Yuvavahini

NOV 03, 2019 4.12 PM IST

ಯುವವಾಹಿನಿ (ರಿ) ಕುಪ್ಪೆಪದವು ಘಟಕ

ಬೇಸಾಯದ ಕಡೆಗೆ ನಮ್ಮ ನಡೆ

ದಿನಾಂಕ 03/11/2019 ರಂದು ಪೂರ್ವಾಹ್ನ 7.00ಘಂಟೆಗೆ ಬೇಸಾಯದ ಕಡೆಗೆ ನಮ್ಮ ನಡೆ ಎಂಬ ಪರಿಕಲ್ಪನೆಯಲ್ಲಿ ಇಂದು ನಮ್ಮ ಘಟಕದ ವತಿಯಿಂದ ಎಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಬಹಳ ಆಸಕ್ತಿದಾಯಕವಾಗಿ ಮತ್ತು ಸಮರ್ಪಣಾ ಭಾವದಿಂದ ನಾಗಂದಡಿಯ ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದೆವು. ಕೇವಲ ಒಂದು ಗಂಟೆಯಲ್ಲಿ ಒಂದು ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯಕ್ರಮವನ್ನು ಪರಿಪೂರ್ಣಗೊಳಿಸಿದೆವು.ಇಂದಿನ ದಿನಗಳಲ್ಲಿ ಯುವ ಜನತೆಯು ಕೃಷಿಯತ್ತ ಒಲವು ಪ್ರದರ್ಶಿಸದ ಈ ಸಮಯದಲ್ಲಿ, ನಮ್ಮ ಘಟಕವು ಯುವಜನತೆಯನ್ನು ಒಗ್ಗೂಡಿಸಿ , ಈ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸುವ ಮೂಲಕ  ರೈತ ಸಮುದಾಯಕ್ಕೆ  ವಂದನೆ ಸಲ್ಲಿಸುವತ್ತ ನಮ್ಮ ಹೆಜ್ಜೆ ಸಾಗುತ್ತಿದೆ.

ಭತ್ತದ ಕಟಾವು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ನಂತರ ನಮ್ಮ ಘಟಕದ ಸಕ್ರಿಯ ಸದಸ್ಯೆಯಾಗಿರುವ   ಕುಮಾರಿ  ಹರ್ಷಿತ ಇವರು 14/11/2019 ರಂದು ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಆ ಪ್ರಯುಕ್ತ ನಮ್ಮ ಘಟಕದ ವತಿಯಿಂದ ಅವರಿಗೆ ರೂಪಾಯಿ 5000/- ಯ ಆರ್ಥಿಕ ನೆರವು ನೀಡಲಾಯಿತು. ನಮ್ಮ ಘಟಕದ ಅಧ್ಯಕ್ಷರು ಈ ಧನ ಸಹಾಯವನ್ನು  ಹಸ್ತಾಂತರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!