Yuvavahini

JUL 09, 2019 1.32 PM IST

ಯುವವಾಹಿನಿ(ರಿ) ವೇಣೂರು ಘಟಕದಿಂದ ಕಾನೂನು ಮಾಹಿತಿ ಕಾರ್ಯಾಗಾರ

ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ: ನ್ಯಾಯಾಧೀಶ ಬಿ.ಕೆ. ನಾಗೇಶ್‌ಮೂರ್ತಿ

ವೇಣೂರು: ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಚೌಕಟ್ಟಿನಲ್ಲಿ ಬದುಕಬೇಕು. ಈಗಾಗಿ ಕಾನೂನಿನ ಸಾಮಾನ್ಯ ಜ್ಞಾನ ಎಲ್ಲರಿಗೂ ಅವಶ್ಯಕವಾಗಿದೆ. ನಿತ್ಯ ಜೀವನದಲ್ಲಿ ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಬಿ.ಕೆ. ನಾಗೇಶ್‌ಮೂರ್ತಿ ಹೇಳಿದರು.
ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಯುವವಾಹಿನಿ ಘಟಕ ವೇಣೂರು ಹಾಗೂ ವೇಣೂರು ಸ.ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜು. 09 ರಂದು ವೇಣೂರು ಸ.ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ಜರಗಿದ ಕಾನೂನು ಮಾಹಿತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಅವರು ಮಾತನಾಡಿ, ಹಕ್ಕುಗಳನ್ನು ಹೇಳುವಾಗ ನಮಗಿರುವ ಆತ್ಮಸ್ಥೈರ್ಯ ಕರ್ತವ್ಯಗಳನ್ನು ಹೇಳುವಾಗ ಇರುವುದಿಲ್ಲ. ಹಕ್ಕುಗಳ ಜತೆಗೆ ನಮ್ಮ ಕರ್ತವ್ಯಗಳನ್ನು ಪಾಲಿಸಬೇಕು. ಕಾನೂನನ್ನು ರೂಪಿಸುವ ನಾವೇ ಕಾನೂನನ್ನು ಮುರಿಯುವವರಾಗುತ್ತಿದ್ದೇವೆ. ಕಾನೂನಿನಡಿ ಬದುಕು ಮತ್ತು ಕರ್ತವ್ಯ ಪ್ರಜ್ಞೆ ನಮ್ಮ ಕರ್ತವ್ಯ ಆಗಬೇಕು ಎಂದರು. ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ನವೀನ್ ಪೂಜಾರಿ ಪಚ್ಚೇರಿ ಅಧ್ಯಕ್ಷತೆ ವಹಿಸಿದ್ದರು.

ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾದೀಶ ಸತೀಶ್ ಕೆ.ಜಿ., ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಸೇವಿಯರ್ ಪಾಲೇಲಿ, ಸರಕಾರಿ ಅಭಿಯೋಜಕ ಜಿ.ಕೆ. ಕಿರಣ್ ಕುಮಾರ್, ವೇಣೂರು ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಗಂಗಾಧರ್ ಉಪಸ್ಥಿತರಿದ್ದರು.
ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ್ ಎ. ಸ್ವಾಗತಿಸಿ, ವೇಣೂರು ಯುವವಾಹಿನಿ ಘಟಕದ ಕಾರ್ಯದರ್ಶಿ ಶಿವಪ್ರಕಾಶ್ ಅಂಭಾಶ್ರೀ ವಂದಿಸಿದರು. ಉಪನ್ಯಾಸಕ ಸಂತೋಷ್ ಎ. ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ವೃಂದ, ಯುವವಾಹಿನಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!