಮ ಸೇವೆಯೊಂದಿಗೆ ಮುನ್ನಡೆಯುತ್ತಿದೆ ಎಂದರು

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಮಾತನಾಡಿ ಯುವವಾಹಿನಿ ಬೆಳೆದು ಬಂದ ದಾರಿ ಯುವವಾಹಿನಿಯ ಮಾರ್ಗದರ್ಶಿಯ ಬಗ್ಗೆ ನಿಯಮಗಳು ಶಿಸ್ತು ಹಾಗೂ ಸಮಯ ಪಾಲನೆಗೆ ಕೊಡುತ್ತಿರುವ ಮಹತ್ವ ಘಟಕದ ಪದಾಧಿಕಾರಿಗಳ ಜವಾಬ್ದಾರಿಯ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಘಟಕದ ಎಲ್ಲಾ ನಿರ್ದೇಶಕರು ಸದಸ್ಯರು ಸಲಹೆಗಾರರು ಹಾಜರಿದ್ದರು
ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ ವಹಿಸಿದ್ದರು.ಸಲಹೆಗಾರದ ರಘುನಾಥ್ ಶಾಂತಿ ಪ್ರಾರ್ಥಿಸಿ ವ್ಯಕ್ತಿತ್ವ ವಿಕಸನ ನಿರ್ದೇಶಕ ಪ್ರದೀಪ್ ಮಚ್ಚಿನ ಸ್ವಾಗತಿಸಿದರು ಪ್ರಜ್ಞಾ ಒಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು ಕಾರ್ಯದರ್ಶಿ ವಿಜಯ್ ಕುಮಾರ್ ಶಿರ್ಲಾಲು ವಂದಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!