Yuvavahini

MAR 20, 2022 4.53 PM IST

ಯುವವಾಹಿನಿ (ರಿ.) ಕಡಬ ಘಟಕ‌

ವಿಶ್ವ ಮಹಿಳಾ ದಿನಾಚರಣೆ

ಯುವವಾಹಿನಿ (ರಿ.) ಕಡಬ ಘಟಕ‌ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಕಡಬ, ಮರ್ದಾಳ ವಲಯದ ವತಿಯಿಂದ ಕಡಬ ದುರ್ಗಾಂಬಿಕಾ ಸಭಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮವು ದಿನಾಂಕ 20.03.2022ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ ಪೂಜಾರಿ ನೆರವೇರಿಸಿ ಮಾತನಾಡಿ ಮಹಿಳೆಯರು ಕೂಡಾ ಸಂಘಟನಾತ್ಮಕವಾಗಿ ಸಮಾಜಮುಖಿ ಕಾರ್ಯದಲ್ಲಿಯ ತೊಡಗಿಸಿಕೊಂಡಾಗ ನಾಯಕತ್ವವನ್ನು ಬೆಳೆಸಿಕೊಳ್ಳಲು ಸಾಧ್ಯ ಹಾಗೂ ಈ ದಿನ ಗೌರವ ಅಭಿನಂದನೆಗೆ ಭಾಜನರಾದ ಡಾ.ರವಿ ಕಕ್ಯೆಪದವು ಇವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರು ತಾಲ್ಲೂಕು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಚಂದ್ರಕಲಾ ಮುಕ್ವೆ ಮಾತನಾಡಿ ಇಂದಿನ ಕಾಲ‌ ಘಟ್ಟದಲ್ಲಿ ಮಹಿಳೆಯರು ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಗೈದಿದ್ದಾರೆ ಮುಂದಿನ ದಿನಗಳಲ್ಲಿ ಸಂಘಟನೆಯ ಮೂಲಕ ತೊಡಗಿಸಿಕೊಂಡು ಇನ್ನಷ್ಟು ಕಾರ್ಯಗಳೊಂದಿಗೆ ಮುನ್ನಡೆಯೊಣ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಯುವ ಉದ್ಯಮಿ ಕೊಡುಗೈದಾನಿ ಸಮಾಜಮುಖಿ ಸೇವೆಗಳ ಸೇವಕರಾಗಿ ಇತ್ತೀಚಿಗೆ ಗೌರವ ಡಾಕ್ಟರೇಟ್ ಪದವಿ ಪಡೆದ ಡಾ.ರವಿ ಕಕ್ಯೆ ಪದವು ಇವರನ್ನು ಇಂದಿನ ಕಾರ್ಯಕ್ರಮದಲ್ಲಿ ಮಾಜಿ ವಲಯ ಸಂಚಾಲಕರಾದ ಜಿನ್ನಪ್ಪ ಸಾಲ್ಯಾನ್ ಮತ್ತು ಅತಿಥಿಗಳು ಗೌರವಿಸಿ ಅಭಿನಂದಿಸಿದರು. ಗೌರವ ಸ್ವೀಕರಿಸಿ ಮಾತನಾಡಿದ ಡಾ.ರವಿಕಕ್ಯೆಪದವು ಇಂದಿನ ಸನ್ಮಾನವು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಾಜ ಸೇವೆ ಮಾಡಲು ದಾರಿಯಾಗಿದೆ, ಅಭಿನಂದನೆ ಸಲ್ಲಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು. ಇವರ ಪರಿಚಯ ಪತ್ರವನ್ನು ದೀಕ್ಷಿತ್ ಪಾಣೆಮಜಲು ವಾಚಿಸಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ ಹಾಗೂ
ಘಟಕದ ಮಹಿಳಾ ನಿರ್ದೇಶಕಿ ಅನಿತಾ ಕುತ್ಯಾಡಿ ಸಂದರ್ಭೋಚಿತವಾಗಿ ಮಾತನಾಡಿದರು. ಕಡಬ ಘಟಕದ ಅಧ್ಯಕ್ಷರಾದ ಪ್ರವೀಣ್ ಓಂಕಲ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ವಲಯ ಸಂಚಾಲಕರಾದ ಜಿನ್ನಪ್ಪ ಸಾಲ್ಯಾನ್, ಕಡಬ ವಲಯದ ಸಂಚಾಲಕರಾದ ಜಯಪ್ರಕಾಶ್ ದೋಳ ಹಾಗೂ ಬಿಲ್ಲವ ಸಂಘ ಕಡಬ ವಲಯದ ಮಹಿಳಾ ಅಧ್ಯಕ್ಷರಾದ ಗೀತಾ ಉಂಡಿಲ, ಯುವವಾಹಿನಿಯ ಪದಾಧಿಕಾರಿಗಳು ಹಾಗೂ ಬಿಲ್ಲವ ಸಂಘದ ಕಡಬ ,ಮರ್ದಾಳ ವಲಯದ ಸದಸ್ಯರು ಹಾಗೂ ಘಟಕದ ಕಾರ್ಯದರ್ಶಿ ಕೃಷ್ಣಪ್ಪ ಅಮೈ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ತೃಸ್ವಿ ಪಾಲಪ್ಪೆ ಪ್ರಾರ್ಥಿಸಿದರು, ನಯನ ನೆಕ್ಕಿತಡ್ಕ ಸ್ವಾಗತಿಸಿ, ಸುಪ್ರೀತಾ ಪಾಲಪ್ಪೆ ವಂದಿಸಿದರು. ಶಾಲಿನಿ ಕುತ್ಯಾಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!