ಯುವವಾಹಿನಿ(ರಿ) ಉಪ್ಪಿನಂಗಡಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಉಪ್ಪಿನಂಗಡಿ : ತಾ.24-3-2019 ನೇ ಆದಿತ್ಯವಾರದಂದು ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಯುವವಾಹಿನಿ ವಿದ್ಯಾರ್ಥಿ ಸಂಘ ಉದ್ಘಾಟನೆಗೊಂಡಿತು, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಟಿ. ಶಂಕರ ಸುವರ್ಣರವರು ದೀಪ ಬೆಳಗುವುದರ ಮೂಲಕ ನೂತನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶುಭ ಹಾರೈಸಿದರು.
ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದಅಧ್ಯಕ್ಷರಾದ ಅಜಿತ್ ಕುಮಾರ್ ಪಲೇರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿ ಸಂಘ ಉದ್ಘಾಟನೆಯ ಬಳಿಕ ಯುವವಾಹಿನಿ ವಿದ್ಯಾರ್ಥಿ ಸಂಘಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಯುವವಾಹಿನಿ ಘಟಕದ ಸಲಹೇಗಾರರಾಗಿರುವ ಡಾ. ಸದಾನಂದ ಕುಂದರ್ ಇವರು ಪ್ರಮಾಣವಚನ ಬೋಧಿಸಿದರು.ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಭಿಜಿತ್ ಕರ್ಕೇರ,ವಿದ್ಯಾರ್ಥಿ ಸಂಚಾಲಕರಾದ ರವಿಪೂಜಾರಿ, ಕಾರ್ಯದರ್ಶಿಯಾದ ಅನಿಲ್ ಕುಮಾರ್ ದಡ್ದು ಉಪಸ್ಥಿತರಿದ್ದರು.

ಯುವವಾಹಿನಿ ಉಪ್ಪಿನಂಗಡಿ ವಿದ್ಯಾರ್ಥಿ ಸಂಘದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಭಿಜಿತ್ ಕರ್ಕೇರ ಇವರಿಂದ ವ್ಯಕ್ತಿತ್ವವಿಕಸನ ಕಾರ್ಯಕ್ರಮ ನಡೆಯಿತು. ಉಪ್ಪಿನಂಗಡಿ ಯುವವಾಹಿನಿ ವಿದ್ಯಾರ್ಥಿ ಸಂಘದ ಸದಸ್ಯರಿಂದ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಕುಂದರ್ ಇವರಿಂದ ಪ್ರಮಾಣ ವಚನ ಸ್ವೀಕಾರ. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಅನಿಲ್ ಕುಮಾರ್ ದಡ್ದು ಸ್ವಾಗತಿಸಿ, ನಾಣ್ಯಪ್ಪ ಪೂಜಾರಿ ಇವರು ವಂದಿಸಿ,ಕಾರ್ಯಕ್ರಮವನ್ನು ದಿನೇಶ್ ಇವರು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 16-11-2024
ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ದಿನಾಂಕ : 15-11-2024
ಸ್ಥಳ : ಸಿ. ಎಸ್. ಐ. ಬಾಲಿಕಾಶ್ರಮ, ಮೂಲ್ಕಿ

ಯುವವಾಹಿನಿ (ರಿ.) ಮೂಲ್ಕಿ ಘಟಕ

ದಿನಾಂಕ : 23-11-2024
ಸ್ಥಳ : ಸಂಪಿಗೆ ನಗರ, ಉದ್ಯಾವರ ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 24-11-2024
ಸ್ಥಳ : ನಾಗಪ್ಪ ಕಾಂಪ್ಲೆಕ್ಸ್ , ಎನ್ .ಹೆಚ್-66, ಬಲಾಯಿಪಾದೆ, ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 17-11-2024
ಸ್ಥಳ : ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ

ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!