Yuvavahini

NOV 01, 2019 4.28 PM IST

ಯುವವಾಹಿನಿ (ರಿ) ಕಡಬ ಘಟಕ

ಉಚಿತ ಐಡಿ ಕಾರ್ಡ್ ವಿತರಣೆ

ಕಡಬ : ವಿದ್ಯೆ,ಉದ್ಯೋಗ ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ(ರಿ) ಕಡಬ ಘಟಕದ ವತಿಯಿಂದ ನ.೧ರಂದು ಕೋಡಿಂಬಾಳ ಸ.ಮಾ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಆರ್ಯಭಟ ಪುರಸ್ಕೃತ ರವಿ ಕಕ್ಕೆಪದವು ಅವರು ಶಾಲಾ ಮಕ್ಕಳಿಗೆ ಐಡಿಕಾರ್ಡನ್ನು ವಿತರಿಸಿ ಸಂಘಟನಾತ್ಮಕವಾಗಿ ಬೆಳೆಯುತ್ತಿರುವ ಯುವವಾಹಿನಿ ಸಂಘಟನೆಯು ಸಮಾಜಮುಖಿಯಾಗಿ ಅವಿರತ ಶ್ರಮಿಸುತ್ತಿದ್ದು ವಿವಿಧ ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಸೇವೆಯೆ ಜನಾರ್ದನ ಸೇವೆ ಎಂದು ಎಲ್ಲರ ಶ್ರೇಯೋಬಿವೃದ್ಧಿಯಲ್ಲಿ ತೊಡಗಿಕೊಂಡಿದ್ದು ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುವ ನಮ್ಮ ಸಂಘಟನೆ ಇಂದು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಐಡಿ ವಿತರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷರಾದ ಸುರೇಶ್ ಕೆ ವಹಿಸಿದ್ದರು. ಯುವವಾಹಿನಿ ಕಾರ್ಯದರ್ಶಿ ಶಿವಪ್ರಸಾದ್ ಮಾಚಿಲ, ಯೋಗೀಶ್ ಕುಮಾರ್ ಅಗತ್ತಾಡಿ, ಜಯಂತ ಪೂಜಾರಿ ನೆಕ್ಕಿಲಾಡಿ, ಶಾಲಾ ಮುಖ್ಯಗುರುಗಳಾದ ಕಾಮರಾಜ ಕೆ.ಸಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕ ವೃಂದ, ಪೋಷಕರು, ಎಸ್‌ಡಿಎಮ್‌ಸಿ ಸದಸ್ಯರು, ಯುವವಾಹಿನಿ(ರಿ) ಕಡಬ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಯುವವಾಹಿನಿ(ರಿ)ಕಡಬ ಘಟಕದ ಅಧ್ಯಕ್ಷ ಜನಾರ್ಧನ ಬಿ.ಎಲ್ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. , ಸಹಶಿಕ್ಷಕ ನೀಲಯ್ಯ ನಾಯ್ಕ ವಂದಿಸಿದರು. ಸಹಶಿಕ್ಷಕಿ ಪವಿತ್ರ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!