Yuvavahini

JUL 28, 2019 1.58 PM IST

ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಹೆಜ್ಜೆ ಹೊಸ ಕನಸಿನೆಡೆಗೆ...

ಪ್ರಥಮ ಹೆಜ್ಜೆ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ : ಗೀತಾ ಪಿ

ಬೆಳ್ತಂಗಡಿ : ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು. ಸಮಾಜದಲ್ಲಿ ಅವಕಾಶ ವಂಚಿತ ಕಟ್ಟ ಕಡೆಯ ವ್ಯಕ್ತಿಯನ್ನು ಹುಡುಕಿ ಸಾಧನೆ ಮಾಡಲು ಇಂತಹ ಸಂಘಟನೆಗಳ ಮೂಲಕ ಪ್ರೋತ್ಸಾಹ ನೀಡಬೇಕು ಇಂದಿನ ಪ್ರಥಮ ಹೆಜ್ಜೆಯೆ ಪ್ರೋತ್ಸಾಹದ ಸಾವಿರ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ ಎಂದು ಮಂಗಳೂರಿನ ಅಬಕಾರಿ ನಿರೀಕ್ಷಕರು ಗೀತಾ ಪಿ ಹೇಳಿದರು.
ಅವರು ದಿನಾಂಕ 28/07/2019ನೇ ಭಾನುವಾರ ಬೆಳ್ತಂಗಡಿ ಸುವರ್ಣ ಅರ್ಕೆಡ್ ನಲ್ಲಿ ನಡೆದ ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಪ್ರಥಮ ಹೆಜ್ಜೆ ಇಡುವ ಸುಸಂದರ್ಬದಲ್ಲಿ ಹೆಜ್ಜೆ ಹೊಸ ಕನಸಿನೆಡೆಗೆ… ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ಮಾತನಾಡಿ ಇಂದು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಮೂಡಿಗೆರೆ ಬೆಂಗಳೂರು ಸೇರಿ ಒಟ್ಟು 35 ಘಟಕಗಳ ಯುವಜನಾಂಗವನ್ನು ಸಂಘಟನೆಯತ್ತ ಸೆಳೆಯುವ ಕೆಲಸವನ್ನು ಯುವವಾಹಿನಿ ಮಾಡುತ್ತಿದೆ. ಈ ಬಾರಿಯ ವಾರ್ಷಿಕ ಸಮಾವೇಶವು ಪುತ್ತೂರಿನಲ್ಲಿ ಅಗಸ್ಟ್ 11 ರಂದು ನಡೆಯಲಿದ್ದು ಎಲ್ಲರನ್ನೂ ಕಾರ್ಯಕ್ರಮ ಆಹ್ವಾನಿಸಿದರು.

ಕಾರ್ಯಕ್ರಮದಲ್ಲಿ ಇತ್ತೀಚಿಗೆ ಅಕಸ್ಮಿಕವಾಗಿ ನಿಧನರಾದ ಘಟಕದ ಸಮಾಜ ಸೇವೆ ನಿರ್ದೇಶಕರಾದ ಶಶಿದರ ಅದೇಲು ಇವರ ಇಬ್ಬರು ಮಕ್ಕಳಾದ  ಶರಣ್ಯ ಮತ್ತು ಸಂದೀಪ್ ಇವರ ಸಂಪೂರ್ಣ ಶಿಕ್ಷಣಕ್ಕಾಗಿ ಘಟಕದ ವತಿಯಿಂದ ದತ್ತು ಸ್ವೀಕರಿಸಲಾಯಿತು ಹಾಗೂ ಕಿಡ್ನಿ ಸೊಂಕಿನಿಂದ ಮಾ।ಶ್ರೇಯಸ್ಸು ಇವರ ಚಿಕಿತ್ಸಾ ವೆಚ್ಚಕ್ಕೆ ಘಟಕದ ವತಿಯಿಂದ 10000.00 ಸಾಂತ್ವನ ನಿಧಿಯನ್ನು ಹಸ್ತಾಂತರಿಸಲಾಯಿತು ಹಾಗೂ SSLC ಪರೀಕ್ಷೆಯಲ್ಲಿ 625 ಅಂಕದಲ್ಲಿ 622 ಪಡೆದು ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಜ್ಯೋತಿಕಾ N.ಇವರಿಗೆ ಶೈಕ್ಷಣಿಕ ಪುರಸ್ಕಾರ ನೀಡಿ ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಯನಂದ ಲ್ಯಾಲ ಮಾತನಾಡಿ ಸರಕಾರದಿಂದ ಮಹಿಳೆಯರಿಗಾಗಿ ಇರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಬಂಟ್ವಾಳ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರೀಶ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿಯ ಪ್ರದಾನ ಸಂಚಾಲಕರು ಸುಜಾತ ಅಣ್ಣಿ ಪೂಜಾರಿ ವೇದಿಕೆಯಲ್ಲಿದ್ದರು.
ವಿಶಾಖ್ ಜೆ ಪೂಜಾರಿ ಪ್ರಾರ್ಥಿಸಿದರು ಘಟಕದ ಸಲಹೆಗಾರರಾದ ಅಶ್ವಥ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು .ಮಹಿಳಾ ಸಂಚಾಲನ ಸಮಿತಿಯ ಕಾರ್ಯದರ್ಶಿ ಸುಧಾಮಣಿ ರಮಾನಂದ್ ಸ್ವಾಗತಿಸಿದರು ವೇದಾವತಿ ಪ್ರಭಾಕರ್ ಎಂ ಕೆ ಪ್ರಸಾದ್ ಚಂದ್ರಶೇಖರ ಅಳದಂಗಡಿ ರಾಕೇಶ್ ಬಂಗೇರ ಪರಿಚಯಿಸಿದರು ಪ್ರಜ್ಞಾ ಓಡಿಲ್ನಾಳ ಸಮೀಕ್ಷಾ ಬಾರ್ಲೋಡಿ ನಿರೂಪಿಸಿದರು ಘಟಕದ ಕಾರ್ಯದರ್ಶಿ ವಿಜಯ್ ಶಿರ್ಲಾಲು ವಂದಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!