Yuvavahini

JUN 21, 2019 5.19 PM IST

ಯುವವಾಹಿನಿ (ರಿ) ಕಾರ್ಕಳ ಘಟಕದ ವತಿಯಿಂದ

ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವು ದಿನಾಂಕ . 14.06.2019ರ ಶುಕ್ರವಾರ ಮೊರಾರ್ಜಿ ದೇಸಾಯಿ ಶಾಲೆ ಮಿಯ್ಯಾರು ಇಲ್ಲಿ ನಡೆಯಿತು. ಕಾರ್ಯಾಗಾರದ ಉದ್ಘಾಟನೆಯನ್ನು ಮಿಯ್ಯಾರು ಬಿಲ್ಲವ ಸಂಘದ ಗ್ರಾಮ ಸಮಿತಿ ಅಧ್ಯಕ್ಷರಾದ ಗಣೇಶ ಪೂಜಾರಿ ನೆರವೇರಿಸಿದರು.
ಸಭಾಧ್ಯಕ್ಷತೆಯನ್ನು ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್‍ರವರು ವಹಿಸಿದ್ದರು. ರಾಷ್ಟ್ರೀಯ ತರಬೇತುದಾರ ಹಾಗೂ ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ್ ಕಾರ್ಕಳ ತರಬೇತಿಯನ್ನು ನಡೆಸಿಕೊಟ್ಟರು. ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್‍ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜೀವನ ಕೌಶಲ್ಯದ ಅಗತ್ಯತೆಯ ಬಗ್ಗೆ ಅನುಭವಧಾರಿತ ಕಲಿಕೆಯನ್ನು ಚಟುವಟಿಕೆಯಾದರಿತವಾಗಿ ವಿದ್ಯಾರ್ಥಿಗಳಿಗೆ ತಿಳಿಹೇಳಲಾಯಿತು.
ಘಟಕದ ಸದಸ್ಯರಾದ ಮಂಜುನಾಥ ಕೋಟ್ಯಾನ್, ಸಂತೋಷ್ ಬಂಗೇರಾ, ಭವ್ಯ ಸ್ವರೂಪ್, ವನಿತಾ ಸುಧಾಕರ್, ಸತೀಶ್ ಪೂಜಾರಿ ಕಲತ್ರಪಾದೆ, ಸಂದೀಪ್ ಪೂಜಾರಿ ನಲ್ಲೂರು, ನಾರಾಯಣ ಪೂಜಾರಿ ಈದು, ಶೋಭರಾಜ್ ಹೊಸ್ಮಾರು ಕಾರ್ಯಕ್ರಮಕ್ಕೆ ಸಹಕರಿಸಿದರು. ಕೋಶಾಧಿಕಾರಿ ಅರುಣ್ ಕುಮಾರ್‍ರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯದರ್ಶಿ ಗಣೇಶ್ ಸಾಲಿಯಾನ್‍ರವರು ವಂದಿಸಿದರು.

ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವು ದಿನಾಂಕ 21.06.2019ರ ಶುಕ್ರವಾರ ಮೊರಾರ್ಜಿ ದೇಸಾಯಿ ಕಾಲೇಜು ಮಿಯ್ಯಾರು ಇಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಮಿಯ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಲ್ಲವ ಸಮಾಜದ ಹಿರಿಯರು ಆಗಿರುವ ಭೋಜ ಪೂಜಾರಿಯವರು ನೆರವೇರಿಸಿದರು.
ಸಭಾಧ್ಯಕ್ಷತೆಯನ್ನು ಘಟಕದ ಪದಾಧಿಕಾರಿಗಳಾದ ಮಂಜುನಾಥ್ ಕೋಟ್ಯಾನ್‍ರವರು ವಹಿಸಿದ್ದರು. ರಾಷ್ಟ್ರೀಯ ತರಬೇತುದಾರ ಹಾಗೂ ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ್ ಕಾರ್ಕಳ ಹಾಗೂ ಮತ್ತೊಬ್ಬ ತರಬೇತುದಾರರಾದ ಗೋಪ ಕುಮಾರ್ ಕೇರಳ ಇವರು ತರಬೇತಿಯನ್ನು ನಡೆಸಿಕೊಟ್ಟರು.
ಮೊರಾರ್ಜಿ ದೇಸಾಯಿ ಕಾಲೇಜಿನ ಪ್ರಾಂಶುಪಾಲರಾದ ಈಶ್ವರ್‍ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗುರಿ ನಿರ್ಧಾರದ ಅಗತ್ಯತೆಯ ಬಗ್ಗೆ ಅನುಭವಧಾರಿತ ಕಲಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಹೇಳಲಾಯಿತು. ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್ ಮಿಯ್ಯಾರು, ಶೋಭರಾಜ್ ಹೊಸ್ಮಾರು, ರಾಕೇಶ್ ಅಮೀನ್ ಸಾಣೂರು, ವನಿತಾ ಸುಧಾಕರ್ ಕಾರ್ಯಕ್ರಮಕ್ಕೆ ಸಹಕರಿಸಿದರು. ಕೋಶಾಧಿಕಾರಿ ಅರುಣ್ ಕುಮಾರ್‍ರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸತೀಶ್ ಪೂಜಾರಿಯಯವರು ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!