Yuvavahini

MAR 08, 2022 5.00 AM IST

ಯುವವಾಹಿನಿ‌ ಮುಲ್ಕಿ ಘಟಕ

ಶೈಕ್ಷಣಿಕ ಮಾರ್ಗದರ್ಶನ ಶಿಬಿರ

ಮುಲ್ಕಿ :- ದಿನಾಂಕ 08.03.2022 ರಂದು ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಮುಲ್ಕಿಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳಿಗೆ ಶಾಲೆಯ ಸಭಾಂಗಣದಲ್ಲಿ ಜೇಸಿ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ರವರಿಂದ ಶೈಕ್ಷಣಿಕ ಮಾರ್ಗದರ್ಶನ ಶಿಬಿರವು ನಡೆಯಿತು.

ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತಾನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ರಾದ ಉದಯ ಅಮೀನ್ ಮಟ್ಟು”ನನ್ನ ಮಾತೃ ಸಂಸ್ಥೆ ಯಾಗಿರುವ ಮುಲ್ಕಿ ಘಟಕವು ನಮ್ಮ ಸಂಸ್ಥೆಯ ಧೇಯೋದ್ದೇಶದಂತೆ ವಿದ್ಯೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡುತ್ತಾ ಬಂದಿದೆ.
ಇಲ್ಲಿನ ವಿಧ್ಯಾರ್ಥಿಗಳಿಗೆ ಪ್ರತಿ ವರ್ಷವೂ ವಿವಿಧ ತರಭೇತಿ ಕಾರ್ಯಾಗಾರಗಳನ್ನು ಆಯೋಜಿಸುತ್ತಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನವನ್ನು ನೀಡಿ ವಿಧ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಫಲಿತಾಂಶ ಪಡೆಯುವಲ್ಲಿ ಉತ್ತಮ ಸಹಕಾರಿಯಾಗಲಿದೆ, ಈ ಕಾರ್ಯಕ್ರಮ
ನಿಮ್ಮ ಶೈಕ್ಷಣಿಕ ಬದುಕಿಗೂ ಪೂರಕವಾಗಲೆಂದು ವಿಧ್ಯಾರ್ಥಿಗಳಿಗೆ ಶುಭ ಕೋರಿದರು. ಮುಖ್ಯ ಆತಿಥಿಗಳಾಗಿ ಉಪಸ್ಥಿತರಿದ್ದ ಶಾಲೆಯ ಆಡಳಿತಾಧಿಕಾರಿಯಾಗಿರುವ ವಸಂತ್ ಕುಮಾರ್ ರವರು ಯುವವಾಹಿನಿ ಮುಲ್ಕಿ ಘಟಕವು ನಮ್ಮ ವಿದ್ಯಾಸಂಸ್ಥೆಯ ಜೊತೆಗೆ ಅನ್ಯೋನ್ಯವಾದ ಸಂಬಂಧವನ್ನು ಹೊಂದಿದ್ದು, ವಿಧ್ಯಾರ್ಥಿಗಳ ಶೈಕ್ಷಣಿಕತೆಗೆ ಪೂರಕವಾದ ಕಾರ್ಯಕ್ರಮವನ್ನು ಹಮ್ಮಿಕೊಂಡು ಬಂದಿರುವುದು ಇದಕ್ಕೆ ನಮ್ಮ ವಿಧ್ಯಾರ್ಥಿಗಳು ಸ್ಪಂದಿಸುತ್ತಾ ಬಂದಿರುವುದು ಸಂತಸದ ವಿಷಯ ಎಂದು ತಿಳಿಸಿ ಶುಭ ಹಾರೈಸಿದರು.

ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿಯಾಗಿರುವ ಬಾಲಚಂದ್ರ ಸನಿಲ್ ರವರು ರಾಜೇಂದ್ರ ಭಟ್ ರವರ ತರಬೇತಿಯ ವಿಶೇಷತೆಯನ್ನು ಬಣ್ಣಿಸಿದರು. ಘಟಕದ ವಿಧ್ಯಾರ್ಥಿ ಸಂಘಟನಾ ನಿರ್ದೇಶಕಿಯಾಗಿರುವ ವಿನಯ ಕಿಲ್ಪಾಡಿ ಹಾಗೂ ಶಿಕ್ಷಕಿ ಲೋಲಾಕ್ಷಿ ಪರಮಾನಂದ ಸಾಲ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಅವರಿಗೆ ಹೂವು ನೀಡಿ ಶುಭಾಶಯ ಕೋರಲಾಯಿತು. ಶಾಲಾ ವಿಧ್ಯಾರ್ಥಿನಿಯರು ಪ್ರಾರ್ಥಿಸಿದರು,
ಘಟಕದ ಅಧ್ಯಕ್ಷ ರಾದ ಭರತೇಶ್ ಅಮೀನ್ ಮಟ್ಟು ಸ್ವಾಗತಿಸಿದರು. ಶ್ರೀ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದೀಶ್ ಅಮೀನ್ ಧನ್ಯವಾದ ಸಮರ್ಪಿಸಿ, ಮಾಜಿ ಅಧ್ಯಕ್ಷರಾದ ವಿಜಯ ಕುಮಾರ್ ಕುಬೆವೂರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!