Yuvavahini

MAR 31, 2019 1.03 PM IST

ಯುವವಾಹಿನಿಯ 34 ನೇ ನೂತನ ಘಟಕ

ಯುವವಾಹಿನಿ (ರಿ) ಕಾರ್ಕಳ ಘಟಕ ಉದ್ಘಾಟನೆ

ಕಾರ್ಕಳ : ಯುವವಾಹಿನಿಯ 34 ನೇ ನೂತನ ಘಟಕ ಯುವವಾಹಿನಿ (ರಿ) ಕಾರ್ಕಳ ಘಟಕ ಉದ್ಘಾಟನೆ ದಿನಾಂಕ 31.03.2019 ರಂದು ಕಾರ್ಕಳದ ಬಿಲ್ಲವ ಸಂಘದ ಸಭಾಭವನದಲ್ಲಿ ಬಿಲ್ಲವ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಡಿ. ಆರ್ ರಾಜು ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.
ಅವರು ಮಾತನಾಡುತ್ತಾ ವಿದ್ಯೆ ಉದ್ಯೋಗ ಸಂಪರ್ಕ ಧ್ಯೇಯದೊಂದಿಗೆ ಸ್ಥಾಪಿಸಲ್ಪಟ್ಟ ಯುವಾಹಿನಿ ಸಂಸ್ಥೆಯು ಬಿಲ್ಲವ ಸಮಾಜದ ಯುವಕರನ್ನು ಎಲ್ಲ ಕ್ಷೇತ್ರದಲ್ಲಿಯೂ ತೊಡಗಿಸಿಕೊಳ್ಳುವಂತೆ ಮಾಡಿದೆ ಎಂದರು
ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ ಮಾತನಾಡಿ ಯುವವಾಹಿನಿಯು ಬಿಲ್ಲವ ಯುವಕರಿಗೆ ಶಕ್ತಿಯಾಗಿದೆ.ಯುವಾಹಿನಿಯು ಶ್ರೀ ನಾರಾಯಣ ಗುರುಗಳ ಆಶಯವನ್ನು ಈಡೇರಿಸುವುದಕ್ಕೆ ಮೂವತ್ತೆರಡು ವರ್ಷಗಳ ಹಿಂದೆ ಹುಟ್ಟಿ ಕೊಂಡಿದೆ ಎಂದರು


ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಇದರ ಅಧ್ಯಕ್ಷರಾದ ಜಯಂತ್ ನಡುಬೈಲುರವರು ವಹಿಸಿದ್ದರು. ಕೃಷಿಕರಾದ ಗೋಪಾಲ ಪೂಜಾರಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು
ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ರವರು ಈ ಸಂದರ್ಭದಲ್ಲಿ ಮೂವತ್ತೆರಡು ಜನ ಸದಸ್ಯರಿಗೆ ಪ್ರಮಾಣ ವಚನವನ್ನು ಬೋಧಿಸಿದರು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಟಿ ಶಂಕರ್ ಸುವರ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ ಅವರು ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಪರಿಚಯ ಮಾಡಿದರು .
ಮೂಡುಬಿದಿರೆ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಸ್ವಾಗತಿಸಿದರು. ಧ್ಯಕ್ಷರಾಗಿ ಪ್ರಮಾಣವಚನವನ್ನು ಸ್ವೀಕರಿಸಿದ ಸುಧಾಕರ ಪೂಜಾರಿ ಅವರು ಎಲ್ಲರ ಸಹಕಾರವನ್ನು ಯಾಚಿಸಿದರು ನೂತನ ಕಾರ್ಯದರ್ಶಿ ಗಣೇಶ್ ಸಾಲಿನವರು ವಂದನಾರ್ಪಣೆಯನ್ನು ಗೈದರು ಕಾರ್ಕಳ ಪರಿಸರದ ಸುಮಾರು 600 ಕ್ಕೂ ಅಧಿಕ ಸಮುದಾಯದ ಜನರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!