Yuvavahini

MAR 23, 2019 12.40 PM IST

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಕಾರ್ಯಾಲಯ ಉದ್ಘಾಟನೆ

ಕೆಂಜಾರು ಕರಂಬಾರು : ಕರಂಬಾರು ಮುಖ್ಯ ರಸ್ತೆಯಲ್ಲಿರುವ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ನೂತನ ಕಾರ್ಯಾಲಯವನ್ನು ದಿನಾಂಕ 23.03.2019 ರಂದು ವೈದಿಕ‌ ವಿಧಿವಿಧಾನಗಳ ಮೂಲಕ ಉದ್ಘಾಟಿಸಲಾಯಿತು.
ಬಜಪೆ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅರ್ಚಕರಾದ ಶಿವರಾಮ ಪೂಜಾರಿಯವರು ಗಣ ಹೋಮ , ಗುರುಪೂಜೆಯ ಮೂಲಕ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಘಟಕದ ಅಧ್ಯಕ್ಷರಾದ ಯಶವಂತ ಬಿ ಹಾಗೂ ವಿನುತಾ ದಂಪತಿಗಳು ಪೂಜಾ ಕಾರ್ಯದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಘಟಕದ ಸ್ಥಾಪಕ‌ ಅಧ್ಯಕ್ಷರಾದ ಗಣೇಶ್ ಅರ್ಬಿ, ಕಟ್ಟಡದ ಮಾಲೀಕರಾದ ಜಗನ್ನಾಥ ಸಾಲ್ಯಾನ್, ಸಲಹೆಗಾರರಾದ ಪದ್ಮನಾಭ ಮರೋಳಿ,ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಯಶವಂತ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ ಬಜಪೆ, ಘಟಕದ ಉಪಾಧ್ಯಕ್ಷರಾಗದ ಯಶವಂತ ವಿ, ಸುಜಾತ ದಂಪತಿಗಳು, ಕಾರ್ಯದರ್ಶಿ ಪ್ರಸಾದ್ ಪಾಲನ್, ನಿಕಟಪೂರ್ವ ಕಾರ್ಯದರ್ಶಿ ಜಿತೇಶ್ ಸಾಲ್ಯಾನ್, ಸುಂದರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಘಟಕದ ಸರ್ವ ಸದಸ್ಯರ ನಿರಂತರ ಶ್ರಮ ಹಾಗೂ ಕಟ್ಟಡ ಮಾಲೀಕರಾದ ಜಗನ್ನಾಥ ಸಾಲ್ಯಾನ್, ಸುಂದರ ಪೂಜಾರಿ ಯವರ ಸಹಕಾರದಿಂದ ಕಟ್ಟಡವನ್ನು ದುರಸ್ತಿಗೊಳಿಸಿ ವಾರದ ಸಭೆ ಹಾಗೂ ಇತರ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಸೃಜನಾತ್ಮಕವಾಗಿ ರೂಪುಗೊಳಿಸಲಾಯಿತು. ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಸದಸ್ಯರ ಶ್ರಮ ಸರ್ವರ ಪ್ರಶಂಸೆಗೆ ಪಾತ್ರವಾಯಿತು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!