ದಿನಾಂಕ 22-1-2017 ರಂದು ಯುವವಾಹಿನಿ (ರಿ) ಪುತ್ತೂರು ಘಟಕದ ನೇತೃತ್ವದಲ್ಲಿ ಕೇಂದ್ರ ಸಮಿತಿಯ ಸಹಯೋಗದಲ್ಲಿ ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಪುತ್ತೂರಿನ ಯುವಕರನ್ನೊಳಗೊಂಡ ಯುವವಾಹಿನಿಯು ಇಂದು ಮನೆ ಮಾತಾಗಿದ್ದರೆ ಅದು ಯುವವಾಹಿನಿ ಸದಸ್ಯರಲ್ಲಿನ ಸ್ವಾರ್ಥ ರಹಿತ ಸ್ವಾಭಿಮಾನಿ ಬದುಕಿನಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಲಾ ಮುಕ್ವೆ, ನರಿಮೊಗರು ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯ ಗುರು ವಿಜಯ ನಾಯಕ್ ಎಸ್. ನರಿಮೊಗರು, ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ ಕೈಪಂಗಳದೋಟ, ಬಿಲ್ಲವ ಸಂಘದ ನರಿಮೊಗರು ವಲಯ ಸಂಚಾಲಕ ಹೊನ್ನಪ್ಪ ಪೂಜಾರಿ ಕೈಂದಾಡಿ, ಘಟಕದ ಸಂಚಾಲಕ ಕೇಶವ ಬೆದ್ರಾಳ, ನರಿಮೊಗರು ಸರಕಾರಿ ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಅಧ್ಯಕ್ಷ ಉಸ್ಮಾನ್ ನೆಕ್ಕಿಲು ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಪದ್ಮನಾಭ ಮರೋಳಿಯವರು ಮಾತನಾಡಿ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಬೋಧಿಸಿದ್ದು ನಾರಾಯಣಗುರುಗಳು. ಅದರಂತೆ ಯುವವಾಹಿನಿ ಮತ್ತು ಬಿಲ್ಲವ ಸಂಘ ಇವತ್ತು ಜಾತಿ-ಧರ್ಮ ಬಿಟ್ಟು ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಮೆಚ್ಚತಕ್ಕ ವಿಷಯವಾಗಿದೆ ಎಂದರು. ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರವಿಚಂದ್ರ ಹಾಗೂ ಮಂಗಳೂರು ಘಟಕದ ನಿಕಟಪೂರ್ವ ಅಧ್ಯಕ್ಷ ಹರೀಶ್‌ರವರಿಗೆ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯಂತ ಪೂಜಾರಿ ಕೆಂಗುಡೇಲು ಶಾಲು ಹೊದಿಸಿ ಹೂ ನೀಡಿ ಗೌರವಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಸಮಾಜ ಸೇವೆ ನಿರ್ದೇಶಕ ಪುತ್ತೂರು ಬಿಲ್ಲವ ವಿದ್ಯಾರ್ಥಿ ಸಂಘದ ಸಂಚಾಲಕ ಪ್ರಭಾಕರ ಸಾಲ್ಯಾನ್ ಸ್ವಾಗತಿಸಿದರು. ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯಂತ ಪೂಜಾರಿ ಕೆಂಗುಡೇಲು ವಂದಿಸಿದರು. ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕಿನ್ನಿಮಜಲು ಹಾಗೂ ಬಿಲ್ಲವ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಅವಿನಾಶ್ ಕಾರ್‍ಯಕ್ರಮ ನಿರೂಪಿಸಿದರು. ವೈದ್ಯಕೀಯ ಶಿಬಿರದಲ್ಲಿ ಕೆ.ಎಂ.ಸಿ.ಯ ೧೨ ಜನ ನುರಿತ ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.
ಶಿಬಿರದಲ್ಲಿ 483 ಮಂದಿ ಫಲಾನುಭವಿಗಳು ಭಾಗವಹಿಸಿದ್ದರು. ಕಣ್ಣಿನ ತಪಾಸಣೆಗೆ 168, ಸಾಮಾನ್ಯ ರೋಗ ತಪಾಸಣೆಗೆ-113, ಎಲುಬು-66, ಮಕ್ಕಳ-61, ಸ್ತ್ರೀರೋಗ-46, ಕಿವಿ-ಮೂಗು-ಗಂಟಲು-29 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.