Yuvavahini

AUG 11, 2019 3.42 AM IST

ಯುವವಾಹಿನಿಯ ಮುಕುಟದ 32ನೇ ಗರಿ

ನರೇಶ್ ಕುಮಾರ್ ಸಸಿಹಿತ್ಲು

ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು
ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, ಅಸ್ಸಾಂ, ಒರಿಸ್ಸಾ, ದೆಹಲಿ ಸಹಿತ ದೇಶದ ಹತ್ತಕ್ಕೂ ಅಧಿಕ ರಾಜ್ಯದಲ್ಲಿ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಾರ್ಯಕ್ರಮ ನೀಡಿದ್ದಾರೆ. ಇದಲ್ಲದೆ ಚಂದನ ದೂರದರ್ಶನ ವಾಹಿನಿಯಲ್ಲಿ ಐದು ಬಾರಿ ತುಳು ಕಾರ್ಯಕ್ರಮ ನೀಡಿದ ಹಿರಿಮೆ ಇವರದ್ದು. ಒರಿಸ್ಸಾದ ಭುವನೇಶ್ವರದಲ್ಲಿ ನಡೆದಿದ್ದ ಅಂತರ್ ರಾಜ್ಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಿದ್ದ ಇವರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಒಂದು ತಿಂಗಳ ಭಜನಾ ಕಮ್ಮಟದಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ ಭಾಗವಹಿಸಿದ್ದಾರೆ. 100 ಕ್ಕೂ ಅಧಿಕ ಶಾಲಾ ಕಾಲೇಜುಗಳ ಸಾವಿರಾರು ಮಂದಿ ವಿದ್ಯಾರ್ಥಿಗಳಿಗೆ ಜಾನಪದ ನೃತ್ಯ ತರಭೇತಿ ನೀಡಿರುವ ನರೇಶ್ ಕುಮಾರ್ ಇವರು, ಮಕ್ಕಳ ಮಾನಸಿಕ ಬಲಪ್ರವರ್ಧನೆಯನ್ನು ಸಾಂಸ್ಕೃತಿಕ ಚಟುವಟಿಕೆ ಮೂಲಕ ಪರಿಣಾಮಕಾರಿಯಾಗಿ ಮಾಡಲು ಸಾಧ್ಯ ಎನ್ನುವುದನ್ನು ಸಾಬೀತು ಪಡಿಸುವ ಪ್ರಯತ್ನದಲ್ಲಿದ್ದು ಇದಕ್ಕಾಗಿ ಫೇಸ್ ಎನ್ನುವ ಟ್ರಸ್ಟ್ ಕಟ್ಟಿ ಈ ಮೂಲಕ ಹತ್ತಾರು ಕಾರ್ಯಕ್ರಮ ಉಚಿತ ಕೌನ್ಸಿಲಿಂಗ್ ಸೆಂಟರ್ ನಡೆಸುತ್ತಿದ್ದಾರೆ. ತಿಂಗೋಳ್ದ ಬೊಲ್ಪು ಎನ್ನುವ ತುಳು ಕಥಾ ಸಂಕಲನ ಪ್ರಕಟಿಸಿರುವ ಇವರು, ಬೀರೆದ ಡೆನ್ನಾನ ಎನ್ನುವ ತುಳು ಜಾನಪದ ಶೈಲಿಯ ಹಾಡುಗಳ ಸಿ.ಡಿ ನಿರ್ಮಾಣ ಮಾಡಿದ್ದಾರೆ. ಜ್ಯೋತಿರ್ನಾದ, ಬ್ರಹ್ಮಶ್ರೀ ನಾರಾಯಣಗುರು ಮುಂತಾದ ಭಜನಾ ಸಿ.ಡಿಗಳಿಗೆ ಗೀತಾ ಸಾಹಿತ್ಯ ಒದಗಿಸಿದ್ದು, 12 ತುಳು ನಾಟಕ ರಚಿಸಿದ್ದಾರೆ. ಐದು ತುಳು ಸಿನಿಮಾದಲ್ಲಿ ನಟಿಸಿರುವ ಇವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ. ಅಲ್ಲದೆ ಮಂಗಳಾದೇವಿ ಲಯನ್ಸ್ ಕ್ಲಬ್ ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಸಸಿಹಿತ್ಲು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಇವರದ್ದು. ಇವರಿಗೆ ಭಾರತೀಯ ಯುವಜನ ಸೇವಾ ಸಂಘವು 2002ರಲ್ಲಿ ಬಸವಶ್ರೀ ರಾಜ್ಯ ಯುವ ಪ್ರಶಸ್ತಿ ಹಾಗೂ ಯುವವಾಹಿನಿ ಸಂಸ್ಥೆ 2011 ರಲ್ಲಿ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ, ಮತ್ತು ಇವರ ಸಾಹಿತ್ಯಿಕ ಸಾಂಸ್ಕೃತಿಕ ಸೇವೆಯನ್ನು ಗುರುತಿಸಿ ಕರ್ನಾಟಕ ಏಕೀಕರಣ ಪ್ರಶಸ್ತಿ ವಿಜೇತ ಕಿನ್ನಿಗೋಳೀಯ ಯುಗಪುರುಷ ಸಂಸ್ಥೆಯು 2019ನೇ ಸಾಲಿನ ಯುಗ ಪುರುಷ ರಾಜ್ಯೋತ್ಸವ ಪ್ರಶಸ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತವು 2018 ರಲ್ಲಿ ಜಿಲ್ಲಾ ಯುವ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಸ್ತುತ ಬಬ್ಲಿ ಸ್ಮರಣಿಕೆಗಳ ಮಳಿಗೆ ಎನ್ನುವ ತನ್ನ ಸ್ವಂತ ಉದ್ದಿಮೆ ನಡೆಸುತ್ತಿದ್ದಾರೆ.
ಯುವವಾಹಿನಿ ಸಸಿಹಿತ್ಲು ಘಟಕದ ಅಧ್ಯಕ್ಷರಾಗಿ, ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯದರ್ಶಿಯಾಗಿ, ಸಮಾವೇಶ ನಿರ್ದೇಶಕರಾಗಿ, ಸಿಂಚನ ಉಪ ಸಂಪಾದಕರಾಗಿ, ವಿಶುಕುಮಾರ್ ದತ್ತಿನಿಧಿ ಸಂಚಾಲಕರಾಗಿ, ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ ಕಳೆದ ಇಪ್ಪತ್ತು ವರ್ಷಗಳಿಂದ ಯುವವಾಹಿನಿಯ ಸದಸ್ಯರಾಗಿ ಹಲವು ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಹಿರಿಮೆ ಇವರದ್ದು. ಮಿತ ಭಾಷಿ ಹಿತ ನುಡಿ ಸರಳ ವ್ಯಕ್ತಿತ್ವದ ಯುವಕನೇ ಯುವವಾಹಿನಿಯ ಮುಕುಟದ 32ನೇ ಗರಿ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!