Yuvavahini

MAY 05, 2019 4.14 PM IST

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಪದಗ್ರಹಣ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ 2018-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 05.05.2019 ರಂದು  ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಕುಪ್ಪೆಪದವು ಇಲ್ಲಿ ನಡೆಯಿತು.
ಬಿಲ್ಲವ ಸೇವಾ ಸಮಿತಿ ಕುಪ್ಪೆಪದವು ಇದರ ಅಧ್ಯಕ್ಷರಾದ ಹಿರಣಾಕ್ಷ ಕೋಟ್ಯಾನ್ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ  ದ. ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್(ರಿ.) ಇದರ ಅಧ್ಯಕ್ಷರಾದ ಸತೀಶ್ ಬೋಳಾರ ಮಾತನಾಡಿ,” ಶ್ರೀ ನಾರಾಯಣ ಗುರುಗಳ ತತ್ವ ಆದರ್ಶದೊಂದಿಗೆ ಯುವವಾಹಿನಿ ಸಂಘಟನೆ ಬಹಳ ಅತ್ಯುತ್ತಮವಾಗಿ,ಶಿಸ್ತುಬದ್ಧವಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ” ಎಂದು ಹೇಳಿದರು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಸಸಿಹಿತ್ಲು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಕುಪ್ಪೆಪದವು ಘಟಕದ ಸಲಹೆಗಾರರಾದ ಪರಮೇಶ್ವರ್ ಪೂಜಾರಿಯವರು ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು.
ಈ ಕಾರ್ಯಕ್ರಮದಲ್ಲಿ ಸೈನಿಕರಾದ ಅಶೋಕ್ ಕುಮಾರ್ ಅಂಬೆಲೋಟ್ಟು ಇವರನ್ನು ಸನ್ಮಾನಿಸಲಾಯಿತು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಮತ್ತು ಅಪಘಾತದಲ್ಲಿ ಗಾಯಗೊಂಡ ರಮೇಶಪೂಜಾರಿರವರಿಗೆ ಸಹಾಯಧನ ನೀಡಲಾಯಿತು .ಇದರ ಪ್ರಾಯೋಜಕರು ಗೀತಾ ಚಂದ್ರಮಜಲು ಮತ್ತು ಸಂಜಯ್ ಅಮೀನ್ ಆಗಿರುವರು.
ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾಗಿರುವ ಅರುಣ್ ಕುಮಾರ್ ಅಂಬೆಲೋಟ್ಟು ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಬಂದ ಸಮಸ್ತರನ್ನು ಸ್ವಾಗತಿಸಿದರು. ಕಾರ್ಯದರ್ಶಿ ರಿತೇಶ್ ನೇಲ್ ಲ್ಲಚಿಲ್ ವಾರ್ಷಿಕ ವರದಿ ಮಂಡಿಸಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅಜಯ್ ಅಮೀನ್ ತಮ್ಮ ಮುಂದಿನ ಕಾರ್ಯಸೂಚಿ ತಿಳಿಸಿದರು.ನೂತನ ಕಾರ್ಯದರ್ಶಿ ಗೀತಾ ಚಂದ್ರಮಜಲು ಈ ಕಾರ್ಯಕ್ರವನ್ನು ನೀರೂಪಿಸಿದರು. ವಿನುತಾ ಸನ್ಮಾನ ಪತ್ರ ವಾಚಿಸಿದರು.ಜಯಶ್ರೀ ಪ್ರತಿಭಾ ಪಟ್ಟಿ ಓದಿದರು.ಅಶ್ವಿನಿ ಯವರು ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!