Yuvavahini

SEP 08, 2019 4.48 PM IST

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕ

ಸೋಣ ಸಂಭ್ರಮ

ದಿನಾಂಕ 08/09/2019 ರಂದು ಯುವವಾಹಿನಿ ಸಭಾಂಗಣದಲ್ಲಿ ಸೋಣ ಸಂಭ್ರಮ ಕಾರ್ಯಕ್ರಮವು ಬೆಳಗ್ಗೆ 9:30ರಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮಾಶ್ರೀಕಾಂತ್ ವಹಿಸಿಕೊಂಡಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಗೋಕರ್ಣನಾಥೇಶ್ವರ ಬಿ ಎಡ್ ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಉದ್ಘಾಟಿಸಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ನಾನು ಕಲಿತೆ ಹಾಗೂ ಈ ಸಂಸ್ಕೃತಿ ಮುಂದಿನ ಪೀಳಿಗೆಗೆ ತಿಳಿಸಿವ ಕೆಲಸ ನಮ್ಮಿಂದ ಆಗಬೇಕು ಹಾಗಾಗಿ ಆದಷ್ಟು ಮಕ್ಕಳನ್ನು ಜೋಡಿಸಿಕೊಳ್ಳುವಂತೆ ತಿಳಿಸಿದರು.ನಂತರ  ಶಕ್ತಿ ಎಜುಕೇಶನ್ ಟ್ರಸ್ಟ್ ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ್  ಆಚಾರ್ಯ ಸೋಣದ ಮದಿಪನ್ನು ನೀಡಿ ದರು.ನಮ್ಮ ಸಂಸ್ಕೃತಿ,ಸಂಪ್ರದಾಯ,ಸಂಸ್ಕಾರದ ಬಗ್ಗೆ ಮಾತನಾಡಿದರು. ಸೋಣದಲ್ಲಿ ಉಪವಾಸ, ವೃತ,ಪಂಚಾಕ್ಷರಿ ಪಠಣಗಳನ್ನು ಮಾಡಬೇಕು.ಆಧ್ಯಾತ್ಮಿಕ ಸಾಧನೆಗೆ ಸೂಕ್ತವಾದ ಸಮಯ ಸೋಣ ತಿಂಗಳು ಎಂದು ಹೇಳಿದರು.ನಂತರ ಇನ್ನೋರ್ವ ಮುಖ್ಯ ಅತಿಥಿ ಕೇಂದ್ರಸಮಿತಿಯ ಅಧ್ಯಕ್ಷರಾದ ನರೇಶ್ ಸಸಿಹಿತ್ಲು ಮಾತನಾಡಿ ಮಹಿಳಾ ಘಟಕದ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಘಟಕದಸಲಹೆಗಾರರಾದ ಜಿತೇಂದ್ರ ಜೆ ಸುವರ್ಣ , ಸಂಚಾಲಕರಾದ ಶಕೀಲಾ ದಾಮೋದರ್ ಉಪಸ್ಥಿತರಿದ್ದರು. ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಸ್ಪರ್ದಿಗಳಿಗೆ ಬಹುಮಾನ ನೀಡಲಾಯಿತು.ನಂತರ ಪ್ರತಿ ವರುಷ ಸೋಣ ಸಂಭ್ರಮಕ್ಕೆ ವೇದಿಕೆಯನ್ನು ಅಲoಕಾರಮಾಡುವ ವಿಶ್ವನಾಥ್ ಪಂಡಿತ್ ಇವರನ್ನು ಸನ್ಮಾನಿಸಲಾಯಿತು. ವಿವಿಧ ಖಾದ್ಯಗಳನ್ನು ತಯಾರಿಸಿದ ಸದಸ್ಯರಿಗೆ ಹೂಕೊಟ್ಟು ಗೌರವಿಸಲಾಯಿತು. ಕಾರ್ಯದರ್ಶಿಯಾದ ನೈನ ವಿಶ್ವನಾಥ್ ಧನ್ಯವಾದ ನೀಡಿದರು.ನಂತರ ಘಟಕದ ಸದಸ್ಯರಿಂದ ಹಾಗೂ ಅವರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನಿರೂಪಣೆಯನ್ನು ವಿಧ್ಯಾರಾಕೇಶ್,ಸುಪ್ರೀತ ಹಾಗೂ ರವಿಕಲಾ ಯಶವoತ್ ನಡೆಸಿಕೊಟ್ಟರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!