Yuvavahini

APR 10, 2022 7.42 AM IST

ಯುವವಾಹಿನಿ ಇನ್ನಷ್ಟು ಬಲಿಷ್ಟಗೊಳ್ಳುವಲ್ಲಿ ಚೈತನ್ಯ 2022 ಮಹತ್ತರ ಪಾತ್ರ ವಹಿಸಲಿದೆ : ಉದಯ ಅಮಿನ್ ಮಟ್ಟು

ಮಾಣಿ : ಚೈತನ್ಯ 2022 ತರಬೇತಿ ಕಾರ್ಯಾಗಾರವು ಯುವವಾಹಿನಿ ಸಂಘಟನೆಯು ಇನ್ನಷ್ಟು ಬಲಗೊಳ್ಳಲು ಸಹಕಾರಿಯಾಗಲಿದೆ ಹಾಗೂ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಯುವವಾಹಿನಿ ಮಾಣಿ ಘಟಕದ ಅಚ್ಚುಕಟ್ಟುತನದ ಆತಿಥ್ಯ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು.

ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವ್ಯಕ್ತಿತ್ವ ವಿಕಸನ‌ ನಿರ್ದೇಶಕರಿಗೆ ಮಾಣಿ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಚೈತನ್ಯ-2022 ತರಬೇತಿ ಕಾರ್ಯಾಗಾರದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಚೈತನ್ಯ-2022 ರ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ,ಇಂತಹ ತರಬೇತಿಗಳು ಸಂಘಟನಾ ಬದುಕಿಗೆ ಮತ್ತಷ್ಟು ಸ್ಪೂರ್ತಿ ನೀಡಲಿದೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ರಿ ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯರವರು ನುಡಿದರು . ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಈ ಸಾಲಿನ,ಘಟಕದ ಕಾರ್ಯಕ್ರಮ, ಸಭೆಗಳ ವಿವರ ಮತ್ತು ಘಟಕದ ಸದಸ್ಯರ ಬರಹಗಳನ್ನು ಒಳಗೊಂಡ “ಯುವ ಸಿಂಚನ” ಸಂಚಿಕೆಯ ಮೊದಲ ಪ್ರತಿಯನ್ನು ಈ ಕಾರ್ಯಕ್ರಮದಲ್ಲಿ ಅತಿಥಿಗಳು ಬಿಡುಗಡೆಗೊಳಿಸಿದರು . ಸಮಾರಂಭದಲ್ಲಿ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು,ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಸತೀಶ್ ಕಿಲ್ಪಾಡಿ, ವ್ಯಕ್ತಿತ್ವ ವಿಕಸನ ನಿರ್ದೇಶಕರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಲ ಹಾಗೂ ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚಿನ್ ಎಂ. ಉಪಸ್ಥಿತರಿದ್ದರು.

ಕೇಂದ್ರ ಸಮಿತಿಯ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮೇಶ್ ಪೂಜಾರಿ ಮುಜಲ ರವರು ಸ್ವಾಗತಿಸಿದರು,ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚಿನ್ ಎಂ ವಂದಿಸಿದರು, ಘಟಕದ ಸದಸ್ಯೆ ಜಯಶ್ರೀ ರವರು ಪ್ರಾರ್ಥಿಸಿದರು,ಘಟಕದ ಕಾರ್ಯದರ್ಶಿ ರೇಣುಕಾ ಕಣಿಯೂರುರವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!