Yuvavahini

OCT 20, 2019 4.35 AM IST

ಯುವವಾಹಿನಿ (ರಿ) ಮಾಣಿ ಘಟಕ

ಕ್ರಿಯಾತ್ಮಕ ಮನಸುಗಳ ಸಂಘಟನೆಯೇ ಯುವವಾಹಿನಿ: ಮುದ್ದು ಮೂಡುಬೆಳ್ಳೆ

“ಯುವವಾಹಿನಿವೆಂಬುದು ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಯುವಮನಸ್ಸುಗಳನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ಉತ್ತಮ ರೀತಿಯಲ್ಲಿ ತೊಡಗಿಕೊಳ್ಳುವ ಒಂದು ಅದ್ಭುತ ಸಂಘಟನೆ, ಚಂಚಲತೆಯ ಯುವಮನಸ್ಸುಗಳನ್ನು ಧನಾತ್ಮಕವಾದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಯುವವಾಹಿನಿಯ ಬದ್ಧತೆ ಅಭಿನಂದನೀಯವಾದುದು” ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಹೇಳಿದರು. ಅವರು ದಿನಾಂಕ 20-10- 2019ರ ರವಿವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ(ರಿ.) ಮಾಣಿ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ನೆರವೇರಿಸಿದರು,ಗೆಜ್ಜೆ ಗಿರಿ ನಂದನ ಬಿತ್ತಿಲ್ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ರವರು ಮಾಣಿ ಘಟಕದ ಗತವರ್ಷದ ಒಟ್ಟು ಕಾರ್ಯಚಟುವಟಿಕೆಗಳ ನೆನಪಿನ ಸಂಚಿಕೆ ಮಾಣಿಕ್ಯವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ| ರಾಜಾರಾಮ್ ಅವರು ನೂತನ ಪದಾಧಿಕಾರಿಗಳ ಪದ ಪ್ರದಾನದ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಚುನಾವಣಾಧಿಕಾರಿ ಅಧಿಕಾರಿ ರಾಜೇಶ್ ಪೂಜಾರಿ ಬಾಬಣಕಟ್ಟೆ ಪದಾಧಿಕಾರಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಇದರ ಅಧ್ಯಕ್ಷರಾದ ನಾರಾಯಣ ಸಾಲ್ಯನ್, ಗೌರವಾಧ್ಯಕ್ಷರಾದ ಈಶ್ವರ ಪೂಜಾರಿ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ,ಪುತ್ತೂರು ಉಪವಿಭಾಗದ ಸಹಾಯಕ ಅಂಚೆ ಅಧೀಕ್ಷಕರಾದ ಲೋಕನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ(ರಿ.) ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ರವರು ಮಾತನಾಡಿ ತನ್ನ ಅಧ್ಯಕ್ಷ ಅವಧಿಯಲ್ಲಿ ಸಹಕರಿಸಿದ, ಮಾರ್ಗದರ್ಶನ ನೀಡಿದ
ಸರ್ವರನ್ನು ಸ್ಮರಿಸಿಕೊಂಡರು.2018-19ಸಾಲಿನ ಪದಾಧಿಕಾರಿಗಳಿಗೆಲ್ಲರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಯುವವಾಹಿನಿ(ರಿ.)ಮಾಣಿ ಘಟಕ ಶಾಶ್ವತ ವಿದ್ಯಾನಿಧಿ ಯೊಜನೆಯ ಮೂಲಕ ಘಟಕದ ಸಕ್ರಿಯ ಸದಸ್ಯೆ ಒಬ್ಬರಿಗೆ ಉನ್ನತ ಶಿಕ್ಷಣಕ್ಕಾಗಿ 25,000/- ರೂ ಚೆಕ್ ನೀಡಲಾಯಿತು. ಸ್ಪಂದನ ಯೋಜನೆಯ ಮೂಲಕ 2 ಬಡ ಕುಟುಂಬಗಳಿಗೆ ಸಹಾಯಧನ ವಿತರಿಸಲಾಯಿತು ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಅಭಿನಂದಿಸಲಾಯಿತು.ರಾಷ್ಟ್ರೀಯ ಯುವ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು,ಯುವವಾಹಿನಿ (ರಿ.)ಕೇಂದ್ರ ಸಮಿತಿಯ ನಿ.ಪೂ ಅಧ್ಯಕ್ಷರಾದ ಜಯಂತ್ ನಡುಬೈಲು,ಸಮಾಜ ಸೇವಕ ಸೊಮಪ್ಪ ಪೂಜಾರಿ ಮದೇಲು,ಉದ್ಯಮಿ ಮೋಹನ್ ಕುಮಾರ್,SSLC ಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿ ಪ್ರಜ್ಞಾ,ಬಾಲ ಪ್ರತಿಭೆ ದಿಶಾ ಬರಿಮಾರು ಇವರನ್ನು ಸನ್ಮಾನಿಸಲಾಯಿತು.ಅದೇ ರೀತಿ ನಮ್ಮ ಹೆಮ್ಮೆಯ ಸದಸ್ಯರಾದ,ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಶ್ರೀ ಮತಿ ತ್ರಿವೇಣಿ ರಮೇಶ್ ಪೂಜಾರಿ, ಯುವವಾಹಿನಿ ಸಾಧಕ ಪ್ರಶಸ್ತಿ ಪಡೆದ ಘಟಕದ ಉಪಾಧ್ಯಕ್ಷರು ಪ್ರಶಾಂತ್ ಅನಂತಾಡಿ ಅವರನ್ನು ಅಭಿನಂದಿಸಲಾಯಿತು.

ಯುವವಾಹಿನಿ (ರಿ.) ಮಾಣಿ ಘಟಕದ ನಿರ್ಗಮಿತ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಇವರನ್ನು ದಂಪತಿ ಸಮೇತವಾಗಿ ಸದಸ್ಯರ ವತಿಯಿಂದ ಸನ್ಮಾನಿಸಲಾಯಿತು. ನಿಯೋಜಿತ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಲ ಮುಂದಿನ ವರ್ಷದ ಯುವವಾಹಿನಿ ಘಟಕದ ಕಾರ್ಯಚಟುವಟಿಕೆಗಳಿಗೆ ಎಲ್ಲರ ಸಹಕಾರವನ್ನು ಕೇಳಿದರು.

ಘಟಕದ ಕಾರ್ಯದರ್ಶಿ ಸುಜಿತ್ ಅಂಚನ್ ಗತವರ್ಷದ ವರದಿಯನ್ನು ಆಡಿಯೊ-ವಿಡಿಯೋ ವಿಧಾನದಲ್ಲಿ ಸವಿಸ್ತಾರವಾಗಿ ಮಂಡಿಸಿದರು. ಉಪಾಧ್ಯಕ್ಷ ಪ್ರಶಾಂತ್ ಅನಂತಾಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಶಿವರಾಜ್ ಪಿ.ಅರ್ ಧನ್ಯವಾದ ಸಮರ್ಪಿಸಿದರು.ಘಟಕದ ಸದಸ್ಯರಾದ ದಿನಕರ್ ಬರಿಮಾರು,ದೀಪಕ್ ಪೆರಾಜೆ,ತೃಪ್ತಿ ಮಿತ್ತೂರು ಮತ್ತು ರಾಜೇಶ್ ಬಲ್ಯ ಕಾರ್ಯಕ್ರಮ ನಿರ್ವಹಿಸಿದರು.ಸ್ವರ್ಣಜ್ಯೊತ್ಸ ಹಾಗೂ ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪ್ರಾರ್ಥನೆ ಮಾಡಿದರು.ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರುಗಳು,ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಬಿಲ್ಲವ ಸಮಾಜ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!