Yuvavahini

SEP 05, 2019 5.32 PM IST

ಯುವವಾಹಿನಿ (ರಿ) ಮೂಡಬಿದಿರೆ‌ ಘಟಕ

ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆಯನ್ನು ಶ್ರೀಮತಿ ಲಲಿತಾ ಹಾಗೂ ಓಬಯ್ಯ ಪೂಜಾರಿ ದಂಪತಿಗಳ ಬಡಕುಟುಂಬವೊಂದು ತನ್ನ 4 ಮಕ್ಕಳೊಂದಿಗೆ ಬೆಳ್ತಂಗಡಿ ತಾಲೂಕಿನ ಪೆರಿಂಜೆಯಲ್ಲಿ ವಾಸವಾಗಿದ್ದು ಹಿಂದಿನಿಂದಲೂ ಕೂಲಿ ಕೆಲಸ ಹಾಗೂ ಬೀಡಿ ಕಟ್ಟುತ್ತಾ ತುಂಬಾ ಕಷ್ಟಕರ ಜೀವನವನ್ನು ನಡೆಸುತ್ತಾ ತನ್ನ ಮಕ್ಕಳಿಗೆ ತಮಗೇ ಸಾಧ್ಯವಿದ್ದಷ್ಟು ವಿದ್ಯಾಭ್ಯಾಸ ಕೊಟ್ಟು ಹಿರಿಮಗಳಿಗೆ ಸಾಲ ಸೋಲ ಮಾಡಿ ಮದುವೆ ಮಾಡಿ ವರ್ಷ ಒಂದು ಆಗುವಷ್ಟರಲ್ಲಿ ಸಾಕಿ ಸಲಹಿದ ಕುಟುಂಬದ ಯಜಮಾನ ಓಬಯ್ಯ ಪೂಜಾರಿ ಅಪಘಾತ ಒಂದರಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾರೆ.ಮುಂದೆ ಮಕ್ಕಳನ್ನು ಸಾಕಿ ಬೆಳೆಸುವ ಜವಾಬ್ದಾರಿ ತಾಯಿಯ ಮೇಲೆ ಬಿದ್ದಾಗ ಒಬ್ಬಾಕೆಯ ಸಂಪಾದನೆಯಲ್ಲಿ ಕುಟುಂಬದ ನಿರ್ವಹಣೆ ಕಷ್ಟವಾಗಿ ಮಕ್ಕಳ ವಿದ್ಯಾಭ್ಯಾಸವನ್ನು ಮೊಟಕು ಗೊಳಿಸಿ ಬೀಡಿ ಕಟ್ಟುತ್ತಾ ಜೀವನ ನಡೆಸುತ್ತಿದ್ದರು. ಎರಡನೇ ಮಗಳು ಸುಚಿತ್ರ ಳನ್ನು ಮತ್ತೆ ಅದೇ ಸಾಲದ ಸುಳಿಯಲ್ಲಿದ್ದುಕೊಂಡು ಬೆಳ್ತಂಗಡಿಯ ಸಂತೋಷ್ ಪೂಜಾರಿ ಎಂಬ ಯುವಕನಿಗೆ ಮಗಳನ್ನು ಮದುವೆ ಮಾಡಿಸಿ ಕೊಡುತ್ತಾರೆ. ಮದುವೆಯಾಗಿ ತಿಂಗಳು 10 ಕಳೆದಿದೆ. ತಮ್ಮ ದಾಂಪತ್ಯ ಜೀವನದ ಫಲವಾಗಿ ಹೊಟ್ಟೆಯಲ್ಲಿ 6 ತಿಂಗಳ ಕೂಸೊಂದು ಬೆಳೆಯುವಸ್ಟರಲ್ಲಿ ಹೆಣ್ಣು ಮಗಳು ಸುಚಿತ್ರ ವಿಧಿಯ ವಕ್ರದೃಷ್ಠಿಗೆ ಬೀಳುತ್ತಾಳೆ.ಮೆದುಳು ಸಂಬಂಧಿತ ಮಾರಕ ಕಾಯಿಲೆ ಒಂದು ಆಕೆಯನ್ನು ಆವರಿಸಿ ಹಾಸಿಗೆ ಹಿಡಿದಿದ್ದಾಳೆ.ಮಂಗಳೂರಿನ A J ಆಸ್ಪತ್ರೆಯಲ್ಲಿ ಕೋಮಾವಸ್ಥೆಯಲ್ಲಿ ಸುಮಾರು ದಿನಗಳು ಕಳೆದು ಹೋಗಿದೆ.ತೀರಾ ಬಡತನದಿಂದಿರುವ ಈ ಕುಟುಂಬಕ್ಕೆ ಅಷ್ಟೊಂದು ದೊಡ್ಡ ಮೊತ್ತದ ಹಣವನ್ನು ಹೊಂದಿಸಿಕೊಳ್ಳಲಾಗದೆ *ಇವರು ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು. ಆದ್ದರಿಂದ ಇವರ ಕುಟುಂಬಕ್ಕೆ ರೂ.5000/- ಚೆಕ್ ನ್ನು 5.9.2019 ರಂದು ಹಸ್ತಾಂತರಿಸಿದರು ಈ ಸಂದರ್ಭದಲ್ಲಿ ಯುವವಾಹಿನಿ ರಿ. ಮೂಡಬಿದಿರೆ‌ ಘಟಕ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ ಕೆ, ಉಪಾಧ್ಯಕ್ಷರಾದ ಹರಿಪ್ರಸಾದ್ ಪಿ ಹೊಸಂಗಡಿ, ಘಟಕದ ಸಲಹೆಗಾರರಾದ ಸುಶಾಂತ್ ಕರ್ಕೆರ ಸದಸ್ಯರಾದ ಭರತ್  ಕರ್ಕೇರ ಮತ್ತು ಪೆರಿಂಜೆ ಫ್ರೆಂಡ್ಸ್ ಕ್ಲಬ್ ನ  ಅಧ್ಯಕ್ಷರಾದ ಸಚ್ಚಿದಾನಂದ  ಇವರಗಳು ಉಪಸ್ಥಿತರಿದ್ದರು ಇವರುಗಳಿಗೆ ಯುವ ಸ್ಪಂದನ ಸೇವಾ ಯೋಜನೆಯ ಸರ್ವ ಸದಸ್ಯರ ಪರವಾಗಿ ಧನ್ಯವಾದಗಳು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!