Yuvavahini

AUG 11, 2019 3.20 PM IST

ಯುವವಾಹಿನಿಯ 32ನೇ ವಾರ್ಷಿಕ ಸಮಾವೇಶದಲ್ಲಿ

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ

ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ

ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿಯನ್ನು,ಶೂನ್ಯದಿಂದ ಉತ್ತುಂಗಕ್ಕೇರಿದ ಸಾಮಾಜಿಕ ಕ್ಷೇತ್ರದ ಸಾಧಕರಾದ ಗೋವಿಂದ ಬಾಬು ಪೂಜಾರಿ ಹಾಗೂ ಅಕ್ಷರ ಕ್ರಾಂತಿಯ ಹರಿಕಾರ ಪ್ರಕಾಶ್ ಅಂಚನ್‍ರವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರವನ್ನು ಹಾಗೂ ಯುವವಾಹಿನಿ ಸಲಹೆಗಾರರಾದ ಬಿ.ತಮ್ಮಯರಿಗೆ ಯುವವಾಹಿನಿ ಜೀವಮಾನ ಸಾಧಕ ಪುರಸ್ಕಾರ ನೀಡಿ ಪುರಸ್ಕರಿಸಲಾಯಿತು. ಸಾಧಕರ ವೃತ್ತಿ ಜೀವನದ ಸಾಧನೆಯನ್ನು ಎಲ್‍ಇಡಿ ಪರದೆಯ ಮೂಲಕ ಅನಾವರಣಗೊಳಿಸಲಾಗಿತ್ತು.

ಸಾಮಾಜಿಕ ಕ್ಷೇತ್ರದ ಸಾಧಕರಾದ ಗೋವಿಂದ ಬಾಬು ಪೂಜಾರಿ ಹಾಗೂ ಅಕ್ಷರ ಕ್ರಾಂತಿಯ ಹರಿಕಾರ ಪ್ರಕಾಶ್ ಅಂಚನ್‍ರವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ

ಈ ಸಂದರ್ಭದಲ್ಲಿ ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ, ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್‍ನಲ್ಲಿನ ಡಾ|ಸಿ.ಕೆ ಅಂಚನ್‍, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ| ರಾಜಶೇಖರ ಕೋಟ್ಯಾನ್‍, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್, ಯುವವಾಹಿನಿ ಕೇಂದ್ರ ಸಮಿತಿ ಸಮಾವೇಶದ ನಿರ್ದೇಶಕ ಶಶಿಧರ್ ಕಿನ್ನಿಮಜಲು, ಯುವವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕೆ.ಅಂಚನ್‍, ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ನಾರಾಯಣ ಪೂಜಾರಿ ಕುರಿಕ್ಕಾರ ಹಾಗೂ ಯುವವಾಹಿನಿ ಸಂಸ್ಥೆಯ 35 ಘಟಕಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಯುವವಾಹಿನಿ ಸಲಹೆಗಾರರಾದ ಬಿ.ತಮ್ಮಯರಿಗೆ ಯುವವಾಹಿನಿ ಜೀವಮಾನ ಸಾಧಕ ಪುರಸ್ಕಾರ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!