ಬೆಳ್ತಂಗಡಿ:ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಹೇಳಿದರು
ಅವರು ಜೂ 6 ರಂದು ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಗುರು ಸಂದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು .
ಕೇರಳದ ತೀಯಾ ಸಮಾಜ ದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳಿಗೆ ಜನಿಸಿದ ಗುರುಗಳು . ಕೇರಳದಲ್ಲಿ ಅನೇಕ ಜಾತಿಪಂಥಗಳಿದ್ದವು. ಮೇಲ್ಜಾತಿ, ಕೆಳಜಾತಿ, ಅಸ್ಪೃಷ್ಯತೆ ಮುಂತಾದ ಸಾಮಾಜಿಕ ಸಮಸ್ಯೆಗಳು ಎಲ್ಲೆಡೆ ಜನರ ಮನಸ್ಸನ್ನು ಹರಿದು ತಿನ್ನುತ್ತಿದ್ದವು. ಆಗ ನಾರಾಯಣ ಗುರುಗಳು ಈ ಎಲ್ಲಾ ಬೇಧ ಭಾವ ನಿವಾರಣೆಗೆ ಪಣತೊಟ್ಟು ತಮ್ಮ ಜೀವನದ ಧ್ಯೇಯವೆಂದು ಶಪಥಮಾಡಿದರು. ದೇವರ ಹೆಸರಿನಲ್ಲಿ ಪ್ರಾಣಿಹತ್ಯೆ ಅವರಿಗೆ ಸರಿಬೀಳಲಿಲ್ಲ. ಹೀಗೆ ಸಮಾಜದ ವಿರೋಧಾಭಾಸಗಳಿಗೆ ಮುಟ್ಟುಗೋಲು ಹಾಕಲು ಅವರು ತೆಗೆದುಕೊಂಡ ಕ್ರಮಗಳು, ಆಂದೋಲನಗಳು ಅನನ್ಯ. ಕೆಳವರ್ಗದಲ್ಲಿ ಜನಿಸಿದ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶಕ್ಕೆ ಅನುಮತಿಕೊಡಲು ಅವರು ಬೇಡಲಿಲ್ಲ. ಹಿಂಸಾಚಾರದ ಚಳುವಳಿಗಳನ್ನೂ ನಡೆಸದೆ, ತಾವೇ ದೇವಾಲಯಗಳನ್ನು ಸ್ಥಾಪಿಸುವುದರ ಮೂಲಕ ಒಂದು ಹೊಸ-ಅನನ್ಯ-ಆಲೋಚನಾಕ್ರಮವನ್ನು ಹುಟ್ಟುಹಾಕಿದರು ಈ ಮೂಲಕ ಹುಚ್ಚರ ಆಸ್ಪತ್ರೆಯಾಗಿದ್ದ ಕೇರಳವನ್ನು ದೇವರ ನಾಡಗಿ ಬದಲಾಯಿಸಿದರು .
ಯುವ ಸಮಾಜ ಗುರುಗಳ ತತ್ವ ಸಂದೇಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೇ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಘಟಕ ಅಧ್ಯಕ್ಷರಾದ ಹರೀಶ್ ಸುವರ್ಣ ಕನ್ಯಾಡಿ
ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರು ಘಟಕದ ಸಲಹೆಗಾರರದ ಸಂಪತ್ ಬಿ ಸುವರ್ಣ ಘಟಕದ ಮಾಜಿ ಅಧ್ಯಕ್ಷರು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಕನ್ಯಾಡಿ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು ಸಲಹೆಗಾರರಾದ ಗೋಪಾಲಕೃಷ್ಣ ಸಾಲ್ಯಾನ್ ಉಪಸ್ಥಿತರಿದ್ದರು ಘಟಕದ ಉಪಾಧ್ಯಕ್ಷ ಜಯರಾಜ್ ನಡಕ್ಕರ ಪ್ರಾರ್ಥಿಸಿ. ನಾರಾಯಣ ಗುರು ತತ್ವb ಪ್ರಚಾರ ನಿರ್ದೇಶಕರಾದ M.k ಪ್ರಸಾದ್ ಸ್ವಾಗತಿಸಿ ಕಾರ್ಯದರ್ಶಿ ವಿಜಯ್ ಕುಮಾರ್ ಶಿರ್ಲಾಲು ವಂದಿಸಿದರು ಸಂಘಟನ ಕಾರ್ಯದರ್ಶಿ ಗುರುಪ್ರಸಾದ್ ಗುರಿಪಳ್ಳ ಕಾರ್ಯಕ್ರಮ ನಿರೂಪಿಸಿದರು