ಮಂಗಳೂರು : ದಿನಾಂಕ 03.04.2022 ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಸಾರಥ್ಯದಲ್ಲಿ ಯುವವಾಹಿನಿ(ರಿ.) ಕಂಕನಾಡಿ ಹಾಗೂ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ “ಹೊಂಬೆಳಕು – 2022″ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದೊಂದಿಗೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ) ಕಾರ್ಯಕ್ರಮ ಜರಗಿತು. ಲಯನ್ಸ್ ಜಿಲ್ಲಾ ಗವರ್ನರ್ ರವರ ಜಿಲ್ಲಾ ಸಂಯೋಜಕಿ ಲಯನ್ ಭಾರತಿ ಬಿ .ಎಮ್ . ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರು ಸ್ವಾವಲಂಬನೆ ಬದುಕು ಸಾಗಿಸಲು ಇಂತಹ ಕಾರ್ಯಕ್ರಮಗಳೊಂದಿಗೆ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ.ಸಾಮಾಜಿಕ ಸೇವಾ ಸಂಸ್ಥೆಗಳು ಇಂತಹ ಕಾರ್ಯಕ್ಕೆ ಮುಂದಾದಲ್ಲಿ ಸ್ವ ಉದ್ಯೋಗ ಮಾಡುವ ಮಹಿಳೆಯರಿಗೆ ಒಳ್ಳೆಯ ಮಾರುಕಟ್ಟೆ ನೀಡಿದಂತಾಗುತ್ತದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಹಾಯಕ ನಿರ್ದೇಶಕರುಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಇದರ ಮುಖ್ಯಸ್ಥೆ ಶ್ರುತಿ ಜಿ. ಕೆ .ಮಾತನಾಡಿ ಸರಕಾರ ಸ್ವ ಉದ್ಯೋಗ ಮಾಡುವ ಮಹಿಳೆಯರಿಗೆ ನೀಡುವ ವಿವಿಧ ಸವಲತ್ತುಗಳು ಹಾಗೂ ಅದಕ್ಕೆ ಬೇಕಾಗುವ ದಾಖಲೆಗಳ ವಿವರ ನೀಡಿದರು. ಅಖಿಲ ಭಾರತ ಬಿಲ್ಲವರ ಯೂನಿಯನ್ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್ ಸುವರ್ಣ ಮಹಿಳೆಯರು ಸಾಮಾಜಿಕವಾಗಿ ಮಾತ್ರವಲ್ಲದೇ ರಾಜಕೀಯ ಕ್ಷೇತ್ರದಲ್ಲೂ ಮುಂದೆ ಬರಬೇಕು ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ದ. ಕ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರು ಚಂಚಲಾ ತೇಜೋಮಯ, ರವರು ಮಾತನಾಡಿ ಯುವವಾಹಿನಿಯಲ್ಲಿ ಮಹಿಳಾ ಘಟಕಗಳ ಸಂಖ್ಯೆ ಜಾಸ್ತಿಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ,ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ಕಾರ್ಯದರ್ಶಿ ಸುಮಾ ವಸಂತ್, ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ ಗೋಪಾಲಕೃಷ್ಣ, ಕಂಕನಾಡಿ ಘಟಕದ ಅಧ್ಯಕ್ಷೆ ನಯನಾ ಸುರೇಶ್ ಉಪಸ್ಥಿತರಿದ್ದರು. ಸುಮಾ ವಸಂತ್ ಸ್ವಾಗತಿಸಿದರು. ನಯನಾ ಸುರೇಶ್ ಧನ್ಯವಾದವಿತ್ತರು. ವಿದ್ಯಾರಾಕೇಶ್ ಕಾರ್ಯಕ್ರಮ ನಿರೂಪಿಸಿದರು.ಈ ಕಾರ್ಯಕ್ರಮದಲ್ಲಿ ನಲ್ವತ್ತಕ್ಕೂ ಹೆಚ್ಚು ಮಳಿಗೆಗಳ ಮೂಲಕ ಮಹಿಳೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮೇಳದಲ್ಲಿ ಪ್ರದರ್ಶಿಸಿ ಮಾರಾಟ ಮಾಡಿದ್ದಾರೆ.