Yuvavahini

JUN 02, 2019 2.52 PM IST

ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ಯವವಾಹಿನಿ ಕುಟುಂಬ ಕಲರವ ” ಆಟ# ಊಟ#ಕೂಟ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಒಂದು ದಿನದ “ಯವವಾಹಿನಿ ಕುಟುಂಬ ಕಲರವ ” ಆಟ# ಊಟ#ಕೂಟ ಕಾರ್ಯಕ್ರಮವು ದಿನಾಂಕ 02-06-2019 ರ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಘಟಕದ ಉಪಾಧ್ಯಕ್ಷರಾದ ಚಿತ್ರಾಕ್ಷಿ ಕುಟ್ಟಿ ಕೋಟ್ಯಾನ್ ಇವರ ಲಲಿತಾ ಲೇಔಟ್ ನಲ್ಲಿ ಘಟಕದ ಸದಸ್ಯರ ಕುಟುಂಬದವರಿಗಾಗಿ ರವಿರಾಜ್ ಎನ್. ಕೋಟ್ಯಾನ್ ಅವರ ನಿರ್ವಹಣೆಯ, ವಿಶೇಷ ಮನರಂಜನಾ ಆಟಗಳೊಂದಿಗೆ ಆರಂಭವಾಗಿ ಅಪರಾಹ್ನ ವಿಶೇಷವಾಗಿ ಸದಸ್ಯರೇ ತಯಾರಿಸಿದ ಊಟದೊಂದಿಗೆ ಮುಂದುವರಿದು ನಂತರ ಪ್ರಹಸನ ಸ್ಪರ್ಧೆಗಳು ನಡೆದು ಸಮಾರೋಪ ಕೂಟದೊಂದಿಗೆ ಮುಕ್ತಾಯಗೊಂಡಿತು.
ಸಮಾರೋಪ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಅಧ್ಯಕ್ಷರಾದ ವೈ.ಸುಧೀರ್ ಕುಮಾರ್ ತಮ್ಮ ಮಾತಿನಲ್ಲಿ ಘಟಕದ ಈ ವಿಶೇಷ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಘಟಕದ ಸದಸ್ಯರ ಶ್ರಮ , ಆಸಕ್ತಿ ,ಉತ್ಸಾಹದಿಂದ ಇನ್ನಷ್ಟು ಕಾರ್ಯಕ್ರಮಗಳು ಮೂಡಿ ಬರಲಿ ಎಂದು ಹಾರೈಸಿದರು.
ಅತಿಥಿಯಾಗಿ ಆಗಮಿಸಿದ ಕನ್ನಂಗಾರು ಬ್ರಹ್ಮ ಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಘಟಕದ ಕಾರ್ಯಕ್ರಮಗಳು ಶ್ಲಾಘನೀಯ ,ತನ್ನ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಅತಿಥಿಗಳಾದ ಶ್ರೀ ದಯಾನಂದ್ ಕರ್ಕೇರ ಅವರು ಮಾತನಾಡಿ ಕಾರ್ಯಕ್ರಮ ಅತ್ಯುತ್ತಮ ರೀತಿಯಲ್ಲಿ ಮೂಡಿಬಂದಿದೆ, ಮುಂದೆ ಇನ್ನಷ್ಟು ಕಾರ್ಯಕ್ರಮಗಳು ನಡೆಯಲಿ ಎಂದು ಹಾರೈಸಿದರು. ಇನ್ನೋರ್ವ ಅತಿಥಿ ಸುಮಾಲಿನಿ ದಯಾನಂದ್ ಅವರು ಇಂತಹ ವಿಶೇಷ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಬಗ್ಗೆ ಹರ್ಷ ವ್ಯಕ್ತಪಡಿಸಿದರು.


ವೇದಿಕೆಯಲ್ಲಿ ಘಟಕದ ಉಪಾಧ್ಯಕ್ಷರಾದ ಚಿತ್ರಾಕ್ಷಿ ಕುಟ್ಟಿ ಕೋಟ್ಯಾನ್ ಉಪಸ್ಥಿತರಿದ್ದರು.ವೈದ್ಯಕೀಯ ಪದವಿ ಪಡೆದ ಐಶ್ವರ್ಯ ಸಿ.ಅಂಚನ್ ಅವರನ್ನು ಸನ್ಮಾನಿಸಲಾಯಿತು.
ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ .ಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿ ಗಳಾದ ದೀಕ್ಷಾ, ಅನ್ವಿತಾ ಎಚ್.ಕೋಟ್ಯಾನ್, ಸ್ವಾತಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅತ್ಯಧಿಕ ಅಂಕ ಗಳಿಸಿದ 7 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು. ಆರ್ಥಿಕವಾಗಿ ಹಿಂದಿರುವ ಒಬ್ಬ ವಿದ್ಯಾರ್ಥಿಯ ಒಂದು ವರ್ಷದ ಶಾಲಾ ವಾಹನದ ಪ್ರಯಾಣ ವೆಚ್ಚವನ್ನು ಘಟಕದಿಂದ ಭರಿಸಲಾಯಿತು. ಸಮಾರಂಭದಲ್ಲಿ ಮನರಂಜನಾ ಆಟಗಳು , ಪ್ರಹಸನದಲ್ಲಿ ವಿಜೇತರಿಗೆ ಹಾಗೂ ಸಮಗ್ರ ಪ್ರಶಸ್ತಿ ಪಡೆದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಘಟಕದ ಸಲಹೆಗಾರರಾದ ತಾರಾನಾಥ್ ಎಚ್.ಬಿ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದರು. ಸುಜಾತ ಹರೀಶ್ ಮತ್ತು ಪ್ರೀತಿ ಎಸ್. ಕೋಟ್ಯಾನ್ ಇವರ ಪ್ರಾರ್ಥನೆಯೊಂದಿಗೆ, ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಸರ್ವರಿಗೂ ಸ್ವಾಗತ ನೀಡಿದರು. ಕಾರ್ಯದರ್ಶಿ ಯಶೋದ ಧನ್ಯವಾದ ಸಲ್ಲಿಸಿದರು.
ಸುಷ್ಮ, ಚೈತ್ರ, ನಿಶ್ಮಿತ ಪಿ. ಎಚ್ ಸಮಾರೋಪ ಕೂಟವನ್ನು ನಿರೂಪಿಸಿದರು. ಕಾರ್ಯಕ್ರಮವು ಸದಸ್ಯರಲ್ಲಿ ಹುದುಗಿದ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆಯಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!