Yuvavahini

FEB 20, 2022 2.26 PM IST

ಯುವವಾಹಿನಿ‌ ಯಡ್ತಾಡಿ ಘಟಕದ ಪದಸ್ವೀಕಾರ ಸಮಾರಂಭ

ಯುವವಾಹಿನಿಯ ಸಮಾಜಮುಖಿ ಚಿಂತನೆಗಳು ಹೊಸ ಭವಿಷ್ಯಕ್ಕೆ ಮುನ್ನುಡಿ : ಕೋಟ ಶ್ರೀನಿವಾಸ ಪೂಜಾರಿ

ಕೋಟ: ಸಂಘಟನೆಗಳು ಸಮಾಜದ ಶ್ರೇಯಸ್ಸಿಗಾಗಿ ಸಮಾಜಮುಖಿ ಚಿಂತನೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ನೊಂದವರ, ಅಶಕ್ತರ ಬಾಳಿಗೆ ಬೆಳಕಾಗಿ ಹೊಸ ಮುನ್ನುಡಿ ಬರೆಯುತ್ತಿದೆ. ಈ ನಿಟ್ಟಿನಲ್ಲಿ ಯುವವಾಹಿನಿ(ರಿ) ಯಡ್ತಾಡಿ ಘಟಕ ಹಲವಾರು ಸಮಾಜ ಸೇವೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯ ಸ್ಥಾಪನೆಯ ಉದ್ದೇಶದಂತೆ ಹೆಜ್ಜೆ ಹಾಕುತ್ತಿರುವುದು ಶ್ಲಾಘನೀಯ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಯಡ್ತಾಡಿ ಶ್ರೀಕೃಷ್ಣ ನಿಲಯದ ವಠಾರದಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ ಪದಸ್ವೀಕಾರ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೂರ್ತೆದಾರರ ಸೇವಾ ಸಹಕಾರಿ ಸಂಘ(ನಿ)ಕೋಟದ ಅಧ್ಯಕ್ಷರಾದ ಕೊರಗ ಪೂಜಾರಿ ಸಂದಿಗ್ಧ ಪರಿಸ್ಥಿತಿಯಲ್ಲಿ ಸಂಘಟನೆಗಳು ಸಮಾಜದ ಒಳಿತಿಗಾಗಿ ಮುಂದೆ ಬಂದು ಕಾರ್ಯವೆಸಗಬೇಕು. ಸಾಧಕರನ್ನು ಗುರುತಿಸಿ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಇದರಿಂದ ಹಲವರಿಗೆ ಪ್ರೇರಣೆಯಾಗಿ ಸಾಧನೆ ಮಾಡಲು ಸಾಧ್ಯವಾಗಬಹುದೆಂದು ಹೇಳಿದರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಯಡ್ತಾಡಿ ಘಟಕದ 2022-23 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ, ಪೋಲಿಸ್ ಇಲಾಖೆಯಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಶಂಕರ್ ಪೂಜಾರಿ ಕಾಡಿನತಾರು, ಅಗ್ನಿಶಾಮಕದಳದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ನಾಗರಾಜ ಪೂಜಾರಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಯಕ್ಷಗಾನ ಕಲಾವಿದ ಸೀತಾರಾಮ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿಯ ಅಧ್ಯಕ್ಷರಾದ ರಾಜು ಪೂಜಾರಿ ವಹಿಸಿದ್ದರು. ವೇದಿಕೆಯಲ್ಲಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆರೋಗ್ಯಾಧಿಕಾರಿ ಡಾ. ಪ್ರದೀಪ, ಸ್ವಾಗತ್ ವಿವಿದೋದ್ದೇಶ ಸಹಕಾರಿ ಸಂಘ (ನಿ) ಬಾರಕೂರು ಅಧ್ಯಕ್ಷರಾದ ಸುಬ್ರಹ್ಮಣ್ಯ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳು, ಯುವವಾಹಿನಿ ಯಡ್ತಾಡಿ ಘಟಕದ ಕಾರ್ಯದರ್ಶಿ ಅಜಿತ್ ಕುಮಾರ್ ಪೂಜಾರಿ, ನಿಯೋಜಿತ ಅಧ್ಯಕ್ಷ ಸೋಮಪ್ಪ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಸುಶಾಂತ್ ಪೂಜಾರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!