Yuvavahini

SEP 21, 2019 10.10 AM IST

ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿ : “ಸಮಾಜದ ಪ್ರಗತಿಯಲ್ಲಿ ನಾರಾಯಣ ಗುರುಗಳು” ವಿಚಾರ ಮಂಡನೆ

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.),
ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿ.ವಿ,
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ಯುವವಾಹಿನಿ (ರಿ.)ಪಡುಬಿದ್ರಿ ಘಟಕದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿಯು ದಿನಾಂಕ 21/09/2019 ರಂದು ಅರ್ಥಪೂರ್ಣವಾಗಿ ಜರುಗಿತು.
 ಈ ಕಾರ್ಯಕ್ರಮವು ಕುಮಾರಿ ಐಶ್ವರ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಾರಾಯಣ ಗುರುಗಳ ಬಗೆಗಿನ ವಿಷಯಗಳನ್ನು ಘಟಕದ ಹಿರಿಯ ಸದಸ್ಯರಾದ, ಪಡುಬಿದ್ರಿ ನಾರಾಯಣಗುರು ಮಂದಿರದ ಅರ್ಚಕರಾದ ಚಂದ್ರಶೇಖರ ಶಾಂತಿ  ಪ್ರಸ್ತಾಪಿಸಿದರು
  ಯುವವಾಹಿನಿ (ರಿ.)ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಉದ್ಘಾಟಿಸಿ  ಮಾತನಾಡಿ ಘಟಕದ ಕಾರ್ಯಕ್ರಮದ ಬಗ್ಗೆ  ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ “ಸಮಾಜದ ಪ್ರಗತಿಯಲ್ಲಿ ನಾರಾಯಣ ಗುರುಗಳು”ಎಂಬ  ವಿಚಾರ ಮಂಡನೆಗಾಗಿ ವಿವಿಧ ಘಟಕಗಳ ಸದಸ್ಯರು ಆಗಮಿಸಿದ್ದರು.
 ಉಡುಪಿ ಘಟಕದ ಶ್ರೇಯಸ್ ಕೋಟ್ಯಾನ್ ವಿಶೇಷವಾಗಿ ನಾರಾಯಣ ಗುರುಗಳ ಕುರಿತಾದ ವಿಚಾರವನ್ನು ಮಂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ತದನಂತರ ಅಡ್ವೆ ಘಟಕದ ಶಶಿಧರ್ ಪೂಜಾರಿ, ಮೂಲ್ಕಿ ಘಟಕದ ಮೋಹನ್ ಸುವರ್ಣ ತಮ್ಮ ವಿಚಾರಗಳನ್ನು ಅತ್ಯುತ್ತಮ ರೀತಿಯಲ್ಲಿ ಮಂಡಿಸಿದರು,ಉಡುಪಿ ಘಟಕದ ಅಮಿತಾಂಜಲಿ ಅವರು ತಮ್ಮ ವಿಚಾರವನ್ನು ಮಂಡಿಸಿದರು.
  ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ತಮ್ಮ ಸಮನ್ವಯ ಭಾಷಣದಲ್ಲಿ ಉತ್ತಮ ಸಂಘಟನೆಯಿಂದ ಸಮಾಜದ ಪ್ರಗತಿ ಸಾಧ್ಯ ಎಂಬುದನ್ನು ಪ್ರತಿಪಾದಿಸಿದರು.
  ಸಭಾ ವೇದಿಕೆಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಅಧ್ಯಕ್ಷರಾದ ವೈ.ಸುಧೀರ್ ಕುಮಾರ್, ಯುವವಾಹಿನಿ (ರಿ.) ಕೇಂದ್ರ ಸಮಿತಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಜಗದೀಶ್ ಸುವರ್ಣ ಉಪಸ್ಥಿತರಿದ್ದು ತಮ್ಮ ವಿಚಾರ ಧಾರೆಯನ್ನು ಹರಿಸಿದರು. ಯುವವಾಹಿನಿ (ರಿ.) ಪಡುಬಿದ್ರಿ ಘಟಕದ  ಅಧ್ಯಕ್ಷರಾದ ಯೋಗೀಶ್ ಪೂಜಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಪೂಜಾರಿ, ಪಡುಬಿದ್ರಿ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ಅಶ್ವಥ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಪಡುಬಿದ್ರಿ ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು. ರವಿರಾಜ್  ಕೋಟ್ಯಾನ್, ಶೈಲಜಾ ಕಾರ್ಯಕ್ರಮ ನಿರ್ವಹಿಸಿದರು, ಕಾರ್ಯದರ್ಶಿ ಯಶೋದ ಧನ್ಯವಾದ ಸಲ್ಲಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!