Yuvavahini

JAN 11, 2022 1.41 PM IST

ಯುವವಾಹಿನಿ ಸಂಸ್ಥೆಯ ಆರೋಗ್ಯ ಮಂತ್ರ ಸೇವಾ ಯೋಜನೆಯ ಅಂಗವಾಗಿ

ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಹಸ್ತಾಂತರ

ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು  ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು.

ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್

ಅಸತ್ರೆಯ ಸೆಮಿನಾರ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ ಸೌಲಭ್ಯ ನೀಡುವಲ್ಲಿ ಸರಕಾರದ ಜತೆ ಸಂಘ ಸಂಸ್ಥೆಗಳು ಕೈಜೋಡಿಸುವ ಕೆಲಸ ಮಾಡುತ್ತಿವೆ. ಯುವವಾಹಿನಿ ಕೂಡ ಹಲವಾರು ವರ್ಷಗಳಿಂದ ಸಮಾಜ ಸೇವೆ ಯಲ್ಲಿ ತೊಡಗಿಸಿಕೊಂಡಿದೆ ಎಂದರು.
ವೆಸ್ಲಾಕ್ ಆಸ್ಪತ್ರೆಯಲ್ಲಿರುವ ಡಯಾಲಿಸಿಸ್ ಕೇಂದ್ರ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆಸ್ಪತ್ರೆಯಲ್ಲಿ ಒಟ್ಟು 19 ಡಯಾಲಿಸಿಸ್ ಯಂತ್ರ ಗಳಿದ್ದು, ಅದರಲ್ಲಿ ಸರಕಾರ 10 ಯಂತ್ರಗಳನ್ನು ನೀಡಿದರೆ, ಸಂಘ ಸಂಸ್ಥೆಗಳು 9 ಡಯಾಲಿಸಿಸ್ ಯಂತ್ರ ಗಳನ್ನು ನೀಡುವ ಮೂಲಕ ಸಮಾಜದ ಒಳಿತಿಗೆ ಕೆಲಸ ಮಾಡುತ್ತಿವೆ.

ಸ್ಪಂದಿಸುವ ಕೆಲಸ ಆಗಲಿ : ಡಾ.ಭರತ್ ಶೆಟ್ಟಿ

ಮುಖ್ಯ ಅತಿಥಿಯಾಗಿದ್ದ ಶಾಸಕ ಡಾ.ವೈ. ಭರತ್‌ ಶೆಟ್ಟಿ ಮಾತನಾಡಿ, ಯುವವಾಹಿನಿ ವತಿಯಿಂದ ಇನ್ನಷ್ಟು ಸಮಾಜಮುಖಿ ಕಾರ್ಯಗಳು ನಡೆಯಲಿ, ಸಮಾಜದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಆಗಲಿ ಎಂದು ಶುಭ ಹಾರೈಸಿದರು.

ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಮಾತನಾಡಿ, ಸಂಘ ಸಂಸ್ಥೆಗಳು ಇಂತಹ ಸೇವೆಯನ್ನು ಮಾಡಿದಾಗ ಆಸ್ಪತ್ರೆಗಳು ಅಭಿವೃದ್ಧಿ ಹೊಂದಲು ಸಾಧ್ಯ, ಕೆಲವೊಂದು ಸಂಘ ಸಂಸ್ಥೆಗಳು ಸಾರ್ವಜನಿಕರಿಂದ ದೇಣಿಗೆ ಪಡೆದು, ಸಮಾಜಕ್ಕೆ ಕೊಡುಗೆ ನೀಡುವ ಕೆಲಸ ಮಾಡುತ್ತಿವೆ. ಆದರೆ ಯುವವಾಹಿನಿ ಅದಕ್ಕೆ ಭಿನ್ನವಾಗಿ ದುಡಿಮೆಯ ಹಣವನ್ನು ಮೀಸಲಿಟ್ಟು ಇಂತಹ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವೆನ್‌ಲಾಕ್ ಆಸ್ಪತ್ರೆ ಡಿಎಂಒ ಡಾ. ಸದಾಶಿವ, ಮೂತ್ರ ರೋಗ ತಜ್ಞ ಡಾ. ಸದಾನಂದ ಪೂಜಾರಿ, ಎಸ್ತಾಗ್ ಸಂಜೀವಿನಿ ಲಿಮಿಟೆಡ್ ಆಡಳಿತಾಧಿಕಾರಿ ಹೃತಿಕ್, ಇಂಡಸ್‌ಕೇರ್ ಇಪ್‌ಮೆಂಟ್ಸ್‌ನ ಮಾಲಕ ಶ್ರೀನಿವಾಸ್ ಕೂಳೂರು, ಯುವವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್‌ ಪಡ್ಡು ಉಪಸ್ಥಿತರಿದ್ದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕ ಭಾಸ್ಕರ್ ಕೋಟ್ಯಾನ್ ಕೂಳೂರು ವಂದಿಸಿ, ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!