Yuvavahini

MAR 12, 2017 11.50 AM IST

ಯುವವಾಹಿನಿ (ರಿ) ಕೂಳೂರು ಘಟಕ

ಕೂಳೂರು ಯುವವಾಹಿನಿ : ಅಭಿವ್ಯಕ್ತಿ ಅಭಿಪ್ರಾಯಗಳ ನಿರೂಪಣೆ

ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಅಭಿವ್ಯಕ್ತಿ – ಅಭಿಪ್ರಾಯಗಳ ನಿರೂಪಣೆ ಕಾರ್ಯಕ್ರಮವು ದಿನಾಂಕ 12.03.2017 ನೇ ಆದಿತ್ಯವಾರ ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದಲ್ಲಿ ಜರುಗಿತು.

ಅಭಿಪ್ರಾಯಗಳ ನಿರೂಪಣೆ ಮಾಡಿದ ಸಹನಾ ಕುಂದರ್ – ಈ ಜಗತ್ತು ಗಂಡು ಹೆಣ್ಣು ಇಬ್ಬರನ್ನೂ ಅವಲಂಬಿಸಿದೆ. ಟಿವಿ ಸೀರಿಯಲ್­ಗಳ ಭ್ರಮೆಯಿಂದ ಮಹಿಳೆಯರು ಹೊರ ಬರಬೇಕು. ನಮ್ಮ ರಕ್ತದಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ನಾವು ಬಲಿಯಾಗಿದ್ದೇವೆ. ಮಹಿಳೆಯರು ಸಂಸ್ಕೃತಿ ಸಂಸ್ಕಾರದ ಬಗ್ಗೆ ಜಾಗೃತರಾದಾಗ ಮಾತ್ರ ವಿಶ್ವ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದರು

ಸ್ರೀ ಸಂವೇದನೆಯನ್ನೇ ದೌರ್ಬಲ್ಯ ಎಂದು ಚಿತ್ರಿಸಿರುವುದು ಸರಿಯಲ್ಲ ಹೆಣ್ಣು ಮಕ್ಕಳಿಗೆ ಸಹಿಷ್ಣುತೆಯ ಪಾಠ ಅಗತ್ಯವಿಲ್ಲ ಅದು ಅವರಿಗೆ ಸಂವೇದನೆಯಲ್ಲಿಯೇ ಬಂದಿದೆ. ಹೆಣ್ಣು ಎಷ್ಟು ಕಷ್ಟ ಅನುಭವಿಸಿದರೂ ಆತ್ಮಹತ್ಯೆ ಮಾಡುಕೊಳ್ಳುವುದಿಲ್ಲ. ದಕ್ಷಿಣ ಭಾರತದ ಮದುವೆಯ ಬಗ್ಗೆ ಇರುವ ಸೌಂದರ್ಯದ ಕಲ್ಪನೆ ಅತಿಯಾಗಿದೆ. ಹೆಣ್ಣನ್ನು ಮನುಷ್ಯರಂತೆ ಕಾಣಬೇಕು ಎಂದು ಅಭಿಪ್ರಾಯಗಳ ನಿರೂಪಣೆ ಮಾಡಿದ ಕುಮಾರಿ ಮಹಾಲಕ್ಷ್ಮಿ ಉಪ್ಪಿನ ಕುದ್ರು ತಿಳಿಸಿದರು.

ಅಭಿವ್ಯಕ್ತಿ 2017 ಸಂವಾದ ನಿರ್ವಹಣೆ ಮಾಡಿದ ಹಿರಿಯ ಸಾಹಿತಿ ಬಿ.ಎಂ. ರೋಹಿಣಿ ಮಾತನಾಡಿ ಸಂಸ್ಕೃತಿ ಉಳಿವಿಗೆ ಕ್ರಮ ತೆಗೆದುಕೊಳ್ಳುವ ಹೊಣೆಯನ್ನು ಮಹಿಳೆಯರ ಮೇಲಷ್ಟೆ ಹೊರಿಸಬಾರದು ಇದರಲ್ಲಿ ಪುರುಷರೂ ಸಮಾನ ಹೊಣೆಗಾರಿಕೆ ವಹಿಸಿಕೊಂಡಾಗ ಮಾತ್ರ ಪರಿಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದರು.

ಶ್ರೀಮತಿ ವಸಂತಿ ಎಸ್ ಸುವರ್ಣ ಸಮಾರಂಭ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಅದ್ಯಕ್ಷ ಪದ್ಮನಾಭ ಮರೋಳಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕೇಂದ್ರ ಸಮಿತಿಯ ಉಪಾಧ್ಯಕ್ಷ ಯಶವಂತ ಪೂಜಾರಿ, ಕೂಳೂರು ಯುವವಾಹಿನಿ ಸಲಹೆಗಾರರಾದ ಪರಮೇಶ್ವರ ಪೂಜಾರಿ,  ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಗುಣವತಿ ರಮೇಶ್, ಕಾರ್ಯದರ್ಶಿ ದೀಕ್ಷಿತ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕರಾದ ಮಧುಶ್ರೀ ವಂದಿಸಿದರು.

ಕೂಳೂರು ಯುವವಾಹಿನಿಯ ಅದ್ಯಕ್ಷ ಸುಜಿತ್ ರಾಜ್ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕಿ ಸುಶೀಲಾ ಐ, ಸುಮತಿ, ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!