Yuvavahini

MAY 12, 2019 7.53 AM IST

ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭ

ಉಡುಪಿ : ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭವು ದಿನಾಂಕ 12/05/2019 ರಂದು ಘಟಕದ ಸಭಾಂಗಣದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಯಾಗಿ ಸಂಜೀವ ಟಿ ಕರ್ಕೇರಾ ( ನಿವ್ರೃತ್ತ ಮಹಾಪ್ರಬಂಧಕರು ಮತ್ತು ಸಲಹೆಗಾರರು , ಮಂಗಳೂರು ವಿಶೇಷ ಆರ್ಥಿಕ ವಲಯ, ಮಂಗಳೂರು ). ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರೂ , ಘಟಕದ ಸಲಹೆಗಾರರೂ ಅದ ರವಿರಾಜ್ ಹಾಗೂ ಸಂತೋಷ್ ಕುಮಾರ್ , ಕಾರ್ಯದರ್ಶಿ ಪ್ರವೀಣ್ ಡಿ ಪೂಜಾರಿ, ಮಹಿಳಾ ಸಂಚಾಲಕಿ ವನಿತಾ ರಮೇಶ್, ಉಪಸ್ಥಿತರಿದ್ದರು. ಸಂಜೀವ ಟಿ ಕರ್ಕೇರಾ ರವರು ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡುತ್ತಾ ಯುವವಾಹಿನಿ ಉತ್ತಮ ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಜನತೆಗೆ ಉತ್ತಮ ಕೊಡುಗೆ ನೀಡುತ್ತಿದೆ. ಇನ್ನೂ ಹೆಚ್ಚು ಹೆಚ್ಚು ಕಾರ್ಯ ಗಳನ್ನು ಮಾಡಿ ಯುವವಾಹಿನಿಯ ಕೀರ್ತಿ ಬೆಳಗಲಿ ಎಂದು ಹಾರೈಸಿದರು.
ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ನೂತನ ಸಮಿತಿ ಸದಸ್ಯರಿಗೆ ಪದಪ್ರದಾನ ಗೈದರು. ಅವರು ಮಾತನಾಡುತ್ತಾ , ಉಡುಪಿ ಘಟಕದ ವಾರ್ಷಿಕ ಕಾರ್ಯಕ್ರಮಗಳನ್ನು ಮತ್ತು ಉಡುಪಿ ಘಟಕ ನೀಡಿದ ವಿದ್ಯಾನಿಧಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಉಡುಪಿ ಘಟಕ ಒಂದು ಮಾದರಿ ಘಟಕ ಎಂದು ಪ್ರಶಂಸಿಸಿದರು.
ನೂತನ ಅಧ್ಯಕ್ಷರಾದ ನಾರಾಯಣ ಬಿ ಎಸ್ ರವರು ಮಾತನಾಡಿ ನನಗೆ ಸಿಕ್ಕ ಈ ಸುವರ್ಣ ಅವಕಾಶ ವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಕೆಲಸ ಕಾರ್ಯಗಳನ್ನು ಮಾಡಿ ಯುವವಾಹಿನಿ ಯನ್ನು ಇನ್ನಷ್ಟು ಬೆಳೆಸುವಲ್ಲಿ ಶ್ರಮಿಸುತ್ತೇನೆ ಎಂದರು.
ಯುವವಾಹಿನಿ ವಿವಿಧ ಘಟಕಗಳಿಂದ ಆಗಮಿಸಿದ ಸದಸ್ಯರು ನೂತನ ತಂಡಕ್ಕೆ ಶುಭಹಾರೈಸಿದರು.

ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲ್ ರವರಿಗೆ ಉಡುಪಿ ಘಟಕದ ವತಿಯಿಂದ ಸನ್ಮಾನಿಸಲಾಯಿತು. ಉಡುಪಿ ಘಟಕದ ನಿರ್ಗಮನ ಅಧ್ಯಕ್ಷರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಘಟಕದ ಎಲ್ಲಾ ಮಾಜಿ ಅಧ್ಯಕ್ಷರೂ ಎಲ್ಲಾ ಸದಸ್ಯರೂ ಭಾಗವಹಿಸಿದ್ದರು. ಘಟಕಕ್ಕೆ ಸೇರ್ಪಡೆ ಗೊಂಡ ನೂತನ ಸದಸ್ಯರನ್ನು ಪರಿಚಯಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!