Yuvavahini

APR 07, 2019 2.59 PM IST

ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭ

ಶಕ್ತಿನಗರ : ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 7/04/2019ನೇ ರವಿವಾರದಂದು ಕರಾಡ ಸಮಾಜ ಭವನದಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳಿಗೆ ಹಿರಿಯ ಸದಸ್ಯರಾದ ಶ್ರೀ ಸದಾಶಿವ ಪೂಜಾರಿಯವರು ದೀಪವನ್ನು ಬೆಳಗಿಸಿ ಪ್ರಾರ್ಥನೆಯನ್ನು ಸಲ್ಲಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು.
ಪ್ರಾರ್ಥನೆಯ ನಂತರ ಸುಂದರ್ ಅಂಚನ್ ರವರು ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ್, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಗೂ ಶಕ್ತಿನಗರ ಘಟಕದ ಸಲಹೆಗಾರರಾದ ಕಿಶೋರ್ ಕೆ ಬಿಜೈ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪದ್ಮನಾಭ ಮರೋಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಪೂಜಾರಿಯವರು ವಹಿಸಿದ್ದರು. . ಘಟಕದ ಕಾರ್ಯದರ್ಶಿಗಳು 2018ನೇ ವಾರ್ಷಿಕ ವರದಿಯನ್ನು ಮಂಡಿಸಿದರು. ಸಭೆಯಲ್ಲಿ ಅನುಮೋಧನೆಯನ್ನು ಪಡೆದರು. ವಿವಿಧ ಘಟಕಗಳಿಂದ ಆಗಮಿಸಿದ ಯುವವಾಹಿನಿಯ ಸದಸ್ಯರನ್ನು ಅಧ್ಯಕ್ಷರು ಗುಲಾಬಿಯನ್ನು ನೀಡುವ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದ ಪ್ರಸ್ತಾಪನೆಯನ್ನು ಸಮಾಜ ಸೇವೆ ನಿರ್ದೇಶಕರಾದ ಉಮೇಶ್ ದಂಡಕೇರಿಯವರು ನಡೆಸಿಕೊಟ್ಟರು. ನಿರೂಪಕರಾಗಿ ಪ್ರತೀಶ್ ರವರು ಕಾರ್ಯನಿರ್ವಹಿಸಿದ್ದರು.
ನಿಯೋಜಿತ ಪಧಾಧಿಕಾರಿಗಳನ್ನು ಶಾಲನ್ನು ಹೊದಿಸಿ ಹಾಗೂ ಗುಲಾಬಿಯನ್ನು ನೀಡುವ ಮೂಲಕ ಅಧ್ಯಕ್ಷರು ವೇದಿಕೆಗೆ ಬರಮಾಡಿಕೊಂಡರು. ಕೇದ್ರಸಮಿತಿಯ ಮಾಜಿ ಅಧ್ಯಕ್ಷರಾದ ಪದ್ಮನಾಭ ಮರೋಳಿ ರವರು ಪ್ರತಿಜ್ಞಾ ವಿಧಿ ಭೋದಿಸಿದರು.
ಸಮಾರಂಭದಲ್ಲಿ ಡಾ.ರಾಜಾರಾಮ್, ಸುಂದರ್ ಅಂಚನ್, ಪ್ರತೀಶ್, ಕಿಶೋರ್ ಕೆ ಬಿಜೈ, ಶ್ರೀನಿವಾಸ್ ಪೂಜಾರಿ, ಶಂಕರ್ ಪೂಜಾರಿ ಮುಂತಾದವರನ್ನು ಸನ್ಮಾನಿಸಲಾಯಿತು. ಘಟಕದ ನೂತನ ಅಧ್ಯಕ್ಷರಾದ ಭಾರತಿ ಅಮೀನ್ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅತಿಥಿಗಳಾದ ಕಿಶೋರ್ ಕೆ ಬಿಜೈ ಹಾಗೂ ಪದ್ಮನಾಭ ಮರೋಳಿ ನೂತನ ಅಧ್ಯಕ್ಷರು ಹಾಗೂ ಪಧಾದಿಕಾರಿಗಳನ್ನು ಅಭಿನಂದಿಸಿದರು. ವಿವಿಧ ಘಟಕಗಳ ಪಧಾಧಿಕಾರಿಗಳು ಶುಭವನ್ನು ಹಾರೈಸಿದರು. ನಿರ್ಗಮನ ಅಧ್ಯಕ್ಷರಾದ ಶ್ರೀನಿವಾಸ್ ಪೂಜಾರಿಯವರು ನೂತನ ಪಧಾಧಿಕಾರಿಗಳಿಗೆ ಶುಭವನ್ನು ಹಾರೈಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಯವರಾದ ಸುನಿಲ್ ಅಂಚನ್ ರವರು ಎಲ್ಲಾ ಪಧಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಕೊನೇಯಲ್ಲಿ ನೂತನ ಕಾರ್ಯದರ್ಶಿಯವರಾದ ಜಯರಾಮ್ ಪೂಜಾರಿಯವರು ವಂದನಾರ್ಪನೆಯನ್ನು ನೀಡುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!