Yuvavahini

FEB 01, 2022 3.45 PM IST

ಯುವವಾಹಿನಿ (ರಿ.) ಮಂಗಳೂರು ಘಟಕದ

ಪದಗ್ರಹಣ ಸಮಾರಂಭ

ಮಂಗಳೂರು:- ದಿನಾಂಕ 01.02 2022 ರಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಪದಗ್ರಹಣ ಸಮಾರಂಭವು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಸಮಾರಂಭಕ್ಕೆ ಭಜನೆ ಹಾಗೂ ಗುರುಪೂಜೆಯೊಂದಿಗೆ ಚಾಲನೆ ನೀಡಲಾಯಿತು. ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಎಸ್ಪಿನ್ ವಾಲ್ ಮತ್ತು ಕಂಪನಿ ಲಿಮಿಟೆಡ್ ಮಂಗಳೂರು ಇದರ ಜನರಲ್ ಮನೇಜರ್ ಆಗಿರುವ ಎಮ್.ಶೇಖರ ಪೂಜಾರಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯಅತಿಥಿಗಳಾಗಿ ಡಾ. ಕಿರಣ್ ಕುಮಾರ್ ಪಿ ಕೆ. ರಾಜ್ಯಾಧ್ಯಕ್ಷರು, ಭಾರತೀಯ ಮನೋವೈದ್ಯಕೀಯ ಸಂಘ, ಕರ್ನಾಟಕ ತುಳು ರಂಗಭೂಮಿ ಕಲಾವಿದ ಸತೀಶ್ ಪೂಜಾರಿ ಬಂದಲೆ ಉಪಸ್ಥಿತರಿದ್ದು ಉತ್ತಮ ಕಾರ್ಯಕ್ರಮ ಮಾಡಿದ ತಂಡಕ್ಕೆ ಅಭಿನಂದನೆ ಸಲ್ಲಿಸಿ, ನೂತನ ತಂಡಕ್ಕೆ ಶುಭ ಹಾರೈಸಿದರು. 2021- 22ರ ನೂತನ ಅಧ್ಯಕ್ಷರು, ಪದಾಧಿಕಾರಿಗಳಿಗೆ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರು ಪ್ರಮಾಣ ವಚನ ಬೋಧಿಸಿ, ನೂತನ ತಂಡಕ್ಕೆ ಶುಭಹಾರೈಸಿದರು.

ನೂತನ ಅಧ್ಯಕ್ಷರಾಗಿ ಗಣೇಶ್ ವಿ. ಕೋಡಿಕಲ್ ಮತ್ತು ಕಾರ್ಯದರ್ಶಿಯಾಗಿ ಅಶೋಕ ಅಂಚನ್. ಕೋಡಿಕಲ್ ಮತ್ತು ತಂಡ ಪ್ರಮಾಣ ವಚನ ಸ್ವೀಕರಿಸಿದರು. ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತವಾದ ಸಾಧನೆಯನ್ನು ಮಾಡಿರುವ ಡಾ. ಕಿರಣ್ ಪಿ ಕೆ. ಹಾಗೂ ಅವರ ಧರ್ಮಪತ್ನಿಯವರನ್ನು ಸನ್ಮಾನಿಸಲಾಯಿತು. ವರದಿ ಸಾಲಿನಲ್ಲಿ ಘಟಕಕ್ಕೆ ಸಹಕಾರ ನೀಡಿರುವ ದೇವೇಂದ್ರ ಕೋಟ್ಯಾನ್ ದಂಪತಿಗಳು ಮತ್ತು ಶ್ರೀನಿವಾಸ್ ಪೂಜಾರಿ ದಂಪತಿಗಳು ಹಾಗೂ ಯೋಗೀಶ್ ಕೋಡಿಕಲ್, ಬೋಜ ಪೂಜಾರಿ, ಗೋಪಾಲ ಪೂಜಾರಿ, ಕಾರ್ಯದರ್ಶಿಯವರಾದ ನಾಗೇಶ ಅಮೀನ್ ರವರನ್ನು ಅಧ್ಯಕ್ಷರು ಅತ್ಯಂತ ಆದರಪೂರ್ವಕವಾಗಿ ಗೌರವಿಸಿದರು. ಪ್ರಸ್ತುತ ವರ್ಷ ಘಟಕವನ್ನು ಮುನ್ನಡೆಸಿದ ಅಧ್ಯಕ್ಷರಾದ ಹರೀಶ್ ಪಚ್ಚನಾಡಿ ದಂಪತಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹರೀಶ್ ಪಚ್ಚನಾಡಿಯವರು ಪ್ರಸ್ತುತ ವರ್ಷದಲ್ಲಿ ತಮಗೆ ಸಹಕಾರ ನೀಡಿದ ಎಲ್ಲಾ ಪದಾಧಿಕಾರಿಗಳಿಗೆ ಹಸಿರೇ ಉಸಿರು ಎಂಬ ಚಿಂತನೆಯೊಂದಿಗೆ ಆಮ್ಲಜನಕ ನೀಡುವ ಸಸಿಗಳನ್ನು ಸ್ಮರಣಿಕೆಯಾಗಿ ನೀಡಿದರು. ಗುರು ಸ್ತೋತ್ರದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಹರೀಶ್ ಪಚ್ಚನಾಡಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಅಶೋಕ್ ಅಂಚನ್ ಕೋಡಿಕಲ್ ವಂದಿಸಿದರು. ಸಹಭೋಜನದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!