Yuvavahini

MAR 30, 2019 4.44 PM IST

ಯುವವಾಹಿನಿ(ರಿ.) ಪಡುಬಿದ್ರಿ ಘಟಕ: 2019-20 ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಯುವವಾಹಿನಿ ಸಂಘಟನೆಯು ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ತನ್ನಿಂದಾದ ಸಹಾಯ ನೀಡುತ್ತಿದೆ. ಸಮಾಜದ ಅಭಿವೃದ್ಧಿಗಾಗಿ ನಿಸ್ವಾರ್ಥತೆಯಿಂದ ದುಡಿಯುತ್ತಿರುವ ಯುವಕರ ಭಲಾಡ್ಯ ಸಂಘಟನೆಯೇ ಯುವವಾಹಿನಿ ಎಂದು ಯುವವಾಹಿನಿಯ ಕಾರ್ಯ ಸಾಧನೆಗಳನ್ನು ಅರಿತುಕೊಂಡ ಮುಂಬೈ ಆನಂದ್ ರಾಠಿ ಆಂಡ್ ಗ್ರೂಪ್ ಸಂಸ್ಥೆಯ ಸದಾನಂದ ಪೂಜಾರಿ ಮಾದುಮನೆ ಇವರು ಹರ್ಷ ವ್ಯಕ್ತಪಡಿಸಿದರು. ಇವರು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾ ಭವನದಲ್ಲಿ ದಿನಾಂಕ 24.03.2019  ರಂದು ಜರಗಿದ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ 2019-20 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ದಾರಿ ತಪ್ಪುತ್ತಿರುವ ಯುವಕರತ್ತ ಗಮನಹರಿಸಿ, ವಿಮರ್ಶೆಮಾಡಿ ಅವರನ್ನು ಜಾಗೃತಿಗೊಳಿಸಿ ಸರಿದಾರಿಗೆ ತರುವಲ್ಲಿ ಯುವವಾಹಿನಿ ಸಂಘಟನೆಯು ಪ್ರಮುಖ ಪಾತ್ರವಹಿಸಬೇಕು ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ(ರಿ.) ಇದರ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು ಇವರು ಕಳೆದ ಡಿಸೆಂಬರ್ 2018 ರಲ್ಲಿ ನಡೆಸಿದ ರಾಜ್ಯಮಟ್ಟದ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ಪರೀಕ್ಷೆಯಲ್ಲಿ 8ನೇ ಸ್ಥಾನ ಪಡೆದ ನಮ್ಮ ಘಟಕದ ಪ್ರಚಾರ ನಿರ್ದೇಶಕರಾದ ನಿಖಿಲ್ ಪೂಜಾರಿ ಇವರನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಪಾದೆಬೆಟ್ಟು ನಿವಾಸಿ ಶ್ರೀಮತಿ ಅನಿತಾ ಇವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಘಟಕದ ವತಿಯಿಂದ 5,000 ರೂ ಆರ್ಥಿಕ ನೆರವು ನೀಡಲಾಯಿತು.

ಯುವವಾಹಿನಿ ಪಡುಬಿದ್ರಿ ಘಟಕವು ವಿದ್ಯೆಗೆ ಮಹತ್ತರ ಸ್ಥಾನವನ್ನು ನೀಡಿದ್ದು ಮಕ್ಕಳ ಹಬ್ಬ ಎಂಬ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಲು ಉತ್ತಮ ವೇದಿಕೆ ಕಲ್ಪಿಸಿದೆ. 2018-19 ನೇ ಸಾಲಿನ ಅವಧಿಯಲ್ಲಿ 4 ಫಲಾನುಭವಿಗಳನ್ನು ಗುರುತಿಸಿ ಆರ್ಥಿಕ ಸಹಾಯವನ್ನು ನೀಡಿ ಸಮಾಜದಲ್ಲಿ ಯುವವಾಹಿನಿಯ ಹೆಸರನ್ನು ಗುರುತಿಸಿಕೊಂಡಿದ್ದಾರೆ. ಸಮಾಜದ ಯುವಕನ್ನು ಜಾಗೃತಗೊಳಿಸಿ ಮುಖ್ಯವಾಹಿನಿಗೆ ತರುವಲ್ಲಿ ಯುವವಾಹಿನಿಯು ಮುಖ್ಯ ಪಾತ್ರವಹಿಸಬೇಕು ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಜಯಂತ್ ನಡುಬೈಲ್ ಇವರು 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ ಇವರು ನಿಯೋಜಿತ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರಿಗೆ ಹಾಗೂ ಕಾರ್ಯದರ್ಶಿ ಶೈಲಜಾ ಇವರು ನಿಯೋಜಿತ ಕಾರ್ಯದರ್ಶಿಯಾದ ಯಶೋದ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಪದಗ್ರಹಣದ ನಂತರ ಪ್ರತಿಜ್ಞಾ ವಿಧಿ ಸ್ವೀಕರಿಸಿದ ನೂತನ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ತಮ್ಮ ಅವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಲು ಎಲ್ಲರ ಸಲಹೆ, ಸಹಕಾರವನ್ನು ಯಾಚಿಸಿದರು.

ಯುವವಾಹಿನಿ(ರಿ.) ಪಡುಬಿದ್ರಿ ಘಟಕವು ತನ್ನದೇ ನಿಲುವನ್ನು ಹೊಂದಿದ್ದು ಸಾಕಷ್ಟು ಸಮಾಜಮುಖಿ ಕೆಲಸವನ್ನು ಮಾಡಿ, ವಿದ್ಯೆ, ಸಾಂಸ್ಕೃತಿಕ ಕ್ಷೇತ್ರ ಮಾತ್ರವಲ್ಲದೇ ಕ್ರೀಡಾ ಕ್ಷೇತ್ರದಲ್ಲಿಯೂ ಮಹತ್ತರ ಸಾಧನೆ ಮಾಡಿ ಘಟಕದ ಹೆಸರನ್ನು ಉನ್ನತ ಸ್ಥಾನಕ್ಕೇರಿಸಿದೆ. ಮುಂದಿನ ದಿನಗಳಲ್ಲಿ ಯೋಗೀಶ್ ಪೂಜಾರಿ ನೇತೃತ್ವದ ತಂಡ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಪಡುಬಿದ್ರಿ ಘಟಕದ ಸಲಹೆಗಾರರಾದ ಶ್ರೀ ತಾರಾನಾಥ್ ಎಚ್. ಬಿ. ಇವರು ಶುಭ ಹಾರೈಸಿದರು.

ಯುವವಾಹಿನಿ(ರಿ.) ಪಡುಬಿದ್ರಿ ಘಟಕಕ್ಕೆ ನೂತನವಾಗಿ ಸೇರ್ಪಡೆಗೊಂಡಿರುವ ಸದಸ್ಯರನ್ನು ಈ ವೇದಿಕೆಯಲ್ಲಿ ಗುರುತಿಸಿ ಅಭಿನಂದಿಸಲಾಯಿತು. ಹಾಗೆಯೇ ಸಾಂತೂರು ಕೊಡಂಗಲ ಗರಡಿ ಭಕ್ತವೃಂದ ಇದರ 14ನೇ ವರ್ಷದ ಮೊಸರು ಕುಡಿಕೆಯ ಪ್ರಯುಕ್ತ ನಡೆದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸ್ಪರ್ಧಿಸಿ ದ್ವಿತೀಯ ಬಹುಮಾನ ಪಡೆದ ನಮ್ಮ ಘಟಕದ ಪುರುಷರ ತಂಡ ಹಾಗೂ ಜೇಸಿಐ ಉದ್ಯಾವರ – ಕುತ್ಪಾಡಿ, ಜೇಸಿ ಸಪ್ತಾಹ- 2018 ಇವರು ಮಹಿಳೆಯರಿಗಾಗಿ ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಬೆಂಕಿ ಇಲ್ಲದೆ ಅಡುಗೆ ಮಾಡುವ ಸ್ಪರ್ಧೆಯಲ್ಲಿ ಸ್ಪರ್ಧಿಸಿ ದ್ವಿತೀಯ ಬಹುಮಾನವನ್ನು ಪಡೆದ ನಮ್ಮ ಘಟಕದ 5 ಜನ ಮಹಿಳಾ ಸದಸ್ಯರ ತಂಡವನ್ನು ಈ ಸಂಧರ್ಭದಲ್ಲಿ ಗುರುತಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದೀಪಕ್ ಕೆ. ಬೀರ ಇವರು ಕಳೆದ ಒಂದು ವರ್ಷದ ಅಧ್ಯಕ್ಷೀಯ ಅವಧಿಯಲ್ಲಿ ಘಟಕದ ಎಲ್ಲಾ ಕೆಲಸ ಕಾರ್ಯಗಳಿಗೆ ಸಲಹೆ ಸಹಕಾರ ನೀಡಿದ ಸರ್ವ ಸದಸ್ಯರಿಗೆ ವಂದಿಸಿ ಮುಂದೆಯೂ ತನ್ನಿಂದಾದ ಸಹಕಾರವನ್ನು ನೀಡುತ್ತೇನೆ ಎಂಬ ಭರವಸೆ ನೀಡಿದರು.

2018-19 ನೇ ಸಾಲಿನ ಅವಧಿಯಲ್ಲಿ ಉತ್ತಮ ಸಮಾಜಮುಖಿ ಕಾರ್ಯಯೋಜನೆಗಳನ್ನು ಹಮ್ಮಿಕೊಂಡು ಪಡುಬಿದ್ರಿ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದ ದೀಪಕ್ ಕೆ. ಬೀರ ಇವರನ್ನು ಪಡುಬಿದ್ರಿ ಘಟಕದ ಸರ್ವಸದಸ್ಯರ ಪರವಾಗಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಘಟಕದ ಮಾಜಿ ಅಧ್ಯಕ್ಷರಾದ ಸುಜಿತ್ ಕುಮಾರ್ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ವಿವಿಧ ಘಟಕಗಳ ಪದಾಧಿಕಾರಿಗಳನ್ನು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಗುರುತಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದು 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ ಇವರು ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಅಶೋಕ್ ಪೂಜಾರಿ ಪಾದೆಬೆಟ್ಟು ಇವರು ಪ್ರಸ್ತಾವಿಸಿದರು. ಕಾರ್ಯದರ್ಶಿ ಶೈಲಜಾ 2018-19ನೇ ಸಾಲಿನ ವಾರ್ಷಿಕ ವರದಿ ವಾಚಿಸಿದರು. ನಿಯೋಜಿತ ಕಾರ್ಯದರ್ಶಿ ಯಶೋಧ ಧನ್ಯವಾದ ಸಮರ್ಪಿಸಿದರು. ಮಾಜಿ ಅಧ್ಯಕ್ಷರುಗಳಾದ ಸುರೇಶ್ ಪೂಜಾರಿ ಹಾಗೂ ರವಿರಾಜ್ ಯನ್. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!