Yuvavahini

SEP 16, 2019 4.30 PM IST

ಯುವವಾಹಿನಿ (ರಿ.) ಕಂಕನಾಡಿ ಘಟಕ

ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿ : ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ

ಯುವವಾಹಿನಿ (ರಿ.)ಕಂಕನಾಡಿ ಘಟಕದ ವತಿಯಿಂದ ದಿನಾಂಕ 15.09.2019ರಂದು  ಆದಿತ್ಯವಾರ ಸಂಜೆ 5 ಕ್ಕೆ ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿಯ ಪ್ರಯುಕ್ತ ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರು  ಶ್ರೀನಿವಾಸ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಪಿ ಎಲ್ ಧರ್ಮ ಮುಖ್ಯ ಭಾಷಣಕಾರರಾಗಿ ಮಾತನಾಡಿ ನಾರಾಯಣ ಗುರುಗಳ ತತ್ವ ಸಂದೇಶ ಮತ್ತು ಬ್ರಹ್ಮಶ್ರೀ ನಾರಾಯಣಗುರು ಜಯಂತಿಯ ಮಹತ್ವದ ಬಗ್ಗೆ ಮಾತನಾಡಿದರು.
ಘಟಕದ ಅಧ್ಯಕ್ಷರಾದ ಸುರೇಶ್ ಎಂ ಎಸ್ಅಧ್ಯಕ್ಷತೆ ವಹಿಸಿದ್ದರು ಘಟಕದ ಸಲಹೆಗಾರರಾದ ಜಯರಾಂ ಕಾರಂದೂರು  ಉಪಸ್ಥಿತರಿದ್ದರು
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಯಶವಂತ ಪೂಜಾರಿ ಮತ್ತು ನಿಕಟಪೂರ್ವ ಅಧ್ಯಕ್ಷರಾದ ಜಯಂತ ನಡುಬೈಲ್* ಇವರನ್ನು ಸನ್ಮಾನಿಸಲಾಯಿತು.
ನಿಸ್ವಾರ್ಥ ಸಮಾಜಸೇವೆ ಸಲ್ಲಿಸಿದ ಶ್ರೀ ವಸಂತ ಮತ್ತು  ಆಟೋಟಗಳಲ್ಲಿ *ರಾಷ್ಟ್ರ ಮಟ್ಟದ ಸಾಧನೆಗೈದ ಕು. ಭ್ರಾಮರಿ* ರವರನ್ನು ಸನ್ಮಾನಿಸಲಾಯಿತು.
SSLC ಮತ್ತು PUC ಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಅಂಕ ಗಳಿಸಿದ ಎಂಟು ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.
ಪ್ರಾಥಮಿಕ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಂಗೋಲಿ, ಹಾಡುಗಾರಿಕೆ, ಚಿತ್ರಕಲೆ ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಘಟಕದ ಕಾರ್ಯದರ್ಶಿ ಪ್ರಥ್ವಿ ರಾಜ್, ತೀರ್ಪುಗಾರರದ ವಿದ್ಯಾ ಹರೀಶ್ ಹಾಗೂ ಸಿಂಚನ ಬಹುಮಾನ ವಿತರಿಸಿದರು.
ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹರೀಶ್ ಕೆ ಸನಿಲ್ ಪ್ರಾಸ್ತಾವಿಕ ಮಾತನಾಡಿದರು.  ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಕುಮಾರ್ ಮತ್ತು ಘಟಕದ ಸದಸ್ಯರಾದ ದೇವಕಿ ಕಿಶೋರ್ ಹಾಗೂ ರೋಹಿತ್ ಕಾರ್ಯಕ್ರಮ ನಿರೂಪಿಸಿದರು.  ಕಾರ್ಯಕ್ರಮದ ಸಂಚಾಲಕರಾದ ರಾಹುಲ್ ಧನ್ಯವಾದವಿತ್ತರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!