Yuvavahini

JUN 02, 2019 1.16 PM IST

ಯುವ ಪ್ರತಿಭೆಯನ್ನು ಗುರುತಿಸಿ, ನಾಯಕತ್ವ ಮೂಡಿಸಿ-ಶೀನಪ್ಪ ಪೂಜಾರಿ

ಪುತ್ತೂರು: ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವವಾಹಿನಿ ಘಟಕವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಪುತ್ತೂರು ಘಟಕದ ಸ್ಥಾಪಕ ಅಧ್ಯಕ್ಷರಾದ ಶೀನಪ್ಪ ಪೂಜಾರಿಯವರು ಹೇಳಿದರು.
ಅವರು ದಿನಾಂಕ 02.06.2019 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2018-19ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದಾರೆ. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಧ್ಯೇಯಗಳನ್ನು ಮುಂದಿಟ್ಟು ಸಮಾಜ ಸೇವೆ ಮಾಡುವ ಉದ್ದೇಶದಿಂದ ಹುಟ್ಟಿಕೊಂಡ ಸಂಸ್ಥೆ ಹಿರಿಯರ ಮಾರ್ಗದರ್ಶನದಿಂದ ಮುಂದುವರಿಯಿರಿ. ಯುವವಾಹಿನಿ ಸದಸ್ಯರು ಪ್ರತಿಯೊಂದು ಘಟಕಗಳಲ್ಲಿನ ಸದಸ್ಯರೊಂದಿಗೆ ನಿರಂತರ ಸಂಪರ್ಕವನ್ನು ಇಟ್ಟುಕೊಂಡು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಾಗಲಿ ಎಂದು ಅವರು ಹೇಳಿದರು.
ಹೈಕೋರ್ಟು ನ್ಯಾಯವಾದಿ ಟಿ.ನಾರಾಯಣ ಪೂಜಾರಿರವರು ಮಾತನಾಡಿ, ನಾನು ಕಳೆದ 30 ವರ್ಷಗಳಿಂದ ಯುವವಾಹಿನಿಯ ಕಾರ್ಯಚಟುವಟಿಕೆಯನ್ನು ಬಹಳ ಹತ್ತಿರದಿಂದ ಬಲ್ಲವನಾಗಿದ್ದೇನೆ . ಅದ್ಭುತವಾದ ಕೆಲಸವನ್ನು ಈ ಸಂಘಟನೆ ಮಾಡುತ್ತಿದ್ದು ನಾನು ಈ ಸಂಘಟನೆಯ ಸಲಹೆಗಾರ ಎನ್ನಲು ನನಗೆ ಬಹಳ ಹೆಮ್ಮೆಯಾಗುತ್ತಿದೆ. ಯುವವಾಹಿನಿ ಘಟಕವು ವೈದ್ಯಕೀಯ ನೆರವು ನೀಡುವುದಾಗಲಿ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಲಿ ಎಲ್ಲದರಲ್ಲೂ ಮುಂಚೂಣಿಯಲ್ಲಿದೆ ಎಂದರೆ ತಪ್ಪಾಗದು ಎಂದರು.
ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ್ ನಡುಬೈಲುರವರು ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ನೆರವೇರಿಸಿ, ಮಾತನಾಡಿ, ಯುವವಾಹಿನಿಯು ರಾಜಕೀಯ ರಹಿತ ಸಂಘಟನೆಯಾಗಿದ್ದು ಇಲ್ಲಿನ ಯುವಸಮುದಾಯದ ಒಗ್ಗಟ್ಟು ಯಾವುದೇ ಕ್ಷೇತ್ರದಲ್ಲಿ ಕಂಡು ಬರುವುದಿಲ್ಲ. ಯುವವಾಹಿನಿ ಸಂಘಟನೆ ವಿದ್ಯೆಗೆ ಮತ್ತು ಉದ್ಯೋಗ ಕ್ಷೇತ್ರಕ್ಕೆ ಯುವ ಸಮುದಾಯವನ್ನು ಉತ್ತೇಜಿಸುವ ಕೆಲಸವನ್ನು ಮಾಡುತ್ತಿದೆ. ವಿದ್ಯೆಯನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯದಲ್ಲಿನ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಟ್ರಸ್ಟ್ ಮೂಲಕ ದತ್ತು ತೆಗೆದುಕೊಂಡು ಓದಿಗೆ ಅವಕಾಶ ಕಲ್ಪಿಸಿಕೊಟ್ಟಿರುವುದು ಶ್ಲಾಘನೀಯವಾಗಿದೆ ಎಂದರು. ಯುವವಾಹಿನಿ ಯುವಕರ ಕೂಟವಾಗಿದೆ. ಯಾರಿಗೆ ರಕ್ತದ ಅವಶ್ಯಕತೆವಿದೆಯೋ ಅವರಿಗೆ ವರ್ಷದ 365 ದಿನವೂ ಸ್ಪಂದಿಸುವ ಮೂಲಕ ಪ್ರಧಾನ ಪಾತ್ರ ವಹಿಸುತ್ತಿದೆ ಎಂದರು. 51 ಗ್ರಾಮ ಸಮಿತಿಗಳಲ್ಲೂ ಧಾರ್ಮಿಕ, ಸಾಮಾಜಿಕ, ಆರ್ಥಿಕ ಮತ್ತು ಇನ್ನಿತರ ಕ್ಷೇತ್ರಗಳಲ್ಲಿ ಯುವಸಮುದಾಯ ಮುಂದೆ ಬರಬೇಕು ಎಂದು ಅವರು ಹೇಳಿದರು.
ಯುವವಾಹಿನಿ ಪುತ್ತೂರು ಘಟಕದ ಸಲಹೆಗಾರ ಡಾ.ಸದಾನಂದ ಕುಂದರ್‍ ಮಾತನಾಡಿ, ಯುವಕರು ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಯುವವಾಹಿನಿ, ಬಿಲ್ಲವ ಸಂಘಕ್ಕೆ ಸೇರಲು ಮುಕ್ತ ಅವಕಾಶವಿದ್ದು ಭವಿಷ್ಯದ ಜೀವನವನ್ನು ಕಂಡುಕೊಳ್ಳಿ. ಕೋಟಿ-ಚೆನ್ನಯ ಕ್ರೀಡಾಕೂಟವನ್ನು ಪ್ರಪ್ರಥಮವಾಗಿ ಆರಂಭಿಸಿದ್ದು ಪುತ್ತೂರು ಘಟಕವಾಗಿದೆ. ಅಲ್ಲದೆ ಆಟಿಕೂಟ ಕಾನ್ಸೆಪ್ಟ್ ತಯಾರು ಮಾಡಿದ್ದು ಕೂಡ ಯುವವಾಹಿನಿ ಆಗಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಯುವವಾಹಿನಿಯ ಪ್ರತಿಷ್ಡಿತ ಕಾರ್ಯಕ್ರಮವಾದ ವಾರ್ಷಿಕ ಸಮಾವೇಶವು ವಿಶಿಷ್ಟ ರೀತಿಯಲ್ಲಿ ನಡೆಸಿ ಜನರ ಮನಸ್ಸನ್ನು ಗೆಲ್ಲುವಂತೆ ಸದಸ್ಯರು ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ನೂತನ ಅಧಕ್ಷರಾಗಿ ಆಯ್ಕೆಯಾದ ನಾರಾಯಣ ಪೂಜಾರಿ ಕುರಿಕ್ಕಾರರವರು ಮಾತನಾಡಿ, ತನ್ನನ್ನು ಅಧ್ಯಕ್ಷರಾಗಿ ಆಯ್ಕೆಗೊಳಿಸಿದ ಘಟಕದ ಸದಸ್ಯರಿಗೆ ಧನ್ಯವಾದ ಸಮರ್ಪಿಸಿದರು. ಮತ್ತು ಎಲ್ಲರ ಸಹಕಾರೆ ಕೋರಿದರು. ಶೀಘ್ರದಲ್ಲಿ ಎಲ್ಲಾ ಸದಸ್ಯರನ್ನು ಒಟ್ಟೂಗೂಡಿಸಿ ಕಾರ್ಯಕ್ರಮ ಅಯೋಜಿಸುವುದಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಪುತ್ತೂರು ಘಟಕದ ನಿರ್ಗಮಿತ ಅಧ್ಯಕ್ಷ ಹರೀಶ ಶಾಂತಿಯವರು ತನ್ನ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು. ಹಾಗೂ ನೂತನ ತಂಡಕ್ಕೆ ಶುಭಹಾರೈಸಿದರು.
ಘಟಕದ ಅಧ್ಯಕ್ಷರಾದ ಹರೀಶ್ ಶಾಂತಿಯವರು ಅತಿಥಿಗಳಿಗೆ ಹೂಗೂಚ್ಚ ನೀಡಿ, ಶಾಲನ್ನು ಹಾಕಿ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಕಾರ್ಯದರ್ಶಿ ಅನೂಪ್ ಕುಮಾರ್ ವಾರ್ಷಿಕ ವರದಿಯನ್ನು ವಾಚಿಸಿದರು. ಚುನಾವಣಾಧಿಕಾರಿ ಹಾಗೂ ಯುವವಾಹಿನಿ ಪುತ್ತೂರು ಘಟಕದ ಮಾಜಿ ಅಧ್ಯಕ್ಷ ಉದಯ ಕುಮಾರ್ ಕೋಲಾಡಿರವರು ನೂತನ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ನೂತನ ಕಾರ್ಯದರ್ಶಿ ಪ್ರಶಾಂತ್ ಪಲ್ಲತ್ತಡ್ಕ ವಂದಿಸಿದರು. ನಿರ್ದೇಶಕರಾದ ಅವಿನಾಶ್ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಇತರ ಘಟಕಗಳ ಸದಸ್ಯರು ಉಪಸ್ಥಿತರಿದ್ದರು. ಕಳೆದ ಹಲವು ವರ್ಷಗಳಿಂದ ಪುತ್ತೂರು ಘಟಕದ ಗೌರವ ಸಲಹೆಗಾರರಾಗಿ ಸಲಹೆಯನ್ನು ನೀಡುತ್ತಾ ಬಂದಿದ್ದು ಡಾ.ಸದಾನಂದ ಕುಂದರ್‍ರವರಿಗೆ ಘಟಕದ ಪರವಾಗಿ ಶಾಲು ಹೊದಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!